ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 5G ಫೋಲ್ಡಬಲ್ ಸ್ಮಾರ್ಟ್‌ಫೋನ್ ಬಿಡುಗಡೆ!
ಸ್ಮಾರ್ಟ್‌ಫೋನ್ ದಿಗ್ಗಜ ಸ್ಯಾಮ್‌ಸಂಗ್ ಕಂಪೆನಿ ಮಾರುಕಟ್ಟೆಯಲ್ಲಿ ಫೋಲ್ಡಬಲ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿ ಈಗಾಗಲೇ ಸೈ ಎನಿಸಿಕೊಂಡಿದೆ. ಸ್ಮಾರ್ಟ್‌ಫೊನ್ ವಲಯದ ವಿಸ್ಮಯ ಎಂದೇ ಬಿಂಬಿತವಾಗಿರುವ ಫೋಲ್ಡಬಲ್ ಸ್ಮಾರ್ಟ್‌ಫೋನ್ ಪರಿಚಯಿಸಿ ಸ್ಯಾಮ್‌ಸಂಗ್ ತನ್ನ ಖ್ಯಾತಿಯನ್ನು ಇನ್ನು ಹೆಚ್ಚಿಸಿಕೊಂಡಿದೆ. ಇದೀಗ ತನ್ನ ಮತ್ತೊಂದು ಭಿನ್ನ ಮಾದರಿಯ ಗ್ಯಾಲಕ್ಸಿ Z ಫ್ಲಿಪ್ 5G ಫೋಲ್ಡಬಲ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಗ್ಯಾಲಕ್ಸಿ Z ಫ್ಲಿಪ್ 5G ಫೋಲ್ಡಬಲ್ ಸ್ಮಾರ್ಟ್‌ಫೋನ್ ಅನ್ನು ಯುಎಸ್ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಕಳೆದ ಫೆಬ್ರವರಿಯಲ್ಲಿ ಅನಾವರಣಗೊಂಡಿದ್ದ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್‌ನ 5G ಮಾದರಿಯ ಸ್ಮಾರ್ಟ್‌ಫೋನ್ ಇದಾಗಿದೆ . ಜೊತೆಗೆ ಇದು ಆಪ್ಡೇಟ್ ಪ್ರೊಸೆಸರ್ ಅನ್ನು ಒಳಗೊಂಡಿದೆ. ಅಂದರೆ ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 865+ SoC ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಡೈನಾಮಿಕ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಇದರ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 5G ಫೋಲ್ಡಬಲ್ ಸ್ಮಾರ್ಟ್‌ಫೋನ್ 1080x2636 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.7-ಇಂಚಿನ ಫುಲ್-ಎಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 21.9: 9 ರಚನೆಯ ಅನುಪಾತ ಹೊಂದಿದ್ದು, 425ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನ ಒಳಗೊಂಡಿದೆ. ಅಲ್ಲದೆ ಇದು ಡೈನಾಮಿಕ್ ಅಮೋಲೆಡ್ ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಹೊರಗಿನ ಶೆಲ್‌ನಲ್ಲಿ, 301 ಪಿಪಿಐ ಹೊಂದಿರುವ 1.1-ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ನೀಡಲಾಗಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 865+ ಆಕ್ಟಾ-ಕೋರ್ SoC ಪ್ರೊಸೆಸರ್ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 8GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿನ್ಯಾಸ
ಗ್ಯಾಲಕ್ಸಿ Z ಫ್ಲಿಪ್ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾವನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಕ್ಯಾಮೆರಾ 1.12 -ಮೈಕ್ರಾನ್ ಪಿಕ್ಸೆಲ್‌ಗಳು, 123-ಡಿಗ್ರಿ ಎಫ್‌ಒವಿ, ಒಐಎಸ್ ಅನ್ನು ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ , 1.22-ಮೈಕ್ರಾನ್ ಪಿಕ್ಸೆಲ್‌ಗಳು, 80 ಡಿಗ್ರಿ ಎಫ್‌ಒವಿ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 3,300mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ವೇಗದ ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ವೈ-ಫೈ, ಬ್ಲೂಟೂತ್ 5.0, ಯುಎಸ್‌ಬಿ ಟೈಪ್-ಸಿ, NFC ಮತ್ತು GPS ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 5G ಸ್ಮಾರ್ಟ್‌ಫೋನ್ ಬೆಲೆ $1449,99 (ಸುಮಾರು 1,08,200 ರೂ.) ಆಗಿದೆ. ಇದು ಮಿಸ್ಟಿಕ್ ಗ್ರೇ ಮತ್ತು ಮಿಸ್ಟಿಕ್ ಕಂಚು ಎಂಬ ಎರಡು ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಾಗಲಿದ್ದು, ಸದ್ಯ ಯುಎಸ್‌ನಲ್ಲಿ ಇದೇ ಆಗಸ್ಟ್ ತಿಂಗಳಿನಲ್ಲಿ ಖರೀದಿಗೆ ಲಭ್ಯವಾಗಲಿದೆ.


Click it and Unblock the Notifications








