ಮಕ್ಕಳಿಗಾಗಿ ಹೊಸ ಮಾದರಿಯ ಟ್ಯಾಬ್‌ ಲಾಂಚ್‌ ಮಾಡಿದ ಸ್ಯಾಮ್‌ಸಂಗ್‌!

|

ದಕ್ಷಿಣ ಕೋರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಸ್ಮಾರ್ಟ್‌ಫೋನ್‌ ಮಾತ್ರವಲ್ಲದೆ ಲ್ಯಾಪ್‌ಟಾಪ್‌, ಸ್ಮಾರ್ಟ್‌ಟಿವಿ ವಲಯದಲ್ಲೂ ಕೂಡ ತನ್ನ ಕಮಾಲ್‌ ತೋರಿಸಿದೆ. ಸದ್ಯ ಇದೀಗ ಮಕ್ಕಳಿಗಾಗಿಯೇ ವಿಶೇಷವಾಗಿ ವಿನ್ಯಾಸಗೊಳಿಸಲಾದ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್‌ A7 ಲೈಟ್‌ ಎ ಕಿಡ್ಸ್‌ ಅನ್ನು ಬಿಡುಗಡೆ ಮಾಡಿದೆ. ಇದು 8.7-ಇಂಚಿನ TFT ಟಚ್‌ಸ್ಕ್ರೀನ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್ ಎ ಕಿಡ್ಸ್ ಎಂಬ ಟ್ಯಾಬ್ಲೆಟ್ ಅನ್ನು ರಷ್ಯಾದಲ್ಲಿ ಮಕ್ಕಳ ಬ್ರ್ಯಾಂಡ್ ಸ್ಮೆಶರಿಕಿ ಸಹಯೋಗದೊಂದಿಗೆ ಬಿಡುಗಡೆ ಮಾಡಲಾಗಿದೆ. ಇದು Lego ನಂತಹ ಪಾಲುದಾರ ಬ್ರಾಂಡ್‌ಗಳಿಂದ 20 ಕ್ಕೂ ಹೆಚ್ಚು ಶೈಕ್ಷಣಿಕ ಮತ್ತು ಮನರಂಜನಾ ಅಪ್ಲಿಕೇಶನ್‌ಗಳೊಂದಿಗೆ ಪ್ರೀ ಲೋಡ್ ಆಗಲಿದೆ. ಇದಲ್ಲದೆ ಈ ಟ್ಯಾಬ್ಲೆಟ್ ಮಾರುಸಿಯಾ ಎಂಬ ಡಿಜಿಟಲ್ ಅಸಿಸ್ಟೆಂಟ್‌ ಸ್ಪೇಷಲ್‌ ಇಂಟರ್ಫೇಸ್ ಅನ್ನು ಸಹ ಒಳಗೊಂಡಿರುತ್ತದೆ. ಹಾಗಾದ್ರೆ ಈ ಹೊಸ ಟ್ಯಾಬ್ಲೆಟ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್‌ A

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್‌ A ಕಿಡ್ಸ್‌ ವಿಶೇಷವಾಗಿ ಮಕ್ಕಳಿಗಾಗಿ ವಿನ್ಯಾಸಗೊಳಿಸಲಾದ ಇಂಟರ್ಫೇಸ್ ಅನ್ನು ಒಳಗೊಂಡಿದೆ. ಇದು 1,340x800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 8.7-ಇಂಚಿನ TFT ಟಚ್‌ಸ್ಕ್ರೀನ್ ಅನ್ನು ಹೊಂದಿದೆ. ಇನ್ನು ಈ ಗ್ಯಾಲಕ್ಸಿ ಟ್ಯಾಬ್‌ನಲ್ಲಿ ಮಕ್ಕಳಿಗೆ ಪ್ರವೇಶವನ್ನು ಸೀಮಿತಗೊಳಿಸಲು ಮತ್ತು ಮಕ್ಕಳಿಗೆ ಲಭ್ಯವಿರುವ ವಿಷಯದ ಪ್ರಕಾರವನ್ನು ಮಾತ್ರ ಕಾನ್ಫಿಗರ್ ಮಾಡಲು ಪೆರೇಂಟ್ಸ್‌ ಕಂಟ್ರೋಲ್‌ ಅನ್ನು ಹೊಂದಿದೆ. ಅಲ್ಲದೆ ಆಕಸ್ಮಿಕವಾಗಿ ಕೆಳಗೆ ಬಿದ್ದರೂ ಕೂಡ ಹೆಚ್ಚು ಡ್ಯಾಮೇಜ್‌ ಆಗದ ರೀತಿಯಲ್ಲಿ ರಕ್ಷಿಸಲು ಟ್ಯಾಬ್ಲೆಟ್ ಶಾಕ್-ರೆಸಿಸ್ಟನ್ಟ್ ಕೇಸ್ ಅನ್ನು ಒಳಗೊಂಡಿದೆ.

