ಈ ಜನಪ್ರಿಯ SAMSUNG ಮೊಬೈಲ್ ಬೆಲೆಯಲ್ಲಿ ಜಬರ್ದಸ್ತ್ ಇಳಿಕೆ; ಹಬ್ಬದ ಉಳಿತಾಯ!
ಫ್ಲಿಪ್‌ಕಾರ್ಟ್ ದೀಪಾವಳಿ ಹಬ್ಬದ ಅಂಗವಾಗಿ ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಮಾಡಿದೆ. ಆ ಪೈಕಿ ಸ್ಯಾಮ್‌ಸಂಗ್ ಸಂಸ್ಥೆಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE 5G ಫೋನ್ ಸಖತ್ ಡಿಸ್ಕೌಂಟ್ ಬೆಲೆ ಪಡೆದುಕೊಂಡಿದೆ. ಅಂದಹಾಗೆ ಈ ಫೋನ್ 8GB RAM + 256GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ವೆಬ್‌ಸೈಟ್ ಆಯೋಜಿಸಿರುವ ದೀಪಾವಳಿ ಸೇಲ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE 5G (SAMSUNG Galaxy S23 FE) ಫೋನ್ ಶೇ. 62% ರಷ್ಟು ನೇರ ಡಿಸ್ಕೌಂಟ್ ದರಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 29,999ರೂ. ಗಳ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

ಅಂದಹಾಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE 5G ಮೊಬೈಲ್ 4500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯವನ್ನು ಒಳಗೊಂಡಿದೆ. ಇದರ ಜೊತೆಗೆ ಈ ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE 5G - ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಮೊಬೈಲ್ 6.4 ಇಂಚಿನ ಡೈನಾಮಿಕ್ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ವರೆಗೆ ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು 83.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಪವರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಮೊಬೈಲ್ ಟ್ರಿಪಲ್ ರಿಯರ್ ಫ್ಲೋಟಿಂಗ್ ಕ್ಯಾಮೆರಾ ಸಿಸ್ಟಮ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಅನ್ನು ಹೊಂದಿದೆ. ತೃತೀಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಮೊಬೈಲ್ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಅನ್ನು ಹೊಂದಿದೆ. ಇದು 30 ನಿಮಿಷಗಳಲ್ಲಿ ಫೋನ್ ಅನ್ನು ಶೂನ್ಯದಿಂದ 50% ಚಾರ್ಜಿಂಗ್ ಮಾಡಲಿದೆ.
ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, GPS, NFC ಮತ್ತು ಬ್ಲೂಟೂತ್ 5.3 ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP68 ರೇಟಿಂಗ್‌ನೊಂದಿಗೆ ಆಗಮಿಸುತ್ತದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಮೊಬೈಲ್ ಕ್ರೀಮ್, ಗ್ರ್ಯಾಫೈಟ್, ಮಿಂಟ್ ಮತ್ತು ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ.


Click it and Unblock the Notifications








