Home
ಸುದ್ದಿಜಾಲ

Samsung: ಹೊಸ ಸ್ಟೋರೇಜ್‌ ವೇರಿಯಂಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಫೋನ್‌! ಬೆಲೆ ಎಷ್ಟು?

ಸ್ಮಾರ್ಟ್‌ಫೋನ್‌ಗಳ ವಿಭಾಗದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಫೋನ್‌ಗಳಿಗೆ (Samsung Galaxy Phone) ವಿಶೇಷವಾದ ಬೇಡಿಕೆ ಇದೆ. ಈ ನಡುವೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಸ್ಮಾರ್ಟ್‌ಫೋನ್‌ (Samsung Galaxy S24 Smartphone) ಅನ್ನು ಇದೀಗ ಹೊಸ ವೇರಿಯಂಟ್‌ ನಲ್ಲಿ ಸೈಲೆಂಟ್‌ ಆಗಿ ಲಾಂಚ್‌ ಮಾಡಲಾಗಿದೆ.

ಹೌದು, ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಸ್ಮಾರ್ಟ್‌ಫೋನ್‌ನ ಹೊಸ ವೇರಿಯಂಟ್‌ ಅನ್ನು ಲಾಂಚ್‌ ಮಾಡಲಾಗಿದೆ. ಈ ಮೊದಲು ಈ ಫೋನ್ 256GB/512GB ಸ್ಟೋರೇಜ್ ವೇರಿಯಂಟ್ ನಲ್ಲಿ ಲಭ್ಯ ಇತ್ತು. ಇನ್ನು ಈ ಫೋನ್ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದ್ದು, ಆಂಡ್ರಾಯ್ಡ್‌ 14 ಓಎಸ್‌ (Android 14 OS) ಅನ್ನು ರನ್‌ ಮಾಡಲಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ ಯಾವ ವೇರಿಯಂಟ್‌ನಲ್ಲಿ ಲಭ್ಯ ಇದೆ?, ಇದರ ಪ್ರಮುಖ ಫೀಚರ್ಸ್‌ ಏನು ಅನ್ನೋ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಹೊಸ ಸ್ಟೋರೇಜ್‌ ವೇರಿಯಂಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಫೋನ್‌!

ಭಾರತದಲ್ಲಿ ಈ ಹೊಸ ವೇರಿಯಂಟ್‌ ಬೆಲೆ ವಿವರ: ಈ ಫೋನ್‌ನ 128GB ಸ್ಟೋರೇಜ್‌ ವೇರಿಯಂಟ್‌ಗೆ 74,999 ರೂ.ಗಳ ಬೆಲೆ ನಿಗದಿ ಮಾಡಲಾಗಿದ್ದು, ನೀವು ಇದನ್ನು ಸ್ಯಾಮ್‌ಸಂಗ್‌ ಇ -ಸ್ಟೋರ್‌ ಮೂಲಕ ಖರೀದಿ ಮಾಡಬಹುದಾಗಿದೆ. ಅಲ್ಲದೆ ಆಫರ್ ಸಹ ಇದ್ದು, ಯಾರೆಲ್ಲಾ ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೂಲಕ ಖರೀದಿ ಮಾಡುತ್ತಾರೋ ಅವರು 5,000 ರೂ.ಗಳ ರಿಯಾಯಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಇದರೊಂದಿಗೆ 10,000 ರೂ.ಗಳ ತ್ವರಿತ ವಿನಿಮಯ ಬೋನಸ್ ಅನ್ನೂ ಸಹ ಪಡೆಯಬಹುದಾಗಿದೆ. ಇನ್ನು 256GB ಮತ್ತು 512GB ಸ್ಟೋರೇಜ್ ವೇರಿಯಂಟ್‌ ಆಯ್ಕೆಯ ಫೋನ್‌ಗಳು ಕ್ರಮವಾಗಿ 79,999 ರೂ.ಗಳು ಮತ್ತು 89,999 ರೂ.99 ರೂ.ಗಳ ಬೆಲೆ ಹೊಂದಿವೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್‌ 6.2 ಇಂಚಿನ ಡೈನಾಮಿಕ್ ಅಮೋಲೆಡ್‌ 2X ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್, 2600ನಿಟ್ಸ್‌ ಬ್ರೈಟ್‌ನೆಸ್ ಸಾಮರ್ಥ್ಯ ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ರಕ್ಷಣೆ ಪಡೆದುಕೊಂಡಿದೆ.

ಹೊಸ ಸ್ಟೋರೇಜ್‌ ವೇರಿಯಂಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸ್ಮಾರ್ಟ್‌ಫೋನ್ ಪ್ರೊಸೆಸರ್‌ ವಿವರ: ಇದರೊಂದಿಗೆ ಈ ಫೋನ್‌ ಎಕ್ಸ್ ಕ್ಲಿಪ್ಸ್ 940 ಜಿಪಿಯು ಬಲ ಪಡೆದಿದ್ದು, ಭಾರತದಲ್ಲಿ ಎಕ್ಸಿನೋಸ್ 2400 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನುಳಿದಂತೆ 8GB RAM ಹಾಗೂ ಮೂರು ಇಂಟರ್ ಸ್ಟೋರೇಜ್‌ ಆಯ್ಕೆಯ ಫೋನ್‌ಗಳನ್ನು ಕಾಣಬಹುದಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸ್ಮಾರ್ಟ್‌ಫೋನ್ ಕ್ಯಾಮೆರಾ ರಚನೆ: ಈ ಫೋನ್‌ನ ಕ್ಯಾಮೆರಾ ವಿಚಾರಕ್ಕೆ ಬಂದರೆ 50 ಮೆಗಾಪಿಕ್ಸೆಲ್‌ ಪ್ರಾಥಮಿಕ ಕ್ಯಾಮೆರಾ, 12 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಸೆನ್ಸಾರ್ ಮತ್ತು 3x ಆಪ್ಟಿಕಲ್ ಜೂಮ್ ಹಾಗೂ 10 ಮೆಗಾಪಿಕ್ಸೆಲ್‌ ಟೆಲಿಫೋಟೋ ಲೆನ್ಸ್ ಈ ಫೋನ್‌ ಪಡೆದಿದೆ. ಇದರ ಜೊತೆಗೆ 12 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.

ಹೊಸ ಸ್ಟೋರೇಜ್‌ ವೇರಿಯಂಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S24 ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಸ್ಮಾರ್ಟ್‌ಫೋನ್ ಬ್ಯಾಟರಿ ಹಾಗೂ ಕನೆಕ್ಟಿವಿಟಿ: ಇನ್ನು ಈ ಫೋನ್‌ನ ಬ್ಯಾಟರಿ ವಿಚಾರಕ್ಕೆ ಬಂದರೆ 4,000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, 25W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಕಾಣಿಸಿಕೊಂಡಿದೆ. ಉಳಿದಂತೆ ಈ ಫೋನ್ 5G, 4G LTE, ಬ್ಲೂಟೂತ್ ಆವೃತ್ತಿ 5.3, ವೈ-ಫೈ 6e, ಎನ್‌ಎಫ್‌ಸಿ, IP68 ರೇಟಿಂಗ್ ಮತ್ತು ಯುಡಬ್ಯುಬಿ ಹಾಗೂ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌ ಸೇರಿದಂತೆ ಅನೇಕ ಫೀಚರ್ಸ್‌ ಅನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.

Best Mobiles in India

English summary
Samsung has just launched a new variant of the Galaxy S24 smartphone. Earlier this phone was available in 256GB/512GB storage variant. Now this phone has an AMOLED display and will run Android 14 OS.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+