17,000 ಬಿಗ್ ಆಫರ್! 200MP ಕ್ಯಾಮೆರಾ.. 1TB ಸ್ಟೋರೇಜ್.. ದೈತ್ಯ Samsung ಫೋನಿನ ಸೇಲ್ ಶುರು
ಹೊಸ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಇಲ್ಲಿದೆ ಒಳ್ಳೆಯ ಸುದ್ದಿ. ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾದ ಫೋನನ್ನು ಬೊಂಬಾಟ್ ಆಫರ್‌ನೊಂದಿಗೆ ಕೊಳ್ಳಬಹುದು. ಹೌದು, ಬಹುನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 (Samsung Galaxy S25) ಸರಣಿಯು ಈಗ ಖರೀದಿಗೆ ಲಭ್ಯವಿದೆ. ಈ ಪೈಕಿ, ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ (Samsung Galaxy S25 Ultra) ಫೋನಿಗೆ ಭಾರೀ ರಿಯಾಯಿತಿ ಲಭ್ಯವಿದೆ. ಬನ್ನಿ, ಈ ಫೋನಿನ ಬೆಲೆ ಮತ್ತು ವಿಶೇಷತೆಗಳನ್ನು ತಿಳಿಯೋಣ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನಿನ ಜೊತೆಗೆ Samsung Galaxy S25 ಮತ್ತು Samsung Galaxy S25+ ಸ್ಮಾರ್ಟ್‌ಫೋನ್‌ಗಳನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಶಕ್ತಿಶಾಲಿ ಫೋನ್ ಆಗಿದೆ. ಈ ಫೋನ್ 200 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 ಎಲೈಟ್ ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಹಾಗೆಯೇ 6.86 ಇಂಚಿನ ಡಿಸ್ಪ್ಲೇ ಲಭ್ಯವಿದೆ. 12GB RAM + 1TB ಸ್ಟೋರೇಜ್, 5000mAh ಬ್ಯಾಟರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಬೆಲೆ
12GB RAM + 256GB ಸ್ಟೋರೇಜ್ ಬೆಲೆ = 1,29,999 ರೂ.
12GB RAM + 512GB ಸ್ಟೋರೇಜ್ ಬೆಲೆ = 1,41,999 ರೂ.
12GB RAM + 1TB ಸ್ಟೋರೇಜ್ ಬೆಲೆ = 1,65,999 ರೂ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಸ್ಮಾರ್ಟ್‌ಫೋನ್ ಮೂರು ಸ್ಟೋರೇಜ್ ರೂಪಾಂತರಗಳಲ್ಲಿ ಬಿಡುಗಡೆಯಾಗಿದೆ. ಕಂಪನಿಯು ಈ ಸ್ಮಾರ್ಟ್‌ಫೋನ್ ಖರೀದಿ ಮೇಲೆ ಸಖತ್ ಆಫರ್ ನೀಡಿದೆ. ನೀವು ಎಚ್‌ಡಿಎಫ್‌ಸಿ ಕ್ರೆಡಿಟ್ ಕಾರ್ಡ್ ಬಳಸಿದರೆ, ಸಂಪೂರ್ಣ ಪಾವತಿಯ ಮೇಲೆ 8,000 ರೂ. ಮತ್ತು ಇಎಂಐನಲ್ಲಿ 7,000 ರೂ.ಗಳ ರಿಯಾಯಿತಿ ಪಡೆಯಬಹುದು. ಈ ಫೋನ್ ಡಬಲ್ ಸ್ಟೋರೇಜ್ ಅಪ್‌ಗ್ರೇಡ್ ಆಫರ್ ಸಹ ಪಡೆದಿದೆ. ನೀವು 512GB ರೂಪಾಂತರವನ್ನು 12 ಸಾವಿರ ರೂ. ಅಗ್ಗವಾಗಿ ಅಂದರೆ, 256GB ರೂಪಾಂತರದ ಬೆಲೆಯಲ್ಲಿ ಖರೀದಿಸಬಹುದು. ಕಂಪನಿಯು ಈ ಫೋನ್ ಖರೀದಿ ಮೇಲೆ 9,000 ರೂ.ಗಳ ಎಕ್ಸ್‌ಚೇಂಜ್ ಬೋನಸ್ ನೀಡುತ್ತಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ವೈಶಿಷ್ಟ್ಯಗಳು
ಡಿಸ್ಪ್ಲೇ ಹೇಗಿದೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಮೊಬೈಲ್ 6.9 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 120Hz ರಿಫ್ರೆಶ್ ದರ ಮತ್ತು 2600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಪಡೆದಿದೆ. ಈ ಮೊಬೈಲ್ ಅಲ್ಟ್ರಾಸಾನಿಕ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ತಂತ್ರಜ್ಞಾನ ಹೊಂದಿದೆ. ಈ ಡಿಸ್ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಆರ್ಮರ್ 2 ಗ್ಲಾಸ್‌ನಿಂದ ರಕ್ಷಣೆ ಪಡೆದಿದೆ.
ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಫೋನ್ ಸ್ನಾಪ್‌ಡ್ರಾಗನ್ 8 ಎಲೈಟ್ ಆಕ್ಟಾಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 3 ನ್ಯಾನೋಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಇದು ಆಂಡ್ರಾಯ್ಡ್ 15 ಆಧಾರಿತ ಸ್ಯಾಮ್‌ಸಂಗ್‌ನ One UI 7 ಓಎಸ್‌ನಲ್ಲಿ ಕೆಲಸ ಮಾಡುತ್ತದೆ. ಈ ಫೋನ್ 12GB RAM ಹೊಂದಿದೆ. ಇದು 256GB ಮತ್ತು 512GB ಜೊತೆಗೆ 1TB ಸ್ಟೋರೇಜ್‌ನೊಂದಿಗೆ ಬರುತ್ತದೆ.
ಕ್ಯಾಮೆರಾ ಸೆಟಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ ಸ್ಮಾರ್ಟ್‌ಫೋನ್ ಫೋಟೋಗ್ರಫಿ ಪ್ರಿಯರಿಗೆ ಉತ್ತಮ ಆಯ್ಕೆಯಾಗಿದೆ. ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ 200 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜೊತೆಗೆ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್, 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು 10 ಮೆಗಾಪಿಕ್ಸೆಲ್ ಲೆನ್ಸ್ ಹೊಂದಿದೆ. ಈ ಫೋನಿನಲ್ಲಿ 12 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ.
ಬ್ಯಾಟರಿ ಮತ್ತು ಚಾರ್ಜಿಂಗ್
ಸ್ಯಾಮ್‌ಸಂಗ್ ಗ್ಯಾಲಕ್ಸಿ S25 ಅಲ್ಟ್ರಾ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 45W ವೇಗದ ಚಾರ್ಜಿಂಗ್ ಸೌಲಭ್ಯ ಒದಗಿಸಲಾಗಿದೆ. ನೀವು ಕೇವಲ 30 ನಿಮಿಷಗಳಲ್ಲಿ ಶೇ.65 ರಷ್ಟು ಚಾರ್ಜ್ ಮಾಡಬಹುದು.


Click it and Unblock the Notifications








