ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ! ಏನಿದು ಪ್ಲೋಟಿಂಗ್ ಕ್ಯಾಮೆರಾ ಸಿಸ್ಟಂ!
ಸ್ಮಾರ್ಟ್‌ಫೋನ್ ದಿಗ್ಗಜ ಕಂಪೆನಿ ಸ್ಯಾಮ್‌ಸಂಗ್ ಹೊಸ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದ್ದು, ಆಕರ್ಷಕ ಫೀಚರ್ಸ್‌ಗಳಿಂದ ಗಮನಸೆಳೆದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ ಲಾಂಚ್ ಆಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಫ್ಲೋಟಿಂಗ್ ಕ್ಯಾಮೆರಾ ಸಿಸ್ಟಂ ಅನ್ನು ಒಳಗೊಂಡಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಕ್ರೀಮ್, ಗ್ರ್ಯಾಫೈಟ್, ಮಿಂಟ್ ಮತ್ತು ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಡಿಸ್‌ಪ್ಲೇ ರಚನೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ 6.4 ಇಂಚಿನ ಡೈನಾಮಿಕ್ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ವರೆಗೆ ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇದು 83.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 19.5:9 ರಚನೆಯ ಅನುಪಾತವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಕ್ಯಾಮೆರಾ ಸೆಟ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಫ್ಲೋಟಿಂಗ್ ಕ್ಯಾಮೆರಾ ಸಿಸ್ಟಮ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದು 30 ನಿಮಿಷಗಳಲ್ಲಿ ಫೋನ್ ಅನ್ನು ಶೂನ್ಯದಿಂದ 50% ಚಾರ್ಜಿಂಗ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, GPS, NFC ಮತ್ತು ಬ್ಲೂಟೂತ್ 5.3 ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ ಧೂಳು ಮತ್ತು ಸ್ಪ್ಲಾಶ್ ಪ್ರತಿರೋಧಕ್ಕಾಗಿ IP68 ರೇಟಿಂಗ್‌ನೊಂದಿಗೆ ಆಗಮಿಸುತ್ತದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ $599 (ಸುಮಾರು 49,800ರೂ)ಬೆಲೆಯನ್ನು ಹೊಂದಿದೆ. ಇದನ್ನು ಕ್ರೀಮ್, ಗ್ರ್ಯಾಫೈಟ್, ಮಿಂಟ್ ಮತ್ತು ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ. ಈ ಹ್ಯಾಂಡ್‌ಸೆಟ್ ಇಂಡಿಗೋ ಮತ್ತು ಟ್ಯಾಂಗರಿನ್ ಕಲರ್‌ವೇಸ್‌ನಲ್ಲಿರುವ ಸ್ಯಾಮ್‌ಸಂಗ್ ಅಧಿಕೃತ ಸೈಟ್‌ನಲ್ಲಿ ಪ್ರತ್ಯೇಕವಾಗಿ ಲಭ್ಯವಿರುತ್ತದೆ.


Click it and Unblock the Notifications








