Home
ಸುದ್ದಿಜಾಲ

ವೇಗದ ಪ್ರೊಸೆಸರ್‌ ಇರುವ ಈ ಸ್ಯಾಮ್‌ಸಂಗ್‌ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣದಲ್ಲಿ ಬ್ಲ್ಯಾಕ್‌ ಫ್ರೈಡ್‌ ಮಾರಾಟ ಪ್ರಾರಂಭವಾಗಲಿದ್ದು, ಈ ಮಾರಾಟದಲ್ಲಿ ಮೊಬೈಲ್‌ಗಳು ಆಕರ್ಷಕ ಆಫರ್‌ನಲ್ಲಿ ಕಾಣಿಸಿಕೊಳ್ಳಲಿವೆ. ಈ ಮಾರಾಟದಲ್ಲಿ ಹೊಸ ಮೊಬೈಲ್ ಖರೀದಿಸುವ ಗ್ರಾಹಕರು ಲಭ್ಯ ಇರುವ ಆಯ್ದ ಬ್ಯಾಂಕ್‌ ಆಫರ್‌ ಪಡೆದುಕೊಂಡರೆ, ಮತ್ತಷ್ಟು ಡಿಸ್ಕೌಂಟ್‌ ಪಡೆಯಬಹುದು. ಇದೀಗ ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE (SAMSUNG Galaxy S23 FE) ಸ್ಮಾರ್ಟ್‌ಫೋನ್‌ ಸಖತ್‌ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.

ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್‌ ವೆಬ್‌ಸೈಟ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಫೋನ್ (SAMSUNG Galaxy S23 FE) ಮೊಬೈಲ್ ಶೇ. 56% ರಷ್ಟು ನೇರ ಡಿಸ್ಕೌಂಟ್‌ ಪಡೆದಿದೆ. ಈ ಫೋನಿನ 8 GB RAM + 128GB ಸ್ಟೋರೇಜ್‌ ವೇರಿಯಂಟ್‌ ಅನ್ನು ಖರೀದಿದಾರರು 34,999ರೂ. ಗಳ ಕೊಡುಗೆಯ ದರದಲ್ಲಿ ಖರೀದಿ ಮಾಡಬಹುದು. ಅಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್‌ಗಳ ಡಿಸ್ಕೌಂಟ್‌ ಪಡೆದುಕೊಂಡರೆ, ಇನ್ನಷ್ಟು ಕೊಡುಗೆ ಸಹ ದೊರೆಯುತ್ತದೆ.

ವೇಗದ ಪ್ರೊಸೆಸರ್‌ ಇರುವ ಈ ಸ್ಯಾಮ್‌ಸಂಗ್‌ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಮೊಬೈಲ್‌ 8GB RAM + 256GB ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಇದರ ಜೊತೆಗೆ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ವೇಗವನ್ನು ಸಹ ಪಡೆದಿದೆ. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮಾಹಿತಿ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಫೋನ್‌ 6.4 ಇಂಚಿನ ಡೈನಾಮಿಕ್ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಪಡೆದಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ವರೆಗೆ ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು 83.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದ ಜೊತೆಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM + 256GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ಸೆನ್ಸಾರ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಫೋನ್‌ ಟ್ರಿಪಲ್ ರಿಯರ್ ಫ್ಲೋಟಿಂಗ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾವೈಡ್‌ ಲೆನ್ಸ್‌ ಅನ್ನು ಪಡೆದಿದೆ. ತೃತೀಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದು 30 ನಿಮಿಷಗಳಲ್ಲಿ ಫೋನ್ ಅನ್ನು ಶೂನ್ಯದಿಂದ 50% ಚಾರ್ಜಿಂಗ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, GPS, NFC ಮತ್ತು ಬ್ಲೂಟೂತ್ 5.3 ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP68 ರೇಟಿಂಗ್‌ ಹೊಂದಿದೆ.

Best Mobiles in India

English summary
Samsung Galaxy S23 FE now available at biggest price drop. check out price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+