ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ A7 ಟ್ಯಾಬ್ ಬಿಡುಗಡೆ!
ದಕ್ಷಿಣ ಕೋರಿಯಾದ ಸ್ಮಾರ್ಟ್‌ಫೋನ್ ದಿಗ್ಗಜ ಸ್ಯಾಮ್‌ಸಂಗ್ ತನ್ನ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಅಲ್ಲದೆ ಹಲವು ವೈವಿಧ್ಯಮಯ ಟ್ಯಾಬ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಗ್ಯಾಲಕ್ಸಿ ಟ್ಯಾಬ್ A7 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಟ್ಯಾಬ್ ಆಕರ್ಷಕ ವಿನ್ಯಾಶವನ್ನು ಹೊಂದಿದ್ದು, LTE ಮತ್ತು ವೈಫೈ ಎರಡೂ ರೂಪಾಂತರಗಳಲ್ಲಿ ಲಭ್ಯವಾಗಲಿದೆ. ಇನ್ನು ಈ ಟ್ಯಾಬ್ 10.4 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ ಕ್ವಾಡ್ ಸ್ಪೀಕರ್‌ಗಳನ್ನು ಸಹ ಒಳಗೊಂಡಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆ ತನ್ನ ಹೊಸ ಗ್ಯಾಲಕ್ಸಿ ಟ್ಯಾಬ್ A7 ಅನ್ನು ಭಾರತದ ಮಾರುಕಟ್ಟೆಗೆ ಪರಿಚಯಿಸಿದೆ. ಇದು 7mm ಥಿಕ್‌ನೆಸ್ ಅನ್ನು ಹೊಂದಿದ್ದು, ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಒಳಗೊಂಡಿದೆ. ಇದಲ್ಲದೆ ಈ ಟ್ಯಾಬ್ 7,040mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಅಲ್ಲದೆ ಇದು ಕ್ವಾಡ್ ಸ್ಪೀಕರ್‌ಗಳನ್ನ ಹೊಂದಿರುವುದರಿಂದ ಇದು ಡಾಲ್ಬಿ ಅಟ್ಮೋಸ್ ಅನ್ನು ಬೆಂಬಲಿಸಲಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಟ್ಯಾಬ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿನ್ಯಾಸ
ಗ್ಯಾಲಕ್ಸಿ ಟ್ಯಾಬ್ A7 2,000x1,200 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 10.4-ಇಂಚಿನ WUXGA + TFT ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು IPS LCD ಕ್ಯಾಪಸಿಟಿವ್ ಟಚ್‌ಸ್ಕ್ರೀನ್ ಅನ್ನು ಹೊಂದಿದ್ದು, 16M ಕಲರ್ಸ್ ಅನ್ನು ಬೆಂಬಲಿಸಲಿದೆ. ಇನ್ನು ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತ 79.0% ರಷ್ಟಿದೆ. ಅಲ್ಲದೆ 224 ppi ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್ ಬಲ
ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಒನ್ ಯುಐ 2.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದು 3GB RAM ಮತ್ತು 32GB ಆನ್‌ಬೋರ್ಡ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿಶೇಷ
ಗ್ಯಾಲಕ್ಸಿ ಟ್ಯಾಬ್ A7 ಸಿಂಗಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಇದು 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದರಲ್ಲಿ ಫುಲ್‌ಹೆಚ್‌ಡಿ ವೀಡಿಯೊಗಳನ್ನು 30fpsನಲ್ಲಿ ರೆಕಾರ್ಡ್ ಮಾಡಬಹುದಾಗಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಈ ಟ್ಯಾಬ್ಲೆಟ್ 7,040mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಬ್ಯಾಂಡ್ ವೈ-ಫೈ, ಬ್ಲೂಟೂತ್ 5.0, ಜಿಪಿಎಸ್, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ A7 ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಗ್ಯಾಲಕ್ಸಿ ಟ್ಯಾಬ್ A7 ವೈ-ಫೈ ಮಾದರಿಯ ಬೆಲೆ 17,999 ರೂ ಮತ್ತು ಎಲ್‌ಟಿಇ ರೂಪಾಂತರದ ಬೆಲೆ 21,999 ರೂ.ಆಗಿದೆ. ಇದನ್ನು ಡಾರ್ಕ್ ಗ್ರೇ, ಗೋಲ್ಡ್ ಮತ್ತು ಸಿಲ್ವರ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಇನ್ನು ಗ್ಯಾಲಕ್ಸಿ ಟ್ಯಾಬ್ A7 ಸ್ಯಾಮ್‌ಸಂಗ್.ಕಾಮ್, ಪ್ರಮುಖ ಆನ್‌ಲೈನ್ ಪೋರ್ಟಲ್‌ಗಳು ಮತ್ತು ಆಯ್ದ ರಿಟೇಲ್ ಶಾಪ್‌ಗಳಲ್ಲಿ ಸದ್ಯ ಪ್ರಿ ಬುಕ್ಕಿಂಗ್ ಮಾಡಬಹುದಾಗಿದೆ. ಇನ್ನು ಕೂಡ ಮಾರಾಟದ ದಿನಾಂಕ ಲಭ್ಯವಾಗಿಲ್ಲ .


Click it and Unblock the Notifications








