Home
ಸುದ್ದಿಜಾಲ

ದೈತ್ಯ Samsung Galaxy S24 Ultra ಫೋನ್‌ ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್‌ ಭಿನ್ನ ಶ್ರೇಣಿಯಲ್ಲಿ ಫೋನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಗ್ಯಾಲಕ್ಸಿ S ಸರಣಿಯ ಮೊಬೈಲ್‌ಗಳಯ ಫ್ಲ್ಯಾಗ್‌ಶಿಪ್‌ ಮಾದರಿಯಲ್ಲಿ ಇದ್ದು, ಅತ್ಯುತ್ತಮ ಫೀಚರ್ಸ್‌ಗಳನ್ನು ಪಡೆದಿವೆ. ಇನ್ನು ಇತ್ತೀಚಿಗಿನ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಮೊಬೈಲ್‌ ಸದ್ಯ ಭಾರೀ ಆಕರ್ಷಕ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಸ್ಯಾಮ್‌ಸಂಗ್ ಪ್ರಿಯ ಗ್ರಾಹಕರು ಹುಬ್ಬೇರಿಸಿ ಈ ಫೋನಿನತ್ತ ನೋಡುವಂತೆ ಆಗಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಮೊಬೈಲ್‌ ಈಗ ರಿಯಾಯಿತಿ ಪಡೆದಿದ್ದು, ಈಗ 1,09,999ರೂ. ಗಳಿಗೆ ಖರೀದಿಗೆ ಲಭ್ಯ ಇದೆ. ಅಂದಹಾಗೆ ಇದು ಸೀಮಿತ ಅವಧಿಯ ಆಫರ್‌ ಆಗಿದೆ ಎಂಬುದನ್ನು ಖರೀದಿದಾರರು ಗಮನಿಸಬೇಕು. ಈ ವಿಶೇಷ ಬೆಲೆಯಲ್ಲಿ ರೂ. 8000ರ ಇನ್ ಸ್ಟಾಂಟ್ ಕ್ಯಾಶ್ ಬ್ಯಾಕ್, ರೂ. 12000ರ ಹೆಚ್ಚುವರಿ ಅಪ್‌ಗ್ರೇಡ್ ಬೋನಸ್ ಒಳಗೊಂಡಿರುತ್ತದೆ. ಜೊತೆಗೆ ಗ್ರಾಹಕರು ರೂ. 12000ರ ಬ್ಯಾಂಕ್ ಕ್ಯಾಶ್‌ಬ್ಯಾಕ್ ಅನ್ನು ಸಹ ಪಡೆಯಬಹುದು. ವಿಶೇಷವಾಗಿ ಗ್ರಾಹಕರು 24 ತಿಂಗಳವರೆಗಿನ ನೋ ಕಾಸ್ಟ್ ಇಎಂಐ ಸೌಲಭ್ಯವನ್ನೂ ಪಡೆಯಬಹುದಾಗಿದೆ.

ದೈತ್ಯ Samsung Galaxy S24 Ultra ಫೋನ್‌ ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ (Samsung Galaxy S24 Ultra) ಮೊಬೈಲ್‌ 6.8 ಇಂಚಿನ ಡೈನಾಮಿಕ್ AMOLED 2X ಡಿಸ್‌ಪ್ಲೇ ಅನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 3120 x 1440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಈ ಡಿಸ್‌ಪ್ಲೇ 505 PPI ಪಿಕ್ಸೆಲ್‌ ಸಾಂದ್ರತೆಯೊಂದಿಗೆ, 2600 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಸಪೋರ್ಟ್ ಮಾಡುತ್ತದೆ. ಇದು 1-120Hz ನಡುವಿನ ವೇರಿಯಬಲ್ ರಿಫ್ರೆಶ್ ರೇಟ್ ಪಡೆದಿದ್ದು, ಇದರ ಜೊತೆಗೆ ಇದು ನೋಟ್-ಟೇಕಿಂಗ್, ಡ್ರಾಯಿಂಗ್ ಮತ್ತು ಡಾಕ್ಯುಮೆಂಟ್ ಎಡಿಟಿಂಗ್‌ಗಾಗಿ ಎಸ್ ಪೆನ್ ಅನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಮೊಬೈಲ್‌ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದು ಆಂಡ್ರಾಯ್ಡ್‌ 14 ಬೆಂಬಲದ ಜೊತೆಗೆ ರನ್‌ ಆಗಲಿದೆ. ಹಾಗೆಯೇ 12 GB RAM ಮತ್ತು 256GB / 512GB, ಹಾಗೂ 1TB ವರೆಗೆ ಆಂತರೀಕ ಸ್ಟೋರೇಜ್‌ ಆಯ್ಕೆಯನ್ನು ನೀಡಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಮೊಬೈಲ್‌ ಹಿಂಭಾಗದಲ್ಲಿ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಇದರಲ್ಲಿ ಮೊದಲನೆ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹೊಂದಿದೆ. ನಾಲ್ಕನೇ ಕ್ಯಾಮೆರಾ 10 ಮೆಗಾಪಿಕ್ಸೆಲ್‌ ಸೆನ್ಸಾರ್‌ ಟೆಲಿಫೋಟೋ ಲೆನ್ಸ್ ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 45W ವೇಗದ ಚಾರ್ಜಿಂಗ್ ಸಪೋರ್ಟ್‌ ಕೂಡಾ ಪಡೆದಿದೆ. ಇದಲ್ಲದೆ 2.0 ತಂತ್ರಜ್ಞಾನ ಮತ್ತು ವೈರ್‌ಲೆಸ್ ಪವರ್ ಹಂಚಿಕೆಯನ್ನು ಸಹ ಒಳಗೊಂಡಿದೆ. ಇದರಿಂದ ಕೇವಲ 30 ನಿಮಿಷದಲ್ಲಿ 65% ಚಾರ್ಜಿಂಗ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 7, Wi-Fi ಡೈರೆಕ್ಟ್, ಬ್ಲೂಟೂತ್ 5.3 ಮತ್ತು USB ಟೈಪ್-C ಪೋರ್ಟ್ ಸೇರಿದೆ. ಗ್ಯಾಲಕ್ಸಿ S24 ಅಲ್ಟ್ರಾ ಫೋನಿನಲ್ಲಿ ಗೂಗಲ್ ಜೊತೆಗೆ 'ಸರ್ಕಲ್ ಟು ಸರ್ಚ್' ಫೀಚರ್ ಸೌಲಭ್ಯ ಸಹ ಸಿಗಲಿದೆ.

Best Mobiles in India

English summary
Samsung Galaxy S24 Ultra available at just Rs 1,09,999. Check offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+