Samsung: 3 ಹೊಸ ಫೋನ್ ಬಿಡುಗಡೆಗೆ ಸಿದ್ಧ; ಬೆಲೆ ಲೀಕ್.. 200MP ಕ್ಯಾಮೆರಾ ಖಚಿತ!
ಟೆಕ್ ದೈತ್ಯ ಸ್ಯಾಮ್‌ಸಂಗ್ (Samsung) ತನ್ನ ಗ್ರಾಹಕರಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ನೀಡಲು ಸಜ್ಜಾಗಿದೆ. ಶೀಘ್ರದಲ್ಲೇ ನಾಲ್ಕು ಹೊಸ ಮೊಬೈಲ್ ಬಿಡುಗಡೆ ಮಾಡಲಿದೆ. ಇವು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸರಣಿಯ (Samsung Galaxy S25 Series) ಅಡಿಯಲ್ಲಿ ಬರಲಿವೆ. ಇತ್ತೀಚೆಗೆ, ಬಿಡುಗಡೆ ದಿನಾಂಕ ಸೋರಿಕೆಯಾಗಿದೆ. ಇದೀಗ, ಮುಂಬರುವ ಹೊಸ ಫೋನ್‌ಗಳ ಬೆಲೆ ಕೂಡ ಬಹಿರಂಗವಾಗಿದೆ. ಬನ್ನಿ, ಈ ಹೊಸ ಸರಣಿಯ ಮೊಬೈಲ್‌ಗಳ ವಿಶೇಷತೆ ಏನು? ಬೆಲೆ ಎಷ್ಟು? ಎನ್ನುವುದನ್ನು ತಿಳಿಯೋಣ.
ನಿರೀಕ್ಷೆಯಂತೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸರಣಿಯು 2025ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಕಂಪನಿಯು ಮೂರು ಹೊಸ ಮೊಬೈಲ್‌ಗಳನ್ನು ಬಿಡುಗಡೆ ಮಾಡಲಿದೆ. ಅವುಗಳೇ Samsung Galaxy S25, Samsung Galaxy S25 Plus ಮತ್ತು Samsung Galaxy S25 Ultra ಫೋನ್‌ಗಳು. ಇದರೊಂದಿಗೆ, Samsung Galaxy S25 FE ಮೊಬೈಲ್ ಸಹ ಲಾಂಚ್ ಆಗುವ ಸಾಧ್ಯತೆಯಿದೆ. ಕಂಪನಿಯು ಜನವರಿ 5 ರಿಂದ ಪ್ರೀ-ಬುಕಿಂಗ್ ಪ್ರಾರಂಭವಾಗಲಿದೆ. ಮುಂಬರುವ ಹೊಸ ಫೋನ್‌ಗಳ ಡಿಸೈನ್, ಕಲರ್ ಮತ್ತು ಪ್ರೊಸೆಸರ್ ಬಗ್ಗೆ ಇಲ್ಲಿದೆ ಮಾಹಿತಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸರಣಿ ಬಿಡುಗಡೆ ಯಾವಾಗ?
ಕಂಪನಿಯು ಈವರೆಗೆ ಗ್ಯಾಲಕ್ಸಿ S25 ಸರಣಿಯ ಅಧಿಕೃತ ಬಿಡುಗಡೆ ದಿನಾಂಕವನ್ನು ಘೋಷಿಸಿಲ್ಲ. ಆದರೆ, ಮುಂದಿನ ವರ್ಷ (2025) ಜನವರಿಯಲ್ಲಿ ಬಿಡುಗಡೆಯಾಗುವುದು ಖಚಿತವಾಗಿದೆ. ಪ್ರಸ್ತುತ, ಯಾವುದೇ ನಿಗದಿತ ದಿನಾಂಕವನ್ನು ಬಹಿರಂಗಪಡಿಸಿಲ್ಲ. ಕಂಪನಿಯು ಜನವರಿ ತಿಂಗಳ ಅಂತ್ಯದಲ್ಲಿ (ಕೊನೆಯ ವಾರ) ಅಮೇರಿಕಾದಲ್ಲಿ ದೊಡ್ಡ ಸಮಾರಂಭವನ್ನು ಆಯೋಜಿಸಲಿದೆ. ಈ ವೇಳೆ ಮೂರು ಹೊಸ ಮೊಬೈಲ್‌ಗಳನ್ನು ಲೋಕಾರ್ಪಣೆಗೊಳಿಸಲಿದೆ. ಕಳೆದ ವರ್ಷ ಗ್ಯಾಲಕ್ಸಿ S24 ಸರಣಿಯನ್ನು ಕ್ಯಾಲಿಫೋರ್ನಿಯಾದ ಸ್ಯಾನ್ ಜೋಸ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸರಣಿಯ ಬೆಲೆ
ಗ್ಯಾಲಕ್ಸಿ S25 ಅಲ್ಟ್ರಾ ಫೋನಿನ ಬೆಲೆ
12GB RAM + 256GB ಸ್ಟೋರೇಜ್ ಬೆಲೆ = 1,09,500 ರೂ.
12GB RAM + 512GB ಸ್ಟೋರೇಜ್ ಬೆಲೆ = 1,19,650 ರೂ.
16GB RAM + 1TB ಸ್ಟೋರೇಜ್ ಬೆಲೆ = 1,39,890 ರೂ.
ಗ್ಯಾಲಕ್ಸಿ S25 ಪ್ಲಸ್ ಫೋನಿನ ಬೆಲೆ
12GB RAM + 256GB ಸ್ಟೋರೇಜ್ ಬೆಲೆ = 84,250 ರೂ.
