ಸ್ಯಾಮ್‌ಸಂಗ್‌ನ ಈ ಜನಪ್ರಿಯ ಫೋನ್ ಬೆಲೆಯಲ್ಲಿ 10,000ರೂ. ಇಳಿಕೆ!
ಜನಪ್ರಿಯ ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ S24 ಸರಣಿ ಬಿಡುಗಡೆಯ ಮಾಡುವ ತಯಾರಿಯಲ್ಲಿ ಇದೆ. ಆದರೆ ಹೊಸ ಸರಣಿ ಬಿಡುಗಡೆ ಮಾಡುವ ಮೊದಲೇ ಗ್ರಾಹಕರಿಗೆ ವಾವ್ ಎನಿಸುವ ಸಿಹಿಸುದ್ದಿ ನೀಡಿದೆ. ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಇತ್ತೀಚಿನ ಗ್ಯಾಲಕ್ಸಿ S23+ ಫೋನಿನ ಬೆಲೆಯಲ್ಲಿ ಬರೋಬ್ಬರಿ 10,000ರೂ. ಇಳಿಕೆ ಮಾಡಿದೆ.
ಹೌದು, ಸ್ಯಾಮ್‌ಸಂಗ್ ಸಂಸ್ಥೆಯ ತನ್ನ ಸ್ಯಾಮ್‌ಸಂಗ್ ಗ್ಯಾಲಕ್ಸಿ S23+ ಬೆಲೆಯಲ್ಲಿ 10,000ರೂ. ಇಳಿಕೆ ತಿಳಿಸಿದೆ. ಈ ಫೋನಿನ 8GB + 256GB ಹಾಗೂ 8GB + 512GB ಸ್ಟೋರೇಜ್ ವೇರಿಯಂಟ್ ಬೆಲೆಯಲ್ಲಿಯೂ ಬೆಲೆ ಕಡಿತ ಸಿಗಲಿದೆ. ಬೆಲೆ ಇಳಿಕೆಯಿಂದಾಗಿ ಗ್ಯಾಲಕ್ಸಿ S23+ ಫೋನ್ 8GB + 256GB ವೇರಿಯಂಟ್ 84999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ.

ಅದೇ ರೀತಿ 8GB + 512GB ವೇರಿಯಂಟ್ ಫೋನ್ 94999ರೂ. ಗಳ ದರದಲ್ಲಿ ಖರೀದಿಗೆ ಸಿಗಲಿದೆ. ಇದಲ್ಲದೇ ಆಯ್ದ ಬ್ಯಾಂಕ್ ಕೊಡುಗೆ ಹಾಗೂ ಇತರೆ ರಿಯಾಯಿತಿಗಳು ಸೇರಿದರೆ ಇನ್ನಷ್ಟು ಅಗ್ಗದ ಬೆಲೆಗೆ ಈ ಫೋನ್ ಖರೀದಿಸಬಹುದು. ಹಾಗೆಯೇ ಗ್ಯಾಲಕ್ಸಿ S23 ಫೋನ್ ಬೆಲೆಯಲ್ಲಿಯೂ ಇಳಿಕೆ ಘೋಷಿಸಿದೆ. ಹಾಗದರೇ ಈ ಫೋನಿನ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23+ - ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23+ ಮೊಬೈಲ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 48Hz ನಿಂದ 120Hz ವರೆಗಿನ ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಗೇಮ್ ಮೋಡ್‌ನಲ್ಲಿ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ನೀಡಲಿದೆ. ಇನ್ನು ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23+ ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಮತ್ತು ಮೂರನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23+ ಮೊಬೈಲ್ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದರ ಮೂಲಕ ಸ್ಮಾರ್ಟ್‌ಫೋನ್ ಅನ್ನು ಕೇವಲ 30 ನಿಮಿಷಗಳಲ್ಲಿ 65% ಚಾರ್ಜಿಂಗ್ ಮಾಡಬಹುದು ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3 ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 - ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಮೊಬೈಲ್ 6.1 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಅನ್ನು ಪಡೆದಿದೆ. ಇದು ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.


Click it and Unblock the Notifications








