ಭರ್ಜರಿ ಡಿಸ್ಕೌಂಟ್ ಪಡೆದ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ!..ಆಫರ್ ಬೆಲೆ ಎಷ್ಟು?
ಸ್ಯಾಮ್‌ಸಂಗ್ ಕಂಪನಿಯ ಗ್ಯಾಲಕ್ಸಿ S ಸರಣಿ ಫ್ಲ್ಯಾಗ್‌ಶಿಪ್ ಫೋನ್‌ಗಳು ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿವೆ. ಅದೇ ಸರಣಿಯಲ್ಲಿ ಇತ್ತೀಚಿಗಷ್ಟೆ ಹೊಸದಾಗಿ ಬಿಡುಗಡೆ ಆಗಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಫೋನ್ ಗ್ರಾಹಕರನ್ನು ಆಕರ್ಷಿಸಿದೆ. ಆದರೆ ಈ ನೂತನ ದೈತ್ಯ ಸ್ಮಾರ್ಟ್‌ಫೋನ್ ಇದೀಗ ಭಾರೀ ರಿಯಾಯಿತಿ ದರದಲ್ಲಿ ಖರೀದಿಗೆ ಲಭ್ಯವಿದ್ದು, ಫೋನ್ ಪ್ರಿಯರು ಹುಬ್ಬೇರಿಸುವಂತೆ ಆಗಿದೆ.
ಹೌದು, ಸ್ಯಾಮ್‌ಸಂಗ್ ಕಂಪನಿಯ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಸ್ಮಾರ್ಟ್‌ಫೋನ್ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. 12GB+256GB ವೇರಿಯಂಟ್ ಫೋನ್ 1,49,999ರೂ. ಗಳ ಬೆಲೆಯಲ್ಲಿ ಇದ್ದು, ಆದರೆ ರಿಯಾಯಿತಿಯಲ್ಲಿ 1,24,999ರೂ.ಗಳಲ್ಲಿ ಕಾಣಿಸಿಕೊಂಡಿದೆ. ಇನ್ನು ಇದರೊಂದಿಗೆ ಹೆಚ್ಚುವರಿಯಾಗಿ ಬ್ಯಾಂಕ್ ಆಫರ್, ನೋ ಕಾಸ್ಟ್ ಇಎಮ್‌ಐ ಹಾಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಲಭ್ಯವಾಗಲಿದೆ.

ಇನ್ನು ಈ ಫ್ಲ್ಯಾಗ್‌ಶಿಫ್ ಫೋನ್ 12GB RAM + 256GB ಮತ್ತು 12GB RAM + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. ಹಾಗೆಯೇ ಈ ಫೋನ್ ಬ್ಲ್ಯಾಕ್, BEIGE ಮತ್ತು ಗ್ರೀನ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ 23 ಅಲ್ಟ್ರಾ ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಡಿಸ್‌ಪ್ಲೇ : ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಡೈನಾಮಿಕ್ ರಿಫ್ರೆಶ್ ರೇಟ್ 1-120Hz ಬೆಂಬಲಿಸಲಿದೆ. ಅಲ್ಲದೆ ಗೇಮ್ ಮೋಡ್‌ನಲ್ಲಿ 240Hz ಟಚ್ ಸ್ಯಾಂಪ್ಲಿಂಗ್ ರೇಟಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್ ಹಾಗೂ ವಿಷನ್ ಬೂಸ್ಟರ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಪ್ರೊಸೆಸರ್ : ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ನ ಕಸ್ಟಮ್ ಆವೃತ್ತಿಯನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 One UI 5.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 1TB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸುವ ಬಗ್ಗೆ ಮಾಹಿತಿಯಿಲ್ಲ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಕ್ಯಾಮೆರಾ : ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದ್ದು, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್, ಮೂರನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಹಾಗೂ ನಾಲ್ಕನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರೊಂದಿಗೆ 12 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಬ್ಯಾಟರಿ : ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೈರ್ಡ್ ಚಾರ್ಜಿಂಗ್ ಮತ್ತು ಫಾಸ್ಟ್ ವಾಯರ್‌ಲೆಸ್ ಚಾರ್ಜಿಂಗ್ 2.0 ಅನ್ನು ಬೆಂಬಲಿಸುತ್ತದೆ. ಇದರಿಂದ ಸ್ಮಾರ್ಟ್‌ಫೋನ್ ಅನ್ನು ಕೇವಲ 20 ನಿಮಿಷಗಳಲ್ಲಿ 65% ಚಾರ್ಜಿಂಗ್ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.


Click it and Unblock the Notifications








