Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 2 ಸ್ಮಾರ್ಟ್‌ಫೋನ್‌ ಬೆಲೆ ಬಹಿರಂಗ!

ದಕ್ಷಿಣ ಕೋರಿಯಾ ಮೂಲದ ಸ್ಮಾರ್ಟ್‌ಫೋನ್‌ ದಿಗ್ಗಜ ಸ್ಯಾಮ್‌ಸಂಗ್ ತನ್ನ ಹೊಸ ಪೋಲ್ಡೆಬಲ್‌ ಸ್ಮಾರ್ಟ್‌ಫೋನ್ ಗ್ಯಾಲಕ್ಸಿ Z ಫೋಲ್ಡ್‌ 2 ಬೆಲೆಯನ್ನ ಬಹಿರಂಗ ಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 1,49,999 ರೂಗಳಿಗೆ ಲಬ್ಯವಾಗಲಿದೆ ಎಂದು ಹೇಳಲಾಗಿದೆ. ಅಲ್ಲದೆ ಇದು ಭಾರತದಲ್ಲಿ ಪ್ರಾರಂಭಿಸಿದಾಗ ಅದರ ಹಿಂದಿನ ಬೆಲೆಗಿಂತ ಕಡಿಮೆಯಾಗಿದೆ ಎಂದು ಹೇಳಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಸೆಪ್ಟೆಂಬರ್ 14 ರಿಂದ ಸ್ಯಾಮ್‌ಸಂಗ್.ಕಾಂನಲ್ಲಿ 12PM ಗಂಟೆಯ ನಂತರ ಖರೀದಿಗೆ ಲಭ್ಯವಾಗಲಿದೆ. ಜೊತೆಗೆ ಗ್ಯಾಲಕ್ಸಿ Z ಫೋಲ್ಡ್‌ 2 ಅನ್ನು ಫ್ರಿ ಬುಕ್‌ ಮಾಡಿಕೊಳ್ಳುವ ಅವಕಾಶವನ್ನು ಸಹ ಇದೀಗ ನೀಡಲಾಗಿದೆ.

ಸ್ಯಾಮ್‌ಸಂಗ್‌

ಹೌದು, ಸ್ಮಾರ್ಟ್‌ಫೋನ್‌ ದೈತ್ಯ ಎನಿಸಿಕೊಂಡಿರುವ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಹೊಸ ಗ್ಯಾಲಕ್ಸಿ Z ಫೋಲ್ಡ್‌ 2 ರ ಬೆಲೆಯನ್ನ ಬಹಿರಂಗಪಡಿಸಿದೆ. ಈ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನವನ್ನ ಸೃಷ್ಟಿಸಿದೆ. ಈಗಾಗಲೇ ಫೋಲ್ಡೆಬಲ್‌ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿರುವ ಸ್ಯಾಮ್‌ಸಂಗ್‌ ಸಹಜವಾಗಿಯೇ ಗ್ಯಾಲಕ್ಸಿ Z ಫೋಲ್ಡ್‌ 2 ರಲ್ಲೂ ನಿರೀಕ್ಷೆಯನ್ನ ಹುಟ್ಟುಹಾಕಿದೆ. ಇನ್ನು ಈ ಫೋಲ್ಡೇಬಲ್‌ ಸ್ಮಾರ್ಟ್‌ಫೋನ್‌ ಮಿಸ್ಟಿಕ್ ಬ್ಲ್ಯಾಕ್ ಮತ್ತು ಮಿಸ್ಟಿಕ್ ಕಂಚು ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಲಾಗ್ತಿದೆ.

ಗ್ಯಾಲಕ್ಸಿ Z ಫೋಲ್ಡ್‌ 2

ಇನ್ನು ಈ ಗ್ಯಾಲಕ್ಸಿ Z ಫೋಲ್ಡ್‌ 2 ಸ್ಮಾರ್ಟ್‌ಫೋನ್‌ ಅನ್ನು ಫ್ರೀ-ಬುಕಿಂಗ್ ಆರ್ಡರ್‌ ಮಾಡಬಹುದಾಗಿದ್ದು, ಸೆಪ್ಟೆಂಬರ್‌ 14ರಿಂದ ಖರೀದಿಸಬಹುದಾಗಿದೆ. ಅಲ್ಲದೆ ಇದು ಸ್ಯಾಮ್‌ಸಂಗ್ ಎಕ್ಸ್‌ಪೀರಿಯೆನ್ಸ್ ಸ್ಟೋರ್ ಮತ್ತು ಸ್ಯಾಮ್‌ಸಂಗ್.ಕಾಂನಲ್ಲಿ 12 ತಿಂಗಳವರೆಗೆ ನೋ ಕಾಸ್ಟ್‌ ಇಎಂಐ ನಲ್ಲಿ ಲಭ್ಯವಾಗಲಿದೆ. ಜೊತೆಗೆ 4 ತಿಂಗಳವರೆಗೆ ಯೂಟ್ಯೂಬ್ ಪ್ರೀಮಿಯಂ ಉಚಿತ ಮತ್ತು ಮೈಕ್ರೋಸಾಫ್ಟ್ ಆಫೀಸ್ 365 ಅನ್ನು 22% ರಿಯಾಯಿತಿಯಲ್ಲಿ ಖರೀದಿಸಲು ಅವಕಾಶವನ್ನು ನೀಡಲಿದೆ ಎಂದು ಹೇಳಲಾಗಿದೆ.

ಗ್ಯಾಲಕ್ಸಿ Z ಫೋಲ್ಡ್‌ 2

ಇದಲ್ಲದೆ ಗ್ಯಾಲಕ್ಸಿ Z ಫೋಲ್ಡ್‌ 2 ಸ್ಮಾರ್ಟ್‌ಫೋನ್‌ನ ವಿಶೇಷತೆಗಳನ್ನ ಗಮನಿಸುವುದಾದರೆ ಇದು 2208 x 1768 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 7.6-ಇಂಚಿನ QXGA+ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು ಡೈನಾಮಿಕ್ ಅಮೋಲೆಡ್ 2x ಡಿಸ್‌ಪ್ಲೇಯನ್ನು ಹೊಂದಿದೆ ಎನ್ನಲಾಗಿದೆ. ಇನ್ನು ಇದರಲ್ಲಿರುವ ಎರಡನೇ ಡಿಸ್‌ಪ್ಲೇ 2260 x 816 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಅನ್ನು ಹೊಂದಿದ್ದು, ಇದು 6.2-ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಆಗಿದೆ. ಅಲ್ಲದೆ ಇದು ಸೂಪರ್ ಅಮೋಲೆಡ್ ಪ್ಯಾನೆಲ್ ಅನ್ನು ಹೊಂದಿದೆ.

ಸ್ಮಾರ್ಟ್‌ಫೋನ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 512GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ ಎನ್ನಲಾಗಿದೆ. ಇದಲ್ಲದೆ ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 10 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಡ್ಯುಯಲ್ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು ವೈರ್ಡ್ ಮತ್ತು ವಾಯರ್‌ಲೆಸ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

Best Mobiles in India

English summary
You can get the device at ₹1,49,999, which in fact is lower than the price of its predecessor when it launched in India.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+