Home
ಸುದ್ದಿಜಾಲ

ಐಫೋನ್‌ಗೆ ಸೆಡ್ಡು ಹೊಡೆಯಲು ಶೀಘ್ರದಲ್ಲೇ ಬರಲಿದೆ ಸ್ಯಾಮ್‌ಸಂಗ್‌ನ ಈ ಸ್ಮಾರ್ಟ್‌ಫೋನ್‌!

ಟೆಕ್‌ ವಲಯದಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿರುವ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸರಣಿಯು ಶೀಘ್ರದಲ್ಲೇ ಬಿಡುಗಡೆ ಆಗುವ ನಿರೀಕ್ಷೆಯಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಆಪಲ್‌ ಕಂಪೆನಿಯ ಐಫೋನ್‌ಗಳಲ್ಲಿರುವ ವಿಶೇಷ ಫೀಚರ್ಸ್‌ ಒಳಗೊಂಡಿರಲಿದೆ ಎನ್ನುವ ವಿಚಾರ ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಈ ಸರಣಿಯ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಡಲಾಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸರಣಿ ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಅದರಂತೆ ಈ ಸ್ಮಾರ್ಟ್‌ಫೋನ್‌ ಮುಂದಿನ ವರ್ಷ ಅಂದರೆ ಜನವರಿ 17, 2024 ರಂದು ಬಿಡುಗಡೆ ಆಗಲಿದೆ ಎನ್ನಲಾಗಿದೆ. ಇನ್ನು ಈ ಸರಣಿಯು ಗ್ಯಾಲಕ್ಸಿ S24, ಗ್ಯಾಲಕ್ಸಿ S24+ ಮತ್ತು ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ಗಳು ಬರಲಿವೆ ಎಂದು ವರದಿಯಾಗಿದೆ. ಇದರಲ್ಲಿ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಸಾಕಷ್ಟು ಗಮನಸೆಳೆಯುವ ಸೂಚನೆ ನೀಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಫೋನ್‌ಗೆ ಸೆಡ್ಡು ಹೊಡೆಯಲು ಶೀಘ್ರದಲ್ಲೇ ಬರಲಿದೆ ಸ್ಯಾಮ್‌ಸಂಗ್‌ನ ಈ ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇನ್ನು ಡಿಸ್‌ಪ್ಲೇ 1440 x 3200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಬರಲಿದೆ. ಜೊತೆಗೆ ಇದು 516 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿರಲಿದೆ. ಇದಲ್ಲದೆ ಡಿಸ್‌ಪ್ಲೇ 144 Hz ರಿಫ್ರೆಶ್‌ ರೇಟ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಅಂದಾಜಿಸಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಐಫೋನ್‌ಗೆ ಸೆಡ್ಡು ಹೊಡೆಯಲು ಶೀಘ್ರದಲ್ಲೇ ಬರಲಿದೆ ಸ್ಯಾಮ್‌ಸಂಗ್‌ನ ಈ ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಕ್ಯಾಮೆರಾ ಸೆಟ್‌ಅಪ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 200 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 10 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಇದಲ್ಲದೆ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇದು 45W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸುವ ಸಾಧ್ಯತೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಅನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ಐಫೋನ್‌ಗೆ ಸೆಡ್ಡು ಹೊಡೆಯಲು ಶೀಘ್ರದಲ್ಲೇ ಬರಲಿದೆ ಸ್ಯಾಮ್‌ಸಂಗ್‌ನ ಈ ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಬೆಲೆ ವಿವರಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ಇದಲ್ಲದೆ ಸ್ಯಾಮ್‌ಸಂಗ್‌ ಕಂಪೆನಿ ಇತ್ತೀಚಿಗೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 FE ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಇನ್ನು ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಫ್ಲೋಟಿಂಗ್ ಕ್ಯಾಮೆರಾ ಸಿಸ್ಟಂ ಅನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೈರ್ಡ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ರೀಮ್, ಗ್ರ್ಯಾಫೈಟ್, ಮಿಂಟ್ ಮತ್ತು ಪರ್ಪಲ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.

Best Mobiles in India

English summary
Samsung Galaxy S24 series Launch Date Revealed: Expected Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+