ಭಾರತದಲ್ಲಿ Samsung Galaxy S23 ಬೆಲೆ ಎಷ್ಟು?..ಏನಾದ್ರೂ ಆಫರ್ ಇದೆಯಾ?
ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್ ಸರಣಿ ಈಗ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸರಣಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S23, ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಪ್ಲಸ್ ಹಾಗೂ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ವೇರಿಯಂಟ್ ಮಾಡೆಲ್‌ಗಳನ್ನು ಒಳಗೊಂಡಿದ್ದು, ಗ್ಯಾಲಕ್ಸಿ S22 ಸರಣಿಯ ಉತ್ತರಾಧಿಕಾರಿಯಾಗಿ ಮಾರುಕಟ್ಟೆ ಪ್ರವೇಶಿಸಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಫೋನ್ (Samsung Galaxy S23) ಸರಣಿ ಹೈಎಂಡ್ ಮಾದರಿಯ ಫೋನ್‌ಗಳನ್ನು ಒಳಗೊಂಡಿದ್ದು, ಕ್ಯಾಮೆರಾ, ಪ್ರೊಸೆಸರ್, ಡಿಸ್‌ಪ್ಲೇ, ಡಿಸೈನ್ ಸೇರಿದಂತೆ ಹಲವು ಫೀಚರ್ಸ್‌ಗಳು ಮೂಲಕ ಸದ್ದು ಮಾಡುವಂತಿವೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S23, ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಪ್ಲಸ್ ಹಾಗೂ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್‌ಗಳ ಫೀಚರ್ಸ್‌ಗಳೇನು? ಭಾರತದಲ್ಲಿ ಈ ಫೋನ್‌ಗಳ ಬೆಲೆ ಎಷ್ಟು? ಖರೀದಿಗೆ ಯಾವಾಗ ಲಭ್ಯ? ಎನ್ನುವ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಬೆಲೆ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ 74,999ರೂ. ಪ್ರೈಸ್ ಟ್ಯಾಗ್ ಅನ್ನು ಹೊಂದಿದೆ. ಅದೇ ರೀತಿ 8GB + 256GB ಸ್ಟೋರೇಜ್ ವೇರಿಯಂಟ್ ಫೋನ್ 79,999ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಫ್ಯಾಂಟೋಮ್ ಬ್ಲ್ಯಾಕ್, ಗ್ರೀನ್, ಲ್ಯಾವೆಂಡ್ರಾ ಹಾಗೂ ಕ್ರೀಮ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಪ್ಲಸ್ ಬೆಲೆ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಪ್ಲಸ್ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ 94,999 ರೂ. ಪ್ರೈಸ್ ಟ್ಯಾಗ್ ಅನ್ನು ಹೊಂದಿದೆ. ಅದೇ ರೀತಿ 8GB + 512GB ಸ್ಟೋರೇಜ್ ವೇರಿಯಂಟ್ ಫೋನ್ 1,04,999ರೂ. ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಫ್ಯಾಂಟೋಮ್ ಬ್ಲ್ಯಾಕ್ ಮತ್ತು ಕ್ರೀಮ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಬೆಲೆ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ 12GB + 256GB ಸ್ಟೋರೇಜ್ ವೇರಿಯಂಟ್ 1,24,999 ರೂ. ಪ್ರೈಸ್ ಟ್ಯಾಗ್ ಅನ್ನು ಹೊಂದಿದೆ. ಅದೇ ರೀತಿ 12GB + 512GB ಸ್ಟೋರೇಜ್ ವೇರಿಯಂಟ್ ಫೋನ್ 1,34,999 ರೂ. ಬೆಲೆಯನ್ನು ಹೊಂದಿದ್ದು, ಹಾಗೆಯೇ 12GB + 1TB ಸ್ಟೋರೇಜ್ ವೇರಿಯಂಟ್ ಬೆಲೆಯು 1,54,999ರೂ. ದರ ಹೊಂದಿದೆ. ಇನ್ನು ಈ ಫೋನ್ ಫ್ಯಾಂಟೋಮ್ ಬ್ಲ್ಯಾಕ್, ಗ್ರೀನ್ ಮತ್ತು ಕ್ರೀಮ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್‌ನಲ್ಲಿ ಮತ್ತಷ್ಟು ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸರಣಿ: ಲಭ್ಯತೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಸರಣಿಯ ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಗಮನ ಸೆಳೆದಿವೆ. ಇನ್ನು ಈ ಸರಣಿಯ ಫೋನ್‌ಗಳನ್ನು ಗ್ರಾಹಕರು ಅಧಿಕೃತ ವೆಬ್‌ಸೈಟ್‌ನಲ್ಲಿ (ಇ-ಸ್ಟೋರ್), ಸ್ಯಾಮ್‌ಸಂಗ್ ಎಕ್ಸ್‌ಕ್ಯೂಸಿವ್ ಸ್ಟೋರ್, ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್ ಹಾಗೂ ಅಮೆಜಾನ್ ತಾಣಗಳಲ್ಲಿ ಲಭ್ಯ. ಇದರೊಂದಿಗೆ ಪ್ರಮುಖ ಆನ್‌ಲೈನ್ ಹಾಗೂ ಆಫ್‌ಲೈನ್ ಪ್ಲಾಟ್‌ಫಾರ್ಮ್ ಗಳಲ್ಲಿ ಖರೀದಿಗೆ ಲಭ್ಯ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಫೋನ್ ಡೈಮಂಡ್ ಅಮೋಲೆಡ್ ಜೊತೆಗೆ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಅನ್ನು ಪಡೆದಿದೆ. ಇದು ಟ್ರಿಪಲ್ ಕ್ಯಾಮೆರಾ ರಚನೆ ಇದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಬ್ಯಾಟರಿ 3,900mAh ಸಾಮರ್ಥ್ಯದಲ್ಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಪ್ಲಸ್ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಪ್ಲಸ್ ಫೋನ್ ಡೈಮಂಡ್ ಅಮೋಲೆಡ್ ಜೊತೆಗೆ 6.6 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಅನ್ನು ಪಡೆದಿದೆ. ಈ ಫೋನ್ ಸಹ ಟ್ರಿಪಲ್ ಕ್ಯಾಮೆರಾ ರಚನೆ ಇದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಬ್ಯಾಟರಿ 4,700mAh ಸಾಮರ್ಥ್ಯದಲ್ಲಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಫೋನ್ QHD+ ಡೈಮಂಡ್ ಅಮೋಲೆಡ್ ಜೊತೆಗೆ 6.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 8 ಜೆನ್ 2 ಪ್ರೊಸೆಸರ್ ಅನ್ನು ಪಡೆದಿದೆ. ಈ ಫೋನ್ ಕ್ವಾಡ್ ಕ್ಯಾಮೆರಾ ರಚನೆ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 200 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿದೆ. ಇನ್ನು ಈ ಫೋನಿನ ಬ್ಯಾಟರಿ 5,000mAh ಸಾಮರ್ಥ್ಯದಲ್ಲಿದೆ.


Click it and Unblock the Notifications








