Home
ಸುದ್ದಿಜಾಲ

ಸ್ಯಾಮ್‌ಸಂಗ್‌ನ ಈ ಹೊಸ ಫ್ಲಿಪ್‌ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಜನಪ್ರಿಯ ಇ ಕಾಮರ್ಸ್ ದೈತ್ಯ ಅಮೆಜಾನ್‌ ಸಂಸ್ಥೆಯ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಸೇಲ್‌ 2023 (amazon great indian festival sale 2023) ಸೇಲ್‌ ಅನ್ನು ಆಯೋಜಿಸಿದ್ದು, ಈ ಸೇಲ್‌ ಪ್ರಸ್ತುತ ಲೈವ್‌ ಇದೆ. ಈ ಸೇಲ್‌ ಮೇಳದಲ್ಲಿ ಪ್ರಮುಖ ಬ್ರ್ಯಾಂಡ್‌ಗಳ ಮೊಬೈಲ್‌ಗಳಿಗೆ ಬೊಂಬಾಟ್‌ ಡಿಸ್ಕೌಂಟ್‌ ಇದ್ದು, ಆ ಪೈಕಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 5 ಫೋನ್‌ ಆಕರ್ಷಕ ರಿಯಾಯಿತಿ ಪಡೆದಿದೆ.

ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್‌ ಸೇಲ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 5 ಮೊಬೈಲ್‌ ಆಕರ್ಷಕ ರಿಯಾಯಿತಿ ಪಡೆದಿದೆ. ಈ ಫೋನ್‌ 8GB RAM + 256GB ವೇರಿಯಂಟ್‌ ಮಾಡೆಲ್ ಕೊಡುಗೆಯಲ್ಲಿ 99,999ರೂ. ಗಳ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಇತರೆ ಕೊಡುಗೆಗಳು ಸೇರಿ ಈ ಫೋನ್‌ ಅನ್ನು 92,999ರೂ. ಗಳ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿ ಮಾಡಬಹುದು.

ಸ್ಯಾಮ್‌ಸಂಗ್‌ನ ಈ ಹೊಸ ಫ್ಲಿಪ್‌ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಹಾಗೆಯೇ ಈ ಮೊಬೈಲ್‌ ಕ್ವಾಲ್ಕಾಮ್‌ ಸ್ನ್ಯಾಪ್‌ಡ್ರಾಗನ್ 8 ಜೆನ್‌ 2 SoC ಪ್ರೊಸೆಸರ್‌ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದೆ. ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಇದ್ದು, 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಪ್ರಾಥಮಿಕ ಕ್ಯಾಮೆರಾ ಇದೆ. ಹಾಗಾದರೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 5 ಫೋನಿನ ಇತರ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಕವರ್‌ ಡಿಸ್‌ಪ್ಲೇ ಹಾಗೂ ರಚನೆ

ಈ ಫೋನಿನ ಕವರ್‌ ಡಿಸ್‌ಪ್ಲೇ 6.2 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಸಾಮರ್ಥ್ಯದಲ್ಲಿ ಇದ್ದು, ಇದು 2,316 x 904 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒದಗಿಸಲಿದೆ. ಈ ಡಿಸ್‌ಪ್ಲೇ 48Hz ಮತ್ತು 120Hz ನಡುವಿನ ಅಡಾಪ್ಟಿವ್ ರಿಫ್ರೆಶ್ ರೇಟ್‌ ಮತ್ತು 412ppi ಪ್ರತಿ ಇಂಚಿನ ಪಿಕ್ಸೆಲ್ ಸಾಂದ್ರತೆ ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯವೈಖರಿ ಹೀಗಿದೆ

ಸ್ಯಾಮ್‌ಸಂಗ್‌ ಈ ಮೊಬೈಲ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಇದು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಆಧಾರಿತ ಒನ್‌ UI 5.1.1 ನಲ್ಲಿ ಕೆಲಸ ನಿರ್ವಹಿಸುತ್ತದೆ. ಇದು 12GB RAM ಮತ್ತು 256GB, 512GB ಮತ್ತು 1TB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳಲ್ಲಿ ಲಭ್ಯ.

ಕ್ಯಾಮೆರಾ ಸೆನ್ಸಾರ್‌ ಮಾಹಿತಿ

ಸ್ಯಾಮ್‌ಸಂಗ್‌ ಈ ಫೋಲ್ಡ್‌ ಮೊಬೈಲ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಆಗಿದೆ. ಇನ್ನು ಮುಂಭಾಗದಲ್ಲಿ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕವರ್ ಡಿಸ್‌ಪ್ಲೇಯಲ್ಲಿ ಹಾಗೂ 4 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಅಂಡರ್ ಡಿಸ್ಪ್ಲೇಯಲ್ಲಿ ನೀಡಲಾಗಿದೆ.

ಸ್ಯಾಮ್‌ಸಂಗ್‌ನ ಈ ಹೊಸ ಫ್ಲಿಪ್‌ ಫೋನಿನ ಬೆಲೆಯಲ್ಲಿ ಭಾರೀ ಇಳಿಕೆ!

ಈ ಫೋನ್‌ 2640 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ನೊಂದಿಗೆ 6.7 ಇಂಚಿನ ಡೈನಾಮಿಕ್ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದಿದೆ. ಇದರೊಂದಿಗೆ 720 x 748 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 3.4 ಇಂಚಿನ ಸೂಪರ್ ಅಮೋಲೆಡ್‌ ಕವರ್ ಡಿಸ್‌ಪ್ಲೇ ಒಳಗೊಂಡಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್‌ 8 ಜನ್‌ 2 ಪ್ರೊಸೆಸರ್‌ ಪವರ್‌ ಸಾಮರ್ಥ್ಯದಲ್ಲಿ ಕಾರ್ಯ ಮಾಡುತ್ತದೆ.

ಹಾಗೆಯೇ ಈ ಮೊಬೈಲ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಪಡೆದುಕೊಂಡಿದ್ದು, ಮುಖ್ಯ ಕ್ಯಾಮೆರಾವು 12 ಮೆಗಾಪಿಕ್ಸೆಲ್ ಸೆನ್ಸಾರ್‌ ಆಗಿದೆ. ಸೆಲ್ಫಿಗಾಗಿ 10 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ. ಇದರ ಜೊತೆಗೆ ಈ ಫೋನ್ 3,700mAh ಬ್ಯಾಟರಿ ಸಾಮರ್ಥ್ಯ ಹೊಂದಿದೆ.

Best Mobiles in India

English summary
Samsung Galaxy Z Flip5 5G price cut on amazon great indian festival sale. offer price, specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+