ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಗೆ ದೊಡ್ಡ ರಿಯಾಯಿತಿ: 95,999ರೂ.ನ ಫೋನ್ 45,000ರೂ.ಗೆ!
ಇತ್ತೀಚೆಗೆ ಫೋಲ್ಡಬಲ್ ಸ್ಮಾರ್ಟ್‌ಫೋನ್‌ಗಳ ಕ್ರೇಜ್ ಹೆಚ್ಚಾಗುತ್ತಿದೆಯಾದರೂ ಸಹ ಅವುಗಳನ್ನು ಖರೀದಿ ಮಾಡಲು ಬಹುಪಾಲು ಮಂದಿ ಮುಂದಾಗುತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ಏನೆಂದರೆ ಅಧಿಕ ಬೆಲೆ ಹೊಂದಿರುವುದು. ಈ ನಡುವೆ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ ಸ್ಮಾರ್ಟ್‌ಫೋನ್ ಅನ್ನು ಐಫೋನ್ 13ಗಿಂತ ಅಗ್ಗದ ಬೆಲೆಗೆ ಖರೀದಿ ಮಾಡಬಹುದು.
ಹೌದು, ಮಾರುಕಟ್ಟೆಯಲ್ಲಿ ತಮ್ಮದೇ ಆದ ವಿಭಿನ್ನ ಶೈಲಿಯ ಮೂಲಕ ಜನಪ್ರಿಯತೆ ಪಡೆದುಕೊಂಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 (Samsung Galaxy Z Flip 3 ) ಸ್ಮಾರ್ಟ್‌ಫೋನ್ ಇದೀಗ ಭಾರೀ ಅಗ್ಗದ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಸ್ನಾಪ್‌ಡ್ರಾಗನ್ 888 5G ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 8GB RAM ಹಾಗೂ 128GB ಇಂಟರ್ ಸ್ಟೋರೇಜ್ ವೇರಿಯಂಟ್‌ನಲ್ಲಿ ಕಾಣಿಸಿಕೊಂಡಿದೆ. ಹಾಗಿದ್ರೆ, ಬನ್ನಿ ಈ ವಿಶೇಷ ಸ್ಮಾರ್ಟ್‌ಫೋನ್ ಆಫರ್ ವಿವರ ತಿಳಿಯೋಣ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಆಫರ್: ನೀವುvಐಫೋನ್ 13 ಫೋನ್ ಖರೀದಿ ಮಾಡಬೇಕು ಎಂದರೆ 57,999ರೂ.ಗಳ ಅಫರ್ ಬೆಲೆ ಪಾವತಿ ಮಾಡಬೇಕು. ಇದಕ್ಕಿಂತಲೂ ಹೆಚ್ಚಿನ ಬೆಲೆ ಹೊಂದಿದ್ದ ಗ್ಯಾಲಕ್ಸಿ Z ಫ್ಲಿಪ್ 3 ಫೋನ್ ಇದೀಗ ಐಫೋನ್ 13 ಗಿಂತಲೂ ಕಡಿಮೆ ದರಕ್ಕೆ ಲಭ್ಯ ಆಗುತ್ತಿದೆ. ಅಂದರೆ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇ ಮಾರಾಟದ ನಡುವೆ ಸ್ಮಾರ್ಟ್‌ಫೋನ್ ಅನ್ನು 45,000 ಕ್ಕಿಂತ ಕಡಿಮೆ ಬೆಲೆಗೆ ಖರೀದಿ ಮಾಡಬಹುದಾಗಿದೆ.
