Home
ಸುದ್ದಿಜಾಲ

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23! ಫೀಚರ್ಸ್‌ ನಿರೀಕ್ಷೆ ಏನು?

ಈ ವರ್ಷದ ಬಹು ನಿರೀಕ್ಷಿತ ಸ್ಮಾರ್ಟ್‌ಫೋನ್‌ಗಳಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಒಂದಾಗಿದೆ. ತನ್ನ ಫೀಚರ್ಸ್‌ ಲೀಕ್‌ ಮೂಲಕ ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಗ್ಯಾಲಕ್ಸಿ S23 ಇದೇ ಫೆಬ್ರವರಿ 1 ರಂದು ಬಿಡುಗಡೆಯಾಗುವುದು ಪಕ್ಕಾ ಆಗಿದೆ. ಈ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಕಂಪನಿಯ ಗ್ಯಾಲಕ್ಸಿ ಅನ್ಪ್ಯಾಕ್ಡ್ ಈವೆಂಟ್‌ನಲ್ಲಿ ಲಾಂಚ್‌ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಹತ್ತಿರವಾಗ್ತಿದ್ದ ಹಾಗೇ ಇದರ ಫೀಚರ್ಸ್‌ ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಪ್ರೀಮಿಯಂ ಫೀಚರ್ಸ್‌ನೊಂದಿಗೆ ಬರಲಿದೆ ಎಂದು ವರದಿಯಾಗಿದೆ.

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಗ್ಯಾಲಕ್ಸಿ S23! ನಿರೀಕ್ಷೆ ಏನು?

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಅತ್ಯಾಕರ್ಷಕ ಫೀಚರ್ಸ್‌ನೊಂದಿಗೆ ಬರಲಿದೆ ಎನ್ನಲಾಗಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇನ್ನು ಈ ಫೋನ್‌ ಹೈ ಎಂಡ್‌ ಡಿಸ್‌ಪ್ಲೇ ಡಿಸೈನ್‌ ಹೊಂದಿರಲಿದ್ದು, ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಏನೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಡಿಸ್‌ಪ್ಲೇ ಹೇಗಿರಲಿದೆ?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ 6.1-ಇಂಚಿನ AMOLED ಡಿಸ್‌ಪ್ಲೇ ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 19.5:9 ರಚನೆಯ ಅನುಪಾತದೊಂದಿಗೆ ಬರಲಿದೆ ಎನ್ನಲಾಗಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್‌ ಹೊಂದಿರುವುದು ಪಕ್ಕಾ ಆಗಿದೆ. ಜೊತೆಗೆ ಈ ಡಿಸ್‌ಪ್ಲೇ HDR10+ ಮತ್ತು 120Hz ರಿಫ್ರೆಶ್ ರೇಟ್ ಬೆಂಬಲವನ್ನು ಪಡೆದುಕೊಂಡಿದೆ.

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಗ್ಯಾಲಕ್ಸಿ S23! ನಿರೀಕ್ಷೆ ಏನು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 2SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ನೀವು ಈ ಸ್ಮಾರ್ಟ್‌ಫೋನ್‌ನಲ್ಲಿ ನಾಲ್ಕು ವರ್ಷಗಳ ಆಂಡ್ರಾಯ್ಡ್‌ ಅಪ್ಡೇಟ್ಸ್‌ ಮತ್ತು ಐದು ವರ್ಷಗಳ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ನಿರೀಕ್ಷಿಸಬಹುದಾಗಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಕ್ಯಾಮೆರಾ ಸೆಟ್‌ಅಪ್‌ ಏನು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರುವ ನಿರೀಕ್ಷೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಸೆನ್ಸಾರ್‌ನೊಂದಿಗೆ ಬರಲಿದೆ ಎನ್ನಲಾಗಿದೆ. ಇದಲ್ಲದೆ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರುವ ನಿರೀಕ್ಷೆ ಕೂಡ ಇದೆ.

ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಗ್ಯಾಲಕ್ಸಿ S23! ನಿರೀಕ್ಷೆ ಏನು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಬ್ಯಾಟರಿ ಮತ್ತು ವೇಗದ ಸಾಮರ್ಥ್ಯ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ 3,900mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌ ಅನ್ನು ಬೆಂಬಲಿಸಲಿದೆ.

ಇದಲ್ಲದೆ ಇದೇ ಈವೆಂಟ್‌ನಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ಗ್ಯಾಲಕ್ಸಿ S23 ಪ್ಲಸ್‌, ಮತ್ತು ಗ್ಯಾಲಕ್ಸಿ S23 ಅಲ್ಟ್ರಾ ಫೋನ್‌ಗಳನ್ನು ಕೂಡ ಬಿಡುಗಡೆ ಮಾಡಲಿದೆ. ಇದರಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಯುನಿಬಾಡಿ ವಿನ್ಯಾಸವನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ. ಅಲ್ಲದೆ ಗ್ಯಾಲಕ್ಸಿ S23 ಅಲ್ಟ್ರಾ ಫೋನ್‌ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಮುಖ್ಯ ಕ್ಯಾಮೆರಾದೊಂದಿಗೆ ಬರಲಿದೆ ಎನ್ನಲಾಗಿದೆ. ಇನ್ನು ಈ ಸರಣಿಯಲ್ಲಿ ಅಲ್ಟ್ರಾ ಮಾದರಿಯು 1 ಲಕ್ಷಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆಯಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಫೆಬ್ರವರಿ ಮಧ್ಯದಲ್ಲಿ ಅಥವಾ ಮಾರ್ಚ್ ಆರಂಭದಲ್ಲಿ ಭಾರತದಲ್ಲಿ ಸೇಲ್‌ ಆಗುವ ನಿರೀಕ್ಷೆಯಿದೆ.

Best Mobiles in India

English summary
This will be the cheapest flagship phone from Samsung in the Galaxy S23 series.know more details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+