ಎಂಟ್ರಿಗೆ ಸಿದ್ಧವಾಗಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE; ಹೇಗಿರಲಿದೆ ಗೊತ್ತಾ ಇದರ ಡಿಸೈನ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ಶೀಘ್ರದಲ್ಲೇ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಪರಿಚಯಿಸುವ ಸೂಚನೆ ನೀಡಿದೆ. ಇದನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಎಂದು ಹೆಸರಿಸಲಾಗಿದೆ. ಸದ್ಯ ಈ ಸ್ಮಾರ್ಟ್‌ಫೋನಿನ ಇಮೇಜ್‌ಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಇದರಿಂದ ಟೆಕ್ ವಲಯದಲ್ಲಿ ಗ್ಯಾಲಕ್ಸಿ S23 FE ಬಗ್ಗೆ ಹೊಸ ನಿರೀಕ್ಷೆ ಸೃಷ್ಟಿಯಾಗಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ ಸದ್ಯದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್‌ನ ಲೈನ್ ಇಮೇಜ್ ರಿವೀಲ್ ಆಗಿದ್ದು, ಫೋನ್ ಪ್ರಿಯರಲ್ಲಿ ಹೊಸ ನಿರೀಕ್ಷೆ ಹುಟ್ಟುಹಾಕಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಕೂಡ ಬಹಿರಂಗವಾಗಿದ್ದು, ಸ್ಯಾಮ್‌ಸಂಗ್ ಎಕ್ಸಿನೋಸ್ 2200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಮೇಲೆ ಏನೆಲ್ಲಾ ನಿರೀಕ್ಷೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್‌ನ ಲೈವ್ ಚಿತ್ರವು ಸೋರಿಕೆಯಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್ ವಾಯರ್‌ಲೆಸ್ ಚಾರ್ಜಿಂಗ್ ಡೇಟಾಬೇಸ್‌ನಲ್ಲಿ ಗುರುತಿಸಿಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್ 4.4W ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ಹೇಳಲಾಗಿದೆ. ಇದಲ್ಲದೆ ಸ್ಮಾರ್ಟ್‌ಫೋನ್ 2.5D ಡಿಸ್‌ಪ್ಲೇ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಅಷ್ಟೇ ಅಲ್ಲ ಸೋರಿಕೆಯಾದ ಇಮೇಜ್ ಪ್ರಕಾರ ಈ ಫೋನ್‌ನ ಹಿಂಭಾಗದ ಪ್ಯಾನಲ್ ಸಮನಾಗಿ ಸಮತಟ್ಟಾಗಿದೆ ಎಂದು ನಿರೀಕ್ಷಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಡಿಸ್‌ಪ್ಲೇ ನಿರೀಕ್ಷೆ ಏನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 411 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಪ್ರೊಸೆಸರ್ ಕುತೂಹಲ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಎಕ್ಸಿನೋಸ್ 2200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ v12 ಬೆಂಬಲದೊಂದಿಗೆ ಬರಲಿದ ಎಂದು ಹೇಳಲಾಗಿದೆ. ಇದಲ್ಲದೆ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿರಲಿದೆ ಎಂದು ಅಂದಾಜಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಕ್ಯಾಮೆರಾ ಸೆಟ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ 4,500mAh ಬ್ಯಾಟರಿಯಿಂದ ಬೆಂಬಲಿತವಾಗಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್,ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಹಾಗೂ ಲಭ್ಯತೆಯ ವಿವರಗಳು ಸದ್ಯದಲ್ಲೇ ಬಹಿರಂಗವಾಗುವ ಸಾಧ್ಯತೆಯಿದೆ.
ಇದಲ್ಲದೆ ಇತ್ತೀಚಿಗೆ ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ತನ್ನ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಈಗಾಗಲೇ ಭಾರಿ ಡಿಮ್ಯಾಂಡ್ ಕ್ರಿಯೆಟ್ ಮಾಡಿದ್ದು, ಸನ್ಸೇಷನಲ್ ಕ್ರಿಯೆಟ್ ಸೃಷ್ಟಿಸಿದೆ. ಇನ್ನು ಈ ಫೋನ್ 7.6 ಇಂಚಿನ ಇನರ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು AMOLED 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇ ಜೊತೆಗೆ 1Hz ಮತ್ತು 120Hz ನಡುವಿನ ಅಡಾಪ್ಟಿವ್ ರಿಫ್ರೆಶ್ ರೇಟ್ ಒಳಗೊಂಡಿದೆ. ಆದರೆ ಈ ಸ್ಮಾರ್ಟ್‌ಫೋನ್‌ನ ಕವರ್ ಡಿಸ್‌ಪ್ಲೇ 6.2 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಆಗಿದೆ. ಇದು 2,316 x 904 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನಬ್ ಸಾಮರ್ಥ್ಯವನ್ನು ನೀಡಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ One UI 5.1.1 ನಲ್ಲಿ ಕಾರ್ಯನಿರ್ವಹಿಸುತ್ತದೆ.


Click it and Unblock the Notifications








