ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S8 ಸರಣಿ ಬಿಡುಗಡೆ! ವಿಶೇಷತೆ ಏನು?
ದಕ್ಷಿಣ ಕೋರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ಗ್ಯಾಲಕ್ಸಿ ಅನ್‌ಪ್ಯಾಕ್ಡ್ ವರ್ಚುವಲ್ ಈವೆಂಟ್ ಅನೇಕ ಡಿವೈಸ್‌ಗಳನ್ನು ಲಾಂಚ್ ಮಾಡಿದೆ. ಬಹು ನಿರೀಕ್ಷಿತ ಗ್ಯಾಲಕ್ಸಿ S22 ಸರಣಿಯ ಜೊತೆಗೆ ಗ್ಯಾಲಕ್ಸಿ ಟ್ಯಾಬ್ S8 ಸರಣಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಸರಣಿಯಲ್ಲಿ ಗ್ಯಾಲಕ್ಸಿ ಟ್ಯಾಬ್ S8, ಗ್ಯಾಲಕ್ಸಿ ಟ್ಯಾಬ್ S8+ ಮತ್ತು ಗ್ಯಾಲಕ್ಸಿ ಟ್ಯಾಬ್ S8 ಅಲ್ಟ್ರಾ ಸೇರಿವೆ. ಈ ಗ್ಯಾಲಕ್ಸಿ ಟ್ಯಾಬ್ S8 ಸರಣಿಯು 5G ಕನೆಕ್ಟಿವಿಟಿಯನ್ನು ಬೆಂಬಲಿಸಲಿದೆ. ಇದಲ್ಲದೆ ಗ್ಯಾಲಕ್ಸಿ ಟ್ಯಾಬ್ S8+ ಮತ್ತು ಗ್ಯಾಲಕ್ಸಿ ಟ್ಯಾಬ್ S8 ಅಲ್ಟ್ರಾ ಅಪ್ಡೇಟ್ S ಪೆನ್‌ನೊಂದಿಗೆ ಸಂಯೋಜಿಸಲಾಗಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಹೊಸ ಗ್ಯಾಲಕ್ಸಿ ಟ್ಯಾಬ್ S8 ಸರಣಿಯನ್ನು ಪರಿಚಯಿಸಿದೆ. ಈ ಟ್ಯಾಬ್‌ಗಳು ಹೊಸ ಮಾದರಿಯ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿವೆ. ಇದರಲ್ಲಿ ಗ್ಯಾಲಕ್ಸಿ ಟ್ಯಾಬ್ S8 11 ಇಂಚಿನ ಡಿಸ್‌ಪ್ಲೇ ಹೊಂದಿವೆ. ಆದರೆ ಗ್ಯಾಲಕ್ಸಿ ಟ್ಯಾಬ್ S8+ 12.4 ಇಂಚಿನ ಡಿಸ್‌ಪ್ಲೇ ಪಡೆದುಕೊಂಡಿದೆ. ಹಾಗೆಯೇ ಗ್ಯಾಲಕ್ಸಿ S8 ಅಲ್ಟ್ರಾ 14.6 ಇಂಚಿನ ಡಿಸ್‌ಪ್ಲೇ ಒಳಗೊಂಡಿದೆ. ಇನ್ನುಳಿದಂತೆ ಈ ಗ್ಯಾಲಕ್ಸಿ ಟ್ಯಾಬ್ S8 ಸರಣಿ ಯಾವೆಲ್ಲಾ ವಿಶೇಷತೆ ಹೊಂದಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S8
ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S8 2,560x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 11 ಇಂಚಿನ WQXGA LTPS TFT ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 8 Gen 1 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ನಲ್ಲಿ ಒಂದು UI ಟ್ಯಾಬ್ 4 ಜೊತೆಗೆ ರನ್ ಆಗುತ್ತದೆ. ಹಾಗೆಯೇ 8GB RAM ಮತ್ತು 256GB ಸ್ಟೋರೇಜ್ ಹೊಂದಿದೆ. ಜೊತೆಗೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಟ್ಯಾಬ್ ಡ್ಯುಯಲ್ ರಿಯರ್ ಕ್ಯಾಮರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 6 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಈ ಟ್ಯಾಬ್ 8,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು ಸೂಪರ್ ಫಾಸ್ಟ್ ಚಾರ್ಜಿಂಗ್ 2.0 ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಮತ್ತು 4G LTE (ಐಚ್ಛಿಕ) ಜೊತೆಗೆ Wi-Fi 6E, ಬ್ಲೂಟೂತ್ v5.2, GPS/ A-GPS ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದನ್ನು ಟಚ್‌ಸ್ಕ್ರೀನ್‌ನೊಂದಿಗೆ ಎರಡನೇ ಮಾನಿಟರ್ ಆಗಿಯೂ ಬಳಸಬಹುದಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S8+
