Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಇದೀಗ ಹೊಸ ಆಯ್ಕೆಯಲ್ಲಿ ಲಭ್ಯ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಖರೀದಿದಾರರಿಗೆ ಇದೀಗ ಹೊಸ ಆಯ್ಕೆ ಲಭ್ಯವಾಗಲಿದೆ. ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಅನ್ನು ಎರಡು ಹೆಚ್ಚುವರಿ ಬಣ್ಣಗಳ ಆಯ್ಕೆಗಳಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ಗಳು ಪ್ರತ್ಯೇಕವಾಗಿ ಸ್ಯಾಮ್‌ಸಂಗ್‌ ವೆಬ್‌ಸೈಟ್‌ ಮತ್ತು ಆಫ್‌ಲೈನ್‌ ಸ್ಟೋರ್‌ಗಳಲ್ಲಿ ಸಿಗಲಿದೆ.

ಹೌದು, ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಇದೀಗ ಲೈಟ್ ಬ್ಲೂ ಮತ್ತು ರೆಡ್ ರೂಪಾಂತರಗಳಲ್ಲಿ ಪ್ರತ್ಯೇಕವಾಗಿ ಬಿಡುಗಡೆಯಾಗಿದೆ. ಹೊಸ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗುವ ಈ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳಲ್ಲಿ ಯಾವುದೇ ರೀತಿಯ ಬದಲಾವಣೆ ಮಾಡಲಾಗಿಲ್ಲ. ಇನ್ನು ಈ ಸ್ಮಾರ್ಟ್‌ಫೋನ್‌ಗಳು 5,000mAh ಬ್ಯಾಟರಿಯಿಂದ ಬೆಂಬಲಿತವಾಗಿದೆ. ಹಾಗಾದ್ರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಹೊಸ ಬಣ್ಣಗಳ ಆಯ್ಕೆಯ ಬೆಲೆ ಎಷ್ಟು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಇದೀಗ ಹೊಸ ಆಯ್ಕೆಯಲ್ಲಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಹೊಸ ಬಣ್ಣದ ರೂಪಾಂತರಗಳ ಬೆಲೆ ಎಷ್ಟು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಇದೀಗ ಲೈಟ್ ಬ್ಲೂ ಮತ್ತು ರೆಡ್ ರೂಪಾಂತರಗಳಲ್ಲಿ ಪ್ರತ್ಯೇಕವಾಗಿ ಲಭ್ಯವಿದೆ. ಇದರ ಬೇಸ್‌ ಮಾಡೆಲ್‌ 12GB + 256GB ರೂಪಾಂತರದ ಆಯ್ಕೆಯು 1,24,999ರೂ.ಬೆಲೆ ಹೊಂದಿದೆ. ಇದರ 12GB + 512GB ಆಯ್ಕೆಯು 1,34,999ರೂ. ಬೆಲೆಯನ್ನು ಹೊಂದಿದೆ. ಇದಲ್ಲದೆ 12GB + 1TB ಆಯ್ಕೆಯು 1,54,999ರೂ.ಬೆಲೆಯಲ್ಲಿ ದೊರೆಯಲಿದೆ. ಇದು ಸ್ಯಾಮ್‌ಸಂಗ್‌ ಇಂಡಿಯಾ ವೆಬ್‌ಸೈಟ್ ಮತ್ತು ವಿಶೇಷ ಸ್ಯಾಮ್‌ಸಂಗ್‌ ಆಫ್‌ಲೈನ್ ಸ್ಟೋರ್‌ಗಳಲ್ಲಿ ಲಭ್ಯವಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಡಿಸ್‌ಪ್ಲೇ ಹೇಗಿದೆ: ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ QHD+ ಡೈನಾಮಿಕ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ವರೆಗೆ ರಿಫ್ರೆಶ್ ರೇಟ್‌ ಮತ್ತು 240Hz ಟಚ್‌ ಸ್ಯಾಪ್ಲಿಂಗ್‌ ರೇಟ್ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್‌ ಹಾಗೂ ವಿಷನ್ ಬೂಸ್ಟರ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಪ್ರೊಸೆಸರ್‌ : ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 One UI 5.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಇದೀಗ ಹೊಸ ಆಯ್ಕೆಯಲ್ಲಿ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಕ್ಯಾಮೆರಾ ವಿವರ: ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್ ವೈಡ್ ಲೆನ್ಸ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್‌ ಲೆನ್ಸ್‌ ಹೊಂದಿದೆ. ಮೂರನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಹಾಗೂ ನಾಲ್ಕನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದರೊಂದಿಗೆ 12 ಮೆಗಾಪಿಕ್ಸೆಲ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು: ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೈರ್ಡ್ ಚಾರ್ಜಿಂಗ್ ಮತ್ತು ಫಾಸ್ಟ್ ವಾಯರ್‌ಲೆಸ್ ಚಾರ್ಜಿಂಗ್ 2.0 ಅನ್ನು ಬೆಂಬಲಿಸುತ್ತದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ಕೇವಲ 20 ನಿಮಿಷಗಳಲ್ಲಿ 65% ಚಾರ್ಜಿಂಗ್‌ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ 5.3 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಸ್ಯಾಮ್‌ಸಂಗ್ ಎಸ್ ಪೆನ್ ಸ್ಟೈಲಸ್ ಅನ್ನು ಸಹ ನೀಡಲಾಗಿದೆ.

Best Mobiles in India

English summary
Samsung: Galaxy S23 Ultra is now offered in two additional colours exclusively on the Samsung website.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+