ಸಾಮಾನ್ಯವಾಗಿ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುತ್ತಿರುವ ಗ್ಯಾಲಕ್ಸಿ Z ಫ್ಲಿಪ್ 4 ಮತ್ತು ಒಪ್ಪೋ ಫೈಂಡ್ N2 ಫ್ಲಿಪ್‌ನ ಅರ್ಧದಷ್ಟು ಬೆಲೆಗೆ ಇದೀಗ ಗ್ಯಾಲಕ್ಸಿ Z ಫ್ಲಿಪ್ 3 ಫೋಲ್ಡಿಂಗ್ ಸ್ಮಾರ್ಟ್‌ಫೋನ್ ಅನ್ನು ಖರೀದಿ ಮಾಡಬಹುದಾಗಿದೆ. 8GB RAM ಹಾಗೂ 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ರೂಪಾಂತರಕ್ಕಾಗಿ ನೀವು ಕೇವಲ 44,999ರೂ.ಗಳನ್ನು ಪಾವತಿ ಮಾಡಿದರೆ ಸಾಕು. ಇಷ್ಟೇ ಅಲ್ಲದೆ ವಿವಿಧ ಬ್ಯಾಂಕ್ ಕಾರ್ಡ್‌ಗಳಿಗೆ ಇನ್ನೂ ಹೆಚ್ಚಿನ ರಿಯಾಯಿತಿ ಸಹ ಲಭ್ಯ ಇದೆ.

ಅಂದರೆ ನಿಮ್ಮ ಬಳಿ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಇದ್ದರೆ ನೀವು 1,250ರೂ.ಗಳ ತ್ವರಿತ ರಿಯಾಯಿತಿಯನ್ನು ಪಡೆಯಬಹುದು. ಅದಾಗ್ಯೂ ಪ್ರಸ್ತುತ ಮಾರಾಟದ ಬೆಲೆಯನ್ನು ಮತ್ತಷ್ಟು ಕಡಿಮೆ ಮಾಡಲು ಗ್ರಾಹಕರು ಟ್ರೇಡ್-ಇನ್ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದ್ದು ಇನ್ನೂ ಅಗ್ಗದ ದರಕ್ಕೆ ಈ ಫೋನ್ ಅನ್ನು ಖರೀದಿ ಮಾಡಬಹುದಾಗಿದೆ. ಈ ಫೋನ್ ಬಿಳಿ ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಕಾಣಿಸಿಕೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಸಾಮಾನ್ಯ ದರ ಎಷ್ಟು?: ಈ ವಿಶೇಷ ಫೋನ್ 95,999ರೂ.ಗಳ ಬೆಲೆ ಹೊಂದಿದ್ದು, ಫ್ಲಿಪ್‌ಕಾರ್ಟ್‌ನಲ್ಲಿ 53% ಡಿಸ್ಕೌಂಟ್ ಪಡೆದುಕೊಂಡಿದೆ. ಈ ಮೂಲಕ ನೀವು ಈ ಫೋನ್ ಖರೀದಿ ಮೇಲೆ ಬರೋಬ್ಬರಿ 51,000ರೂ.ಗಳನ್ನು ಉಳಿಸಬಹುದಾಗಿದೆ. ಇದರಿಂದಾಗಿ ನಿಮ್ಮ ಇಷ್ಟದ ಸ್ಮಾರ್ಟ್‌ಫೋನ್ ಅನ್ನು ನೀವು ನಿರೀಕ್ಷೆ ಮಾಡಿರದ ಬೆಲೆಗೆ ಖರೀದಿ ಮಾಡಬಹುದಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಪ್ರಮುಖ ಫೀಚರ್ಸ್: ಈ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಸ್ಮಾರ್ಟ್‌ಫೋನ್ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, 1080x2640 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಪಡೆದುಕೊಂಡಿದೆ. ಜೊತೆಗೆ ಸ್ನಾಪ್‌ಡ್ರಾಗನ್ 888 5G ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 8GB RAM ಹಾಗೂ 128GB/256GB ಇಂಟರ್ನಲ್ ಸ್ಟೋರೇಜ್ ಆಯ್ಕೆ ಆಯ್ಕೆ ಇದರಲ್ಲಿದೆ. ಇನ್ನು 3300mAh ಸಾಮರ್ಥ್ಯದ ಬ್ಯಾಟರಿಯಿಂದ ಈ ಫೋನ್ ಪ್ಯಾಕ್ ಆಗಿದೆ.


Click it and Unblock the Notifications








