Home
ಸುದ್ದಿಜಾಲ

Samsung: ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಲಾಂಚ್‌! ಭಾರತದಲ್ಲಿ ಬೆಲೆ ಎಷ್ಟು?

ಬಹುನಿರೀಕ್ಷಿತ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್‌ನಲ್ಲಿ ಗ್ಯಾಲಕ್ಸಿ S24 ಸರಣಿ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣಗೊಳಿಸಲಾಗಿದೆ. ಇದರಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಸಾಕಷ್ಟು ರೋಮಾಂಚನಕಾರಿ ಫೀಚರ್ಸ್‌ಗಳನ್ನು ಒಳಗೊಂಡಿದೆ. ಈ ಮೂಲಕ ಮೊಬೈಲ್‌ ಮಾರುಕಟ್ಟೆಯಲ್ಲಿ ಹೊಸದೊಂದು ಸಂಚಲನ ಸೃಷ್ಟಿಸುವ ಸೂಚನೆ ನೀಡಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 3SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಹಿಂಭಾಗದಲ್ಲಿ ನಾಲ್ಕು ಕ್ಯಾಮೆರಾಗಳನ್ನು ಒಳಗೊಂಡಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನುಳಿದಂತೆ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಫೋನ್‌ ಲಾಂಚ್‌! ಭಾರತದಲ್ಲಿ ಬೆಲೆ ಎಷ್ಟು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಫೀಚರ್ಸ್‌ ಹೇಗಿದೆ?
Samsung Galaxy S24 Ultra ಸ್ಮಾರ್ಟ್‌ಫೋನ್‌ 6.8 ಇಂಚಿನ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 3120 x 1440 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಈ ಡಿಸ್‌ಪ್ಲೇ 505 PPI ಪಿಕ್ಸೆಲ್‌ ಸಾಂದ್ರತೆಯೊಂದಿಗೆ, 2600 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ. ಇದು 1-120Hz ನಡುವಿನ ವೇರಿಯಬಲ್ ರಿಫ್ರೆಶ್ ದರದೊಂದಿಗೆ ಸುಗಮ ದೃಶ್ಯ ಅನುಭವವನ್ನು ಒದಗಿಸುತ್ತದೆ. ಜೊತೆಗೆ ಇದು ನೋಟ್-ಟೇಕಿಂಗ್, ಡ್ರಾಯಿಂಗ್ ಮತ್ತು ಡಾಕ್ಯುಮೆಂಟ್ ಎಡಿಟಿಂಗ್‌ಗಾಗಿ ಎಸ್ ಪೆನ್ ಅನ್ನು ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಪ್ರೊಸೆಸರ್‌ ಯಾವುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ರನ್‌ ಆಗಲಿದೆ. ಹಾಗೆಯೇ 12 GB RAM ಮತ್ತು 256GB, 512GB, ಹಾಗೂ 1TB ವರೆಗೆ ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ನೀಡಲಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಫೋನ್‌ ಲಾಂಚ್‌! ಭಾರತದಲ್ಲಿ ಬೆಲೆ ಎಷ್ಟು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಕ್ಯಾಮೆರಾ ರಚನೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಪಡೆದಿದೆ. ಇದರಲ್ಲಿ ಮೊದಲನೆ ಕ್ಯಾಮೆರಾ 200 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹೊಂದಿದೆ. ನಾಲ್ಕನೇ ಕ್ಯಾಮೆರಾ 10 ಮೆಗಾಪಿಕ್ಸೆಲ್‌ ಸೆನ್ಸಾರ್‌ ಟೆಲಿಫೋಟೋ ಲೆನ್ಸ್ ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೇಗದ ಚಾರ್ಜಿಂಗ್ ಬೆಂಬಲವನ್ನು ಪಡೆದಿದೆ. ಇದಲ್ಲದೆ 2.0 ತಂತ್ರಜ್ಞಾನ ಮತ್ತು ವೈರ್‌ಲೆಸ್ ಪವರ್ ಹಂಚಿಕೆಯನ್ನು ಸಹ ಒಳಗೊಂಡಿದೆ. ಇದರಿಂದ ಕೇವಲ 30 ನಿಮಿಷದಲ್ಲಿ 65% ಚಾರ್ಜಿಂಗ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 7, Wi-Fi ಡೈರೆಕ್ಟ್, ಬ್ಲೂಟೂತ್ 5.3 ಮತ್ತು USB ಟೈಪ್-C ಪೋರ್ಟ್ ಸೇರಿದೆ. ಇದಲ್ಲದೆ ಅಪ್ಲಿಕೇಶನ್‌ಗಳನ್ನು ಪ್ರವೇಶಿಸಲು ಹ್ಯಾಂಡ್‌ಸೆಟ್ Samsung Knox, Knox Vault ಮತ್ತು ಪಾಸ್‌ಕೀಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಫೋನ್‌ ಲಾಂಚ್‌! ಭಾರತದಲ್ಲಿ ಬೆಲೆ ಎಷ್ಟು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ S24 ಅಲ್ಟ್ರಾ ಸ್ಮಾರ್ಟ್‌ಫೋನ್‌ 12GB + 256GB ಸ್ಟೋರೇಜ್ ರೂಪಾಂತರ ಆಯ್ಕೆಗೆ $1,299 (ಸುಮಾರು 98,300ರೂ) ಆರಂಭಿಕ ಬೆಲೆಯನ್ನು ಹೊಂದಿದೆ. ಇದು 12GB + 512GB ಆಯ್ಕೆಗೆ $1,419 (ಸುಮಾರು 1,18,000ರೂ)ಬೆಲೆಯನ್ನು ಪಡೆದಿದೆ. ಇದರ 12GB + 1TB ಆಯ್ಕೆಯು $1,659 (ಸುಮಾರು 1,38,000ರೂ)ಬೆಲೆಯಲ್ಲಿ ಬರಲಿದೆ. ಇದು ಟೈಟಾನಿಯಂ ಹಳದಿ, ಟೈಟಾನಿಯಂ ಕಪ್ಪು, ಟೈಟಾನಿಯಂ ಗ್ರೇ ಮತ್ತು ಟೈಟಾನಿಯಂ ಪರ್ಪಲ್ ಕಲರ್‌ನಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಜನವರಿ 31ರಿಂದ ಆಯ್ದ ಮಾರುಕಟ್ಟೆಗಳಲ್ಲಿ ಮಾರಾಟವಾಗಲಿದೆ.
Best Mobiles in India

English summary
Samsung Galaxy S24 Ultra with Advanced AI Features Launched! Price Detail in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+