Samsung: ಭಾರತದಲ್ಲಿ ಶೀಘ್ರವೇ ಲಾಂಚ್ ಆಗಲಿದೆ ರಗಡ್ ಸ್ಯಾಮ್‌ಸಂಗ್ ಫೋನ್? ಏನೆಲ್ಲಾ ಫೀಚರ್ಸ್ ಇದೆ
ಸ್ಯಾಮ್‌ಸಂಗ್ (Samsung) ಭಿನ್ನ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣ ಮಾಡುವಲ್ಲಿ ಹೆಸರುವಾಸಿ. ಅದರಂತೆ ಭಾರತದಲ್ಲಿ ವಿಶೇಷ ಫೋನ್ ಅನ್ನು ಲಾಂಚ್ ಮಾಡಲು ಮುಂದಾಗಿದೆ ಎಂಬ ವಿಷಯ ತಿಳಿದುಬಂದಿದೆ. ಈ ಸ್ಮಾರ್ಟ್‌ಫೋನ್ ಬಿಐಎಸ್ ಪ್ರಮಾಣೀಕರಣ ಸೈಟ್‌ನಲ್ಲಿ ಕಾಣಿಸಿಕೊಂಡಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಕ್ಸ್ ಕವರ್ 7 ರಗಡ್ ಸ್ಮಾರ್ಟ್‌ಫೋನ್ (Samsung Galaxy X Cover 7 rugged smartphone) ಅನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲು ಸ್ಯಾಮ್‌ಸಂಗ್ ಯೋಜಿಸುತ್ತಿದೆ ಎಂದು ತಿಳಿದುಬಂದಿದೆ. ಅದರಲ್ಲೂ ಈ ಫೋನ್‌ನ ಮಾದರಿ ಸಂಖ್ಯೆ SM-G556B ಎಂದು ವರದಿಯಾಗಿದ್ದು, ವಿಶಿಷ್ಟ ವಿನ್ಯಾಸ ಮತ್ತು ಗುಣಮಟ್ಟದ ವಿಶೇಷ ಫೀಚರ್ಸ್ ಇರದರಲ್ಲಿ ಇರಲಿದೆ ಎನ್ನಲಾಗಿದೆ. ಹಾಗಿದ್ರೆ ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವ ಮಾಹಿತಿ ಪ್ರಕಾರ ಈ ಫೋನ್ ಏನೆಲ್ಲಾ ಫೀಚರ್ಸ್ ಹೊಂದಿರಲಿದೆ ನೋಡೋಣ ಬನ್ನಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಕ್ಸ್ ಕವರ್ 7 ರಗಡ್ ಸ್ಮಾರ್ಟ್‌ಫೋನ್: ಈ ವಿಶೇಷ ಸ್ಮಾರ್ಟ್‌ಫೋನ್ ಶಕ್ತಿಶಾಲಿ ಡೈಮೆನ್ಸಿಟಿ 6100 ಪ್ಲಸ್ ಚಿಪ್‌ಸೆಟ್‌ನೊಂದಿಗೆ (Dimensity 6100 Plus chipset) ಕಾಣಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ. ಪರಿಣಾಮ ಈ ಫೋನ್ ಅನ್ನು ಅತ್ಯುತ್ತಮವಾಗಿ ಬಳಕೆ ಮಾಡಿಕೊಳ್ಳಬಹುದಾಗಿದೆ. ಅಂದರೆ ಫೋನ್‌ನಲ್ಲಿ ಅಪ್ಲಿಕೇಶನ್‌ಗಳನ್ನು ಮನಬಂದಂತೆ ಬಳಸಬಹುದು. ಇದು ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್ ನಲ್ಲಿ ರನ್ ಆಗಲಿದೆ ಎಂದೂ ಸಹ ಹೇಳಲಾಗುತ್ತಿದೆ.
ಇದರೊಂದಿಗೆ ಈ ಫೋನ್‌ಗೆ ಆಂಡ್ರಾಯ್ಡ್ ನವೀಕರಣಗಳು ಮತ್ತು ಭದ್ರತಾ ನವೀಕರಣಗಳು ಸಹ ಇದ್ದು, 6GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಇದು ಕಾಣಿಸಿಕೊಳ್ಳಲಿದೆ ಎಂದು ತೋರುತ್ತದೆ. ಅಷ್ಟೇ ಅಲ್ಲದೆ ನಿಮಗೆ ಹೆಚ್ಚಿನ ಸ್ಟೋರೇಜ್ ಸೌಲಭ್ಯ ನೀಡುವ ಉದ್ದೇಶದಿಂದ ಎಸ್‌ಡಿ ಕಾರ್ಡ್ ಆಯ್ಕೆಯನ್ನೂ ಸಹ ಹೊಂದಿರಲಿದೆ ಎಂದು ತಿಳಿದುಬಂದಿದ್ದು, ಈ ಮೂಲಕ ಉತ್ತಮ ಅನುಭವ ಪಡೆದುಕೊಳ್ಳಬಹುದಾಗಿದೆ.

