ಇಂಥಾ ಆಫರ್ ಮತ್ತೆ ಸಿಗಲ್ಲ!..ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಬೆಲೆಯಲ್ಲಿ ಭಾರೀ ಇಳಿಕೆ!
ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಈಗಾಗಲೇ ಗ್ರಾಹಕರನ್ನು ಸೆಳೆದಿದೆ. ಆ ಪೈಕಿ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಸ್ಮಾರ್ಟ್‌ಫೋನ್ ಡಿವೈಸ್ ಹಾಗೂ ಆಕರ್ಷಕ ಫೀಚರ್ಸ್‌ಗಳೊಂದಿಗೆ ಹೈ ಎಂಡ್ ಫೋನ್ ಪ್ರಿಯರನ್ನು ಆಕರ್ಷಿಸಿದೆ. ಆದ್ರೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಇದೀಗ ಭಾರೀ ಬೆಲೆ ಇಳಿಕೆ ದರದಲ್ಲಿ ಕಾಣಿಸಿಕೊಂಡಿದ್ದು, ಮತ್ತೆ ಗ್ರಾಹಕರನ್ನು ಆಕರ್ಷಿಸಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಸ್ಮಾರ್ಟ್‌ಫೋನ್ ಬರೋಬ್ಬರಿ 25,000ರೂ. ಗಳ ಬೆಲೆ ಇಳಿಕೆ ಪಡೆದಿದೆ. ಈ ಫೋನ್ 8GB + 128GB ಮತ್ತು 8GB + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಬಿಡುಗಡೆ ಆಗಿದ್ದು, ಈ ಎರಡು ವೇರಿಯಂಟ್‌ಗಳ ಬೆಲೆ ಕ್ರಮವಾಗಿ 84,999ರೂ ಮತ್ತು 88,999ರೂ. ಆಗಿತ್ತು. ಆದ್ರೀಗ ಬೆಲೆ ಕಡಿತದಿಂದಾಗಿ, 8GB + 128GB ವೇರಿಯಂಟ್ 59,999ರೂ. ಬೆಲೆಗೆ ಹಾಗೂ 8GB + 256GB ವೇರಿಯಂಟ್ 63,999ರೂ. ದರದಲ್ಲಿ ಕಾಣಿಸಿಕೊಂಡಿವೆ.

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಸ್ಮಾರ್ಟ್‌ಫೋನ ಹೊಸ ಬೆಲೆ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್‌ನಲ್ಲಿ ಕಾಣಿಸಿದೆ. ಇನ್ನು ಈ ಫೋನ್ ಕ್ರೀಮ್, ಲ್ಯಾವೆಂಡರ್ ಮತ್ತು ಫ್ಯಾಂಟಮ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 3 ಫೋನಿನ ಫೀಚರ್ಸ್ ಗ್ಯಾಲಕ್ಸಿ ಫ್ಲಿಪ್ 3 ಫೋನ್ 1,080x2,640 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥದೊಂದಿಗೆ 6.7 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಡಿಸ್‌ಪ್ಲೇಯು ಡೈನಾಮಿಕ್ AMOLED 2X ಸಪೋರ್ಟ್ ಸಹ ಪಡೆದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಸಪೋರ್ಟ್ ಸಹ ಪಡೆದಿದೆ. ಹಾಗೆಯೇ ಈ ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಒಳಗೊಂಡಿದೆ.

ಇನ್ನು ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್‌ನಲ್ಲಿವೆ. ಸೆಲ್ಫಿ ಕ್ಯಾಮೆರಾವು 10 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ 15W ಫಾಸ್ಟ್ ಚಾರ್ಜಿಂಗ್ ಜೊತೆಗೆ 3,300mAh ಡ್ಯುಯಲ್ ಸೆಲ್ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದೆ. ಅಲ್ಲದೇ ಈ ಫೋನ್ ಆಂಡ್ರಾಯ್ಡ್ 12 ಓಎಸ್ ಸಪೋರ್ಟ್ ಪಡೆದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಮೇನ್ ಡಿಸ್‌ಪ್ಲೇ 6.7 ಇಂಚಿನ ಫಿಲ್ HD+ ಡೈನಾಮಿಕ್ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇದು 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇ ಆಗಿದ್ದು, 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಜೊತೆಗೆ 22:9 ರಚನೆಯ ಅನುಪಾತವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 4nm ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್ 1 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ನಲ್ಲಿ OneUI 4.1.1 ಮೂಲಕ ರನ್ ಆಗಲಿದೆ. ಹಾಗೆಯೇ ಇದು 8GB RAM ಮತ್ತು 512GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಜೊತೆಗೆ f/1.8 ಲೆನ್ಸ್, 83-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 80-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಜೊತೆಗೆ 3,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.


Click it and Unblock the Notifications