ಸ್ಯಾಮ್‌ಸಂಗ್ ಗ್ಯಾಲಕ್ಸಿ S8+ 2,800x1,752 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 12.4 ಇಂಚಿನ WQXGA+ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಆಧಾರಿತ One UI ಟ್ಯಾಬ್ 4 ನೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಹೊಂದಿದೆ. ಈ ಟ್ಯಾಬ್ಲೆಟ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 6 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 10,090mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸೂಪರ್ ಫಾಸ್ಟ್ ಚಾರ್ಜಿಂಗ್ 2.0 (45W ವರೆಗೆ) ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G ಮತ್ತು 4G LTE (ಐಚ್ಛಿಕ) ಜೊತೆಗೆ Wi-Fi 6E, ಬ್ಲೂಟೂತ್ v5.2, GPS/ A-GPS ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S8 ಅಲ್ಟ್ರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S8 ಅಲ್ಟ್ರಾ ಟ್ಯಾಬ್ಲೆಟ್ 14.6 ಇಂಚಿನ WQXGA+ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು 4nm ಆಕ್ಟಾ-ಕೋರ್ SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಆಧಾರಿತ One UI ಟ್ಯಾಬ್ 4 ನೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಇಂಟರ್ ಸ್ಟೊರೇಜ್ ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಟ್ಯಾಬ್ಲೆಟ್ ಕೂಡ ಡ್ಯುಯೆಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 6 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇನ್ನು 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 11,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು ಸೂಪರ್ ಫಾಸ್ಟ್ ಚಾರ್ಜಿಂಗ್ 2.0 ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 6E, ಬ್ಲೂಟೂತ್ v5.2, GPS/ A-GPS ಮತ್ತು USB ಟೈಪ್-C ಪೋರ್ಟ್ ಅನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S8 ಬೆಲೆ $699.99 (ಅಂದಾಜು 52,400ರೂ.) ಆಗಿದೆ. ಆದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S8+ ಆರಂಭಿಕ ಬೆಲೆ $899.99 (ಅಂದಾಜು 67,300ರೂ) ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S8 ಅಲ್ಟ್ರಾ ಬೆಲೆಯು $1,099.99 (82,300ರೂ) ಆಗಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಎಸ್ 8 ಸರಣಿಯು ಇಂದು(ಫೆ.9) ರಾತ್ರಿಯಿಂದಲೇ ಆರ್ಡರ್‌ಗೆ ಲಭ್ಯವಿದೆ. ಫೆಬ್ರವರಿ 25 ರಿಂದ ಯುಎಸ್, ಯುರೋಪ್ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಆಯ್ದ ಮಾರುಕಟ್ಟೆಗಳಲ್ಲಿ ಅದರ ಮಾರಾಟ ಪ್ರಾರಂಭವಾಗುತ್ತದೆ. ಆದರೆ ಭಾರತದಲ್ಲಿ ಬೆಲೆಯ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ.


Click it and Unblock the Notifications








