ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಫೀಚರ್ಸ್‌ ಬಹಿರಂಗ! ಹೈ ಫ್ರಿಕ್ವೆನ್ಸಿ ಪ್ರೊಸೆಸರ್‌ ಸಾಮರ್ಥ್ಯ!

|

ಸ್ಯಾಮ್‌ಸಂಗ್‌ ಕಂಪೆನಿ ಸ್ಮಾರ್ಟ್‌ಫೋನ್‌ ದೈತ್ಯ ಎನಿಸಿಕೊಂಡಿದೆ. ಸ್ಯಾಮ್‌ಸಂಗ್‌ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಬೇಡಿಕೆಯನ್ನು ಪಡೆದುಕೊಂಡಿದೆ. ಇದಕ್ಕೆ ತಕ್ಕಂತೆ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸಿದೆ. ಸದ್ಯ ಇದೀಗ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಕುರಿತು ಈಗಾಗಲೆ ಸಾಕಷ್ಟು ನಿರೀಕ್ಷೆ ಸೃಷ್ಟಿಯಾಗಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿಯ ಮುಂಬರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿದೆ. ಇದೀಗ ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8 Gen 2 ಪ್ರೊಸೆಸರ್‌ನಲ್ಲಿ ಬರಲಿದೆ ಎನ್ನಲಾಗಿದೆ. ಹಾಗೆಯೇ 8GB RAM ಅನ್ನು ಹೊಂದಿರಲಿದೆ ಎಂಬ ವರದಿ ಬಹಿರಂಗವಾಗಿದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್‌ ಏನೆಲ್ಲಾ ಫೀಚರ್ಸ್‌ ಒಳಗೊಂಡಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಹಾಗಾದ್ರೆ ಗ್ಯಾಲಕ್ಸಿ S23 ವಿಶೇಷತೆ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಏನೆಲ್ಲಾ ಫೀಚರ್ಸ್‌ ನಿರೀಕ್ಷಿಸಲಾಗಿದೆ?

ಏನೆಲ್ಲಾ ಫೀಚರ್ಸ್‌ ನಿರೀಕ್ಷಿಸಲಾಗಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ 6.1 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿರಲಿದೆ ಎಂದು ವರದಿಯಾಗಿದೆ. ಈ ಡಿಸ್‌ಪ್ಲೇ 2340 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಈ ಡಿಸ್‌ಪ್ಲೇ 19.5:9 ರಚನೆಯ ಅನುಪಾತ ಹೊಂದಿರಲಿದೆ. ಜೊತೆಗೆ ಸ್ಕ್ರೀನ್‌ ಟು ಬಾಡಿ ಅನುಪಾತ 88.57% ಹೊಂದಿದೆ. ಇದು HDR ಬೆಂಬಲ, ಸ್ಕ್ರ್ಯಾಚ್- ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದಿರಲಿದೆ ಎನ್ನಲಾಗಿದೆ.

ಪ್ರೊಸೆಸರ್‌ ಏನಿರಲಿದೆ?

ಪ್ರೊಸೆಸರ್‌ ಏನಿರಲಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8 Gen 2 ಪ್ರೊಸೆಸರ್‌ನಲ್ಲಿ ಬರಲಿದೆ. ಈ ಪ್ರೊಸೆಸರ್‌ ಕಾರ್ಟೆಕ್ಸ್-X3-ಆಧಾರಿತ Kryo Prime ಗಡಿಯಾರಗಳು 3.2GHz ಹೊಂದಿರಲಿದೆ ಎನ್ನಾಗಿದೆ. ಜೊತೆಗೆ ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿರಲಿದೆ. ಆದರೆ ಇದು ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ಕ್ಯಾಮೆರಾ ಸೆಟ್‌ಅಪ್‌ ಏನಿರಬಹುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 10 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಹೊಂದಿದ್ದು, ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ 10 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ಬ್ಯಾಟರಿ ಬ್ಯಾಕ್‌ಅಪ್‌ ಏನಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ 3900mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇದು ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಬ್ಲೂಟೂತ್‌, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಗೈರೊಸ್ಕೋಪ್, ಕಂಪಾಸ್ ಸೆನ್ಸಾರ್‌ ಅನ್ನು ಪಡೆದಿರಲಿದೆ.

ಲಭ್ಯತೆ ಯಾವಾಗ?

ಲಭ್ಯತೆ ಯಾವಾಗ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ ಅನ್ಪ್ಯಾಕ್ಡ್ ಈವೆಂಟ್ ನಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಈ ಅನ್ಪ್ಯಾಕ್ಡ್ ಈವೆಂಟ್ ಫೆಬ್ರವರಿ 2023ರ ಮೊದಲ ವಾರದಲ್ಲಿ ನಡೆಯಲಿದೆ ಎಂದು ಊಹಿಸಲಾಗಿದೆ. ಅದರಂತೆ ಗ್ಯಾಲಕ್ಸಿ S23 ಸರಣಿಯು ಫೆಬ್ರವರಿ 17, 2023ಕ್ಕೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಯಾವಾಗ ಬಿಡುಗಡೆಯಾಗಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಜೊತೆಗೆ ಈ ಸ್ಮಾರ್ಟ್‌ಫೋನ್‌ನ ಕಲರ್‌ ಆಯ್ಕೆಗಳು ಏನಿರಲಿದೆ ಎಂಬುದು ಇನ್ನು ಕೂಡ ಖಚಿತವಾಗಿಲ್ಲ.

Best Mobiles in India

English summary
Samsung Galaxy S23 phone is confirmed to feature Snapdragon 8 Gen 2

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X