ಮತ್ತೆ ಭಾರೀ ಬೆಲೆ ಇಳಿಕೆ ಕಂಡ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 5G!..ಈ ಆಫರ್ ಬಿಡಬೇಡಿ!
ಸ್ಯಾಮ್‌ಸಂಗ್ ಸಂಸ್ಥೆಯು ಭಿನ್ನ ಮಾದರಿಯ ಫೋನ್‌ಗಳ ಆಯ್ಕೆ ನೀಡಿದ್ದು, ಅವುಗಳ ಪೈಕಿ ಫ್ಲಿಪ್ ಹಾಗೂ ಫೋಲ್ಡ್ ಮಾದರಿಗಳು ಸಹ ಆಕರ್ಷಕ ಎನಿಸಿವೆ. ಹಾಗೆಯೇ ಸ್ಯಾಮ್‌ಸಂಗ್ ಕಂಪನಿಯು ಬಿಡುಗಡೆ ಮಾಡಿರುವ ಗ್ಯಾಲಕ್ಸಿ Z ಫ್ಲಿಪ್ 4 (Galaxy Z Flip 4 5G) ಫೋನ್ ಈಗ ಭರ್ಜರಿ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ. ಅಂದಹಾಗೆ ಈ ಕೊಡುಗೆಯು ಫ್ಲಿಪ್‌ಕಾರ್ಟ್ ಇ-ಕಾಮರ್ಸ್ ತಾಣದ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಲಭ್ಯ.

ಹೌದು, ಫ್ಲಿಪ್‌ಕಾರ್ಟ್ ಇ-ಕಾಮರ್ಸ್ ತಾಣವು ಆಯೋಜಿಸಿರುವ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 (Galaxy Z Flip 4) ಸ್ಮಾರ್ಟ್‌ಫೋನ್ ಡಿಸ್ಕೌಂಟ್ ದರದಲ್ಲಿ ಲಭ್ಯವಾಗಲಿದೆ. ಇನ್ನು ಫ್ಲಿಪ್‌ಕಾರ್ಟ್ ಇ-ಕಾಮರ್ಸ್ ತಾಣವು ಆಯೋಜಿಸಿರುವ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಇದೇ ಡಿಸೆಂಬರ್ 16 ರಿಂದ ಪ್ರಾರಂಭವಾಗಿದ್ದು, ಇದೇ ಡಿಸೆಂಬರ್ 21 ರ ವರೆಗೂ ಇರಲಿದೆ.

ಈ ಸೇಲ್‌ನಲ್ಲಿ ಗ್ರಾಹಕರು ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 (Galaxy Z Flip 4 5G) ಫೋನ್ (256GB) ಅನ್ನು 94,999 ರೂ. ಗಳಿಗೆ ಖರೀದಿಸಬಹುದಾಗಿದೆ. ಇನ್ನು ಈ ಕೊಡುಗೆಯ ಜೊತೆಗೆ ಸುಮಾರು 24,500ರೂ. ಗಳ ವರೆಗೂ ಎಕ್ಸ್‌ಚೇಂಜ್ ಕೊಡುಗೆ ಸಹ ಪಡೆಯಬಹುದಾಗಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಫೋನಿನ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಹಾಗೂ ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಮೇನ್ ಡಿಸ್‌ಪ್ಲೇ 6.7 ಇಂಚಿನ ಫಿಲ್ HD+ ಡೈನಾಮಿಕ್ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇದು 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇ ಆಗಿದ್ದು, 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಜೊತೆಗೆ 22:9 ರಚನೆಯ ಅನುಪಾತವನ್ನು ಪಡೆದಿದೆ.

ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 4nm ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ನಲ್ಲಿ OneUI 4.1.1 ಮೂಲಕ ರನ್ ಆಗಲಿದೆ. ಹಾಗೆಯೇ ಇದು 8GB RAM ಮತ್ತು 512GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.

ಕ್ಯಾಮೆರಾ ಮತ್ತು ಬ್ಯಾಟರಿ ಬ್ಯಾಕ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಜೊತೆಗೆ f/1.8 ಲೆನ್ಸ್, 83-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 80-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಜೊತೆಗೆ 3,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಮೆಮೊರಿ ಹಾಗೂ ಕಲರ್ ಆಯ್ಕೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಭಾರತದಲ್ಲಿ 128 GB ಮತ್ತು 8GB ಹಾಗೂ 256 GB ಮತ್ತು 8GB ಸ್ಟೋರೇಜ್ ವೇರಿಯಂಟ್ ಮಾದರಿಗಳ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬ್ಲೂ, ಬೋರಾ ಪರ್ಪಲ್, ಗ್ರ್ಯಾಫೈಟ್ ಮತ್ತು ಪಿಂಕ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ.


Click it and Unblock the Notifications








