Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Samsung Galaxy S24 FE ಫೋನ್‌; ಭರ್ಜರಿ ಫೀಚರ್ಸ್‌!

ದಕ್ಷಿಣ ಕೊರಿಯಾದ ಟೆಕ್ ದಿಗ್ಗಜ ಕಂಪೆನಿ ಸ್ಯಾಮ್‌ಸಂಗ್‌ ಇದೀಗ ನೂತನವಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 FE (Samsung Galaxy S24 FE) ಸ್ಮಾರ್ಟ್‌ಫೋನ್‌ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ Exynos 2400e ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಪವರ್‌ ಪಡೆದಿದ್ದು, ಇದರ ಜೊತೆಗೆ ಸರ್ಕಲ್ ಟು ಸರ್ಚ್ ಮತ್ತು ಲೈವ್ ಟ್ರಾನ್ಸ್‌ಲೇಟ್‌ನಂತಹ ಗ್ಯಾಲಕ್ಸಿ AI ಫೀಚರ್ಸ್‌ಗಳನ್ನು ಸಹ ಸಪೋರ್ಟ್‌ ಮಾಡಲಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಮಾರುಕಟ್ಟೆಗೆ ಗ್ಯಾಲಕ್ಸಿ S24 FE (Samsung Galaxy S24 FE) ಮೊಬೈಲ್ ಲಾಂಚ್‌ ಮಾಡಿದೆ. ಈ ಮೊಬೈಲ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸಿಸ್ಟಂ ಅನ್ನು ಒಳಗೊಂಡಿದ್ದು, 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಪಡೆದುಕೊಂಡಿದೆ. ಸೆಲ್ಫಿ ಹಾಗೂ ಬಿಡಿಯೋ ಕರೆಗಳಿಗಾಗಿ ಮುಂಭಾಗದಲ್ಲಿ 10 ಮೆಗಾ ಪಿಕ್ಸಲ್‌ ಕ್ಯಾಮೆರಾ ಸೌಲಭ್ಯವನ್ನು ಇದು ಒಳಗೊಂಡಿದೆ.

ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ Samsung Galaxy S24 FE ಫೋನ್‌; ಭರ್ಜರಿ ಫೀಚರ್ಸ

ಹಾಗೆಯೇ ಈ ಫೋನ್‌ 8GB RAM ಹಾಗೂ 128GB / 256GB / 512GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಇನ್ನು ಈ ಫೋನ್‌ ಬ್ಲೂ, ಗ್ರಾಫೈಟ್‌, ಗ್ರೇ, ಮಿಂಟ್‌ ಹಾಗೂ ಯಲ್ಲೋ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 FE (Samsung Galaxy S24 FE) ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 FE - ಫೀಚರ್ಸ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್‌ 6.7 ಇಂಚಿನ FHD+ ಇನ್ಫಿನಿಟಿ-O ಡೈನಾಮಿಕ್ AMOLED ಡಿಸ್‌ಪ್ಲೇ ಅನ್ನು ಪಡೆದಿದೆ. ಹಾಗೆಯೇ ಈ ಡಿಸ್‌ಪ್ಲೇಯು 120Hz ರಿಫ್ರೆಶ್ ರೇಟ್ ಸೌಲಭ್ಯ ಹಾಗೂ 1900 ನಿಟ್ಸ್ ಗರಿಷ್ಠ ಬ್ರೈಟ್ನೆಸ್‌ ಸೌಲಭ್ಯ ಸಹ ಪಡೆದುಕೊಂಡಿದೆ. ಅಲ್ಲದೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ + ರಕ್ಷಣೆ ಸಹ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್‌ 3.1GHz GPU ಡೆಕಾ-ಕೋರ್ ಸ್ಯಾಮ್‌ಸಂಗ್‌ Exynos 2400e 4nm ಪ್ರೊಸೆಸರ್ ಜೊತೆಗೆ ಸ್ಯಾಮ್‌ಸಂಗ್‌ Xclipse 940 GPU ಅನ್ನು ಹೊಂದಿದೆ. ಇದು One UI 6.1.1 ಜೊತೆಗೆ ಆಂಡ್ರಾಯ್ಡ್‌ 14 ಸಪೋರ್ಟ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB / 256GB / 512GB ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗಳನ್ನು ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸಿಸ್ಟಮ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅಲ್ಟ್ರಾವೈಡ್‌ ಲೆನ್ಸ್‌ ಅನ್ನು ಪಡೆದಿದ್ದು, ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ 10 ಮೆಗಾ
ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್, ವೈರ್‌ಲೆಸ್ ಚಾರ್ಜಿಂಗ್, ವೈರ್‌ಲೆಸ್ ಪವರ್ ಶೇರ್‌ ಬೆಂಬಲವನ್ನು ಹೊಂದಿದೆ. ಇದಲ್ಲದೆ ನೀರು-ನಿರೋಧಕ (IP68) ರೇಟಿಂಗ್‌ ಆಯ್ಕೆ ಸಹ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 FE ಸ್ಮಾರ್ಟ್‌ಫೋನ್‌ ಆರಂಭಿಕ 8GB + 128GB ವೇರಿಯಂಟ್‌ಗೆ USD 649.99 (ಭಾರತದಲ್ಲಿ ಅಂದಾಜು 54,355ರೂ. ಗಳು). ಇನ್ನು ಈ ಫೋನ್‌ ಬ್ಲೂ, ಗ್ರಾಫೈಟ್‌, ಗ್ರೇ, ಮಿಂಟ್‌ ಹಾಗೂ ಯಲ್ಲೋ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Samsung Galaxy S24 FE With Exynos 2400e SoC Launched. Check Price, availability, Specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+