ಇಷ್ಟೇ ಅಲ್ಲದೆ ಈ ಸ್ಮಾರ್ಟ್‌ಫೋನ್ ಡ್ಯುಯಲ್ ಎಲ್‌ಇಡಿ ಫ್ಲ್ಯಾಶ್ ಬೆಂಬಲದೊಂದಿಗೆ ಸಿಂಗಲ್ ರಿಯರ್ ಕ್ಯಾಮೆರಾ ಪಡೆಯಲಿದೆ ಎಂದು ಹೇಳಲಾಗಿದ್ದು, ಪ್ರಮುಖವಾಗಿ ವಾಟರ್ ಡ್ರಾಪ್ ನಾಚ್ ಡಿಸ್ಪ್ಲೇ ಮತ್ತು IP68 ರೇಟಿಂಗ್ ಅನ್ನು ಒಳಗೊಂಡಿದೆ ಎಂದು ತಿಳಿದುಬಂದಿದೆ. ಇದು ಸ್ಯಾಮ್‌ಸಂಗ್ ವಿಭಾಗದಲ್ಲಿ ಮೊದಲ ರಗಡ್ ಫೋನ್ ಆಗಿರುವುದರಿಂದ ಇನ್ನೂ ವಿಶೇಷ ರೀತಿಯ ಹೊಸ ಫೀಚರ್ಸ್ ಅನ್ನು ಈ ಫೋನ್ ಹೊಂದಿರಬಹುದು ಎಂದು ಭಾವಿಸಲಾಗಿದೆ.
ಈ ನಡುವೆ ಸ್ಯಾಮ್‌ಸಂಗ್ ಶೀಘ್ರದಲ್ಲೇ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲಿದೆ. ಈ ಫೋನ್‌ನ ವಿಶೇಷಣಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಇದು ಎಕ್ಸಿನೋಸ್ 1280 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದ್ದು, MIL-STD-810H ನಂತಹ ಮಿಲಿಟರಿ ಮಾನದಂಡಗಳನ್ನು ಸಹ ಅನುಸರಿಸುತ್ತದೆ. ಈ ಮೂಲಕ ಸುಧಾರಿತ ವೇಗ ಮತ್ತು ಕಾರ್ಯಕ್ಷಮತೆಯನ್ನು ನೀಡುತ್ತದೆ. ಇದರೊಂದಿಗೆ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್‌ನೊಂದಿಗೆ ರನ್ ಆಗಲಿದೆ ಅಷ್ಟೇ ಅಲ್ಲದೆ 4 ವರ್ಷಗಳವರೆಗೆ ಆಂಡ್ರಾಯ್ಡ್ ನವೀಕರಣಗಳು ಮತ್ತು ಭದ್ರತಾ ನವೀಕರಣಗಳನ್ನು ಹೊಂದಿದೆ.

ಇದರೊಂದಿಗೆ ಈ ವಿಶೇಷ ಸ್ಮಾರ್ಟ್‌ಫೋನ್ 6.44 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇಯೊಂದಿಗೆ ಎಂಟ್ರಿ ನೀಡಲಿದ್ದು, 120Hz ರಿಫ್ರೆಶ್ ರೇಟ್, 1000 ನಿಟ್ಸ್ ಬ್ರೈಟ್‌ನೆಸ್ ಹಾಗೂ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮೂಲಕ ಉತ್ತಮ ಎನಿಸಿದೆ. ಅಲ್ಲದೆ 6GB RAM + 12GB ಇಂಟರ್ ಸ್ಟೋರೇಜ್ ಮತ್ತು 8GB RAM + 256GB ಇಂಟರ್ ಸ್ಟೋರೇಜ್‌ನ ಎರಡು ವೇರಿಯಂಟ್‌ನಲ್ಲಿ ಲಭ್ಯ ಇರಲಿದೆ ಎನ್ನಲಾಗಿದೆ.


Click it and Unblock the Notifications