ಗ್ಯಾಲಕ್ಸಿ ಟ್ಯಾಬ್‌ A ಕಿಡ್ಸ್‌

ಇನ್ನು ಈ ಗ್ಯಾಲಕ್ಸಿ ಟ್ಯಾಬ್‌ A ಕಿಡ್ಸ್‌ ಮೀಡಿಯಾ ಟೆಕ್‌ ಹಿಲಿಯೋ P22T SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟ್ಯಾಬ್ಲೆಟ್

ಈ ಟ್ಯಾಬ್ಲೆಟ್ ಆಟೋಫೋಕಸ್‌ನೊಂದಿಗೆ 8 ಮೆಗಾಪಿಕ್ಸೆಲ್ ಪ್ರೈಮೆರಿ ಕ್ಯಾಮೆರಾವನ್ನು ಹೊಂದಿದೆ. ಈ ಪ್ರೈಮರಿ ಕ್ಯಾಮೆರಾವು 30fps ನಲ್ಲಿ ಫುಲ್‌ HD ವೀಡಿಯೊಗಳನ್ನು ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಟ್ಯಾಬ್ಲೆಟ್‌ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್‌ ಎ ಕಿಡ್ಸ್‌ 5,100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಂಪೂರ್ಣ ದಿನದ ಸಕ್ರಿಯ ಬಳಕೆಯನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಇದು Wi-Fi-ಒನ್ಲಿ ಟ್ಯಾಬ್ಲೆಟ್ ಆಗಿದ್ದು, ಕನೆಕ್ಟಿವಿಟಿ ಆಯ್ಕೆಗಳಲ್ಲಿ Bluetooth v5.0 ಸಂಪರ್ಕವನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ ಈ ಟ್ಯಾಬ್ಲೆಟ್‌ನಲ್ಲಿ ಕಥೆಗಳು, ಮ್ಯೂಸಿಕ್‌ ಮತ್ತು ಆಟಗಳೊಂದಿಗೆ ಮಕ್ಕಳನ್ನು ಮನರಂಜಿಸಲು ಪ್ರೋಗ್ರಾಮ್ ಮಾಡಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A ಕಿಡ್ಸ್‌ ಟ್ಯಾಬ್ಲೆಟ್‌ ರಷ್ಯಾದಲ್ಲಿ 14,990 RUB (ಸುಮಾರು 15,500ರೂ.) ಬೆಲೆ ಹೊಂದಿದೆ. ಒಇದು ಅಧಿಕೃತ ಸ್ಯಾಮ್‌ಸಂಗ್ ಆನ್‌ಲೈನ್ ಸ್ಟೋರ್ ಮತ್ತು ದೇಶದಲ್ಲಿನ ಚಿಲ್ಲರೆ ಅಂಗಡಿಗಳ ಮೂಲಕ ರಷ್ಯಾದಲ್ಲಿ ಮಾತ್ರ ಖರೀದಿಸಲು ಪ್ರಸ್ತುತ ಲಭ್ಯವಿದೆ. ಇನ್ನು ಭಾರತದಲ್ಲಿ ಮತ್ತು ಇತರ ಮಾರುಕಟ್ಟೆಗಳಲ್ಲಿ ಈ ಟ್ಯಾಬ್ಲೆಟ್‌ ಯಾವಾಗ ಲಭ್ಯವಾಗಲಿದೆ ಅನ್ನೊ ಮಾಹಿತಿ ಇನ್ನು ಬಹಿರಂಗವಾಗಿಲ್ಲ.

Best Mobiles in India

English summary
Samsung Galaxy Tab A Kids With 5,100mAh Battery Launched.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X