ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಮತ್ತು S23 ಪ್ಲಸ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ? ಬೆಲೆ ಎಷ್ಟು?

|

ಸ್ಯಾಮ್‌ಸಂಗ್‌ ಕಂಪೆನಿಯ ಬಹು ನಿರೀಕ್ಷಿತ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್‌ ಫೆ.1 ರ ತಡರಾತ್ರಿ ನಡೆದಿದೆ. ಈ ಈವೆಂಟ್‌ನಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ S23 ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಗ್ಯಾಲಕ್ಸಿ S23, ಗ್ಯಾಲಕ್ಸಿ S23 + ಮತ್ತು ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಮತ್ತು S23 ಪ್ಲಸ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸರಣಿಯನ್ನು ಅನಾವರಣಗೊಳಿಸಿದೆ. ಗ್ಯಾಲಕ್ಸಿ S23 ಸರಣಿಯ ಸ್ಮಾರ್ಟ್‌ಫೋನ್‌ಗಳು ಗೊರಿಲ್ಲಾ ಗ್ಲಾಸ್‌ ವಿಕ್ಟಸ್‌ 2 ಪ್ರೊಟೆಕ್ಷನ್‌ ಹೊಂದಿರುವ ಮೊದಲ ಸ್ಮಾರ್ಟ್‌ಫೋನ್‌ ಎನಿಸಿಕೊಂಡಿವೆ. ಇನ್ನು ಈ ಸರಣಿಯಲ್ಲಿ ಗ್ಯಾಲಕ್ಸಿ S23 ಮತ್ತು ಗ್ಯಾಲಕ್ಸಿ S23 ಪ್ಲಸ್‌ ಸ್ಮಾರ್ಟ್‌ಫೋನ್‌ಗಳು ಗ್ಯಾಲಕ್ಸಿ S23 ಅಲ್ಟ್ರಾಗಿಂತ ಭಿನ್ನವಾದ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಜೊತೆಗೆ ಅತ್ಯಾಕರ್ಷಕ ಫಿಚರ್ಸ್‌ಗಳಿಂದ ಗಮನಸೆಳೆದಿವೆ. ಹಾಗಾದ್ರೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಫೀಚರ್ಸ್‌ ಹೇಗಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡೈನಾಮಿಕ್‌ ಅಮೋಲೆಡ್‌ 2X ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದ್ದು, 48Hz ತನಕ ಇಳಿಸಬಹುದಾಗಿದೆ. ಇನ್ನು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಮತ್ತು S23 ಪ್ಲಸ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಕ್ಯಾಮೆರಾ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಮತ್ತು ಮೂರನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಅಪ್‌ಗ್ರೇಡ್‌ ಕ್ಯಾಮೆರಾ ಅಪ್ಲಿಕೇಶನ್ ಅನ್ನು ಹೊಂದಿದ್ದು, ಇದರ ಮೂಲಕ ಸೆಕೆಂಡಿಗೆ 30 ಫ್ರೇಮ್‌ಗಳಲ್ಲಿ 8K ವೀಡಿಯೊ ರೆಕಾರ್ಡಿಂಗ್ ಮಾಡಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಬ್ಯಾಟರಿ ಸಾಮರ್ಥ್ಯ
ಸ್ಯಾಮ್‌ಸಂಗ್‌ ಗ್ಯಾಲಕ್ಸ S23 ಸ್ಮಾರ್ಟ್‌ಫೋನ್‌ 3,900mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೈರ್ಡ್ ಚಾರ್ಜಿಂಗ್ ಮತ್ತು 15W ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರ ಮೂಲಕ ಬ್ಯಾಟರಿಯನ್ನು ಕೇವಲ 30 ನಿಮಿಷಗಳಲ್ಲಿ 50% ಚಾರ್ಜಿಂಗ್‌ ಮಾಡಬಹುದು ಎಂದು ಸ್ಯಾಮ್‌ಸಂಗ್‌ ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3, Wi-Fi ಡೈರೆಕ್ಟ್ ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಮತ್ತು S23 ಪ್ಲಸ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23+ ಫೀಚರ್ಸ್‌ ಹೇಗಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23+ ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡೈನಾಮಿಕ್‌ ಅಮೋಲೆಡ್‌ 2X ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 48Hz ನಿಂದ 120Hz ವರೆಗಿನ ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಗೇಮ್ ಮೋಡ್‌ನಲ್ಲಿ 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ನೀಡಲಿದೆ. ಇನ್ನು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23+ ಕ್ಯಾಮೆರಾ ಹೇಗಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23+ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಮತ್ತು ಮೂರನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23+ ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23+ ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರ ಮೂಲಕ ಸ್ಮಾರ್ಟ್‌ಫೋನ್‌ ಅನ್ನು ಕೇವಲ 30 ನಿಮಿಷಗಳಲ್ಲಿ 65% ಚಾರ್ಜಿಂಗ್‌ ಮಾಡಬಹುದು ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3 ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 8GB + 128GB ಸ್ಟೋರೇಜ್ ರೂಪಾಂತರದ ಆಯ್ಕೆಯು $799 (ಅಂದಾಜು 65,500ರೂ)ಬೆಲೆ ಹೊಂದಿದೆ. ಇನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23+ ಸ್ಮಾರ್ಟ್‌ಫೋನ್‌ 8GB + 256GB ಸ್ಟೋರೇಜ್ ಆಯ್ಕೆಗೆ $999 (ಸುಮಾರು 81,900ರೂ)ಬೆಲೆಯನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಅನ್ನೊದು (ಫೆಬ್ರವರಿ 2)ರಂದು ಬಹಿರಂಗವಾಗಲಿದೆ.

Best Mobiles in India

English summary
Samsung Galaxy S23+ has plenty of similarities with the regular Galaxy S23. The former also runs on Android 13-based One UI 5.1.know more details in kannada

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X