12GB RAM + 512GB ಸ್ಟೋರೇಜ್ ಬೆಲೆ = 94,350 ರೂ.
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಫೋನನ್ನು ಭಾರತದಲ್ಲಿ 74,999 ರೂ.ಗಳ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಬಹುದು. ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಪ್ಲಸ್ ಅನ್ನು 85,000 ರೂ.ಗಳ ಆರಂಭಿಕ ಬೆಲೆಯಲ್ಲಿ ಪರಿಚಯಿಸುವ ಸಾಧ್ಯತೆಯಿದೆ. ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್ ನಾಲ್ಕು ಬಣ್ಣಗಳಲ್ಲಿ ಬಿಡುಗಡೆಯಾಗಲಿದೆ. ನೀವು ಟೈಟಾನಿಯಂ ಗ್ರೇ, ಟೈಟಾನಿಯಂ ಸಿಲ್ವರ್, ಟೈಟಾನಿಯಂ ಬ್ಲೂ ಮತ್ತು ಟೈಟಾನಿಯಂ ಬ್ಲಾಕ್ ಬಣ್ಣಗಳಲ್ಲಿ ಖರೀದಿಸಬಹುದು.
ಗ್ಯಾಲಕ್ಸಿ S25 ಅಲ್ಟ್ರಾ ಫೋನಿನ ವೈಶಿಷ್ಟ್ಯಗಳು
ಡಿಸ್ಪ್ಲೇ ವಿವರ
ವರದಿಯ ಪ್ರಕಾರ, ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್ 6.86 ಇಂಚಿನ ದೊಡ್ಡ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿರುವ ಸಾಧ್ಯತೆಯಿದೆ. ಇದು ಪಂಚ್ ಹೋಲ್ ಡಿಸ್ಪ್ಲೇ ಆಗಿದೆ. ಡಿಸ್ಪ್ಲೇಯು 2600 ನಿಟ್ಸ್ ಬ್ರೈಟ್‌ನೆಸ್ ಮತ್ತು 120Hz ರಿಫ್ರೆಶ್ ದರದ ಬೆಂಬಲ ಪಡೆದಿದೆ. ಜೊತೆಗೆ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸಂವೇದಕ ಸಹ ಇರುತ್ತದೆ.
ಪ್ರೊಸೆಸರ್ ಸಾಮರ್ಥ್ಯ
ಮುಂಬರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನ್ ಹೊಸ ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗುವುದು ಖಚಿತವಾಗಿದೆ. ವಿಶೇಷವೆಂದರೆ, OnePlus 13, Xiaomi 15, iQOO 13 ಮತ್ತು Realme GT 7 Pro ಮೊಬೈಲ್ ಸಹ ಇದೇ ಪ್ರೊಸೆಸರ್ ಹೊಂದಿವೆ. ಈ ಫೋನಿನಲ್ಲಿ 12GB RAM ಲಭ್ಯವಿರಲಿದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಫೋನಿನಲ್ಲಿ OIS ಮತ್ತು PDAF ಬೆಂಬಲದೊಂದಿಗೆ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇರಲಿದೆ. ಜೊತೆಗೆ 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಮತ್ತು 10 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಲಭ್ಯವಿರಲಿದೆ. ಸೆಲ್ಫಿಗಳು ಮತ್ತು ವಿಡಿಯೋ ಕರೆಗಾಗಿ, ಈ ಫೋನ್ 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಕಂಪನಿಯು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನನ್ನು 5500mAh ಸಾಮರ್ಥ್ಯದ ಬ್ಯಾಟರಿಯೊಂದಿಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಹೊಂದಿರಲಿದೆ.
ಈ ಸುದ್ದಿ ಓದಿದ್ದೀರಾ?: 5000 ಕುಸಿತ! 31% ಡಿಸ್ಕೌಂಟ್.. ಕಡಿಮೆ ಬೆಲೆಗೆ Lava Storm 5G ಸೇಲ್; ಹೊಸ ಬೆಲೆ ಎಷ್ಟು?

ಗ್ಯಾಲಕ್ಸಿ S25 ಮತ್ತು ಗ್ಯಾಲಕ್ಸಿ S25 ಪ್ಲಸ್ ವೈಶಿಷ್ಟ್ಯಗಳು
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಫೋನ್ 6.17 ಇಂಚಿನ ಡಿಸ್ಪ್ಲೇಯನ್ನು ಹೊಂದಿರಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಪ್ಲಸ್ ಮೊಬೈಲ್ 6.7 ಇಂಚಿನ ಡಿಸ್ಪ್ಲೇಯನ್ನು ಹೊಂದಿರಲಿದೆ. ಕಂಪನಿಯು ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಪ್ಲಸ್ ಫೋನನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಸರಣಿಯ ಮೊಬೈಲ್‌ಗಳು ಆಂಡ್ರಾಯ್ಡ್ 15 ಆಧಾರಿತ ಒನ್ ಯುಐ 7 ನಲ್ಲಿ ಕೆಲಸ ಮಾಡಲಿವೆ.
ಮುಂಬರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಪ್ಲಸ್ ಮೊಬೈಲ್ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿರಲಿದೆ. ಆದರೆ, ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್‌ನಲ್ಲಿ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ, 50 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ, 10 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಮತ್ತು 50 ಮೆಗಾಪಿಕ್ಸೆಲ್ ಟೆಲಿಫೋಟೋ ಕ್ಯಾಮೆರಾ ಲಭ್ಯವಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ, ಈ ಫೋನ್‌ಗಳು 12 ಮೆಗಾಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿರಲಿವೆ.


Click it and Unblock the Notifications








