Just In
- 13 hrs ago Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- 14 hrs ago ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- 14 hrs ago Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- 16 hrs ago Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
Don't Miss
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 2 ಸ್ಮಾರ್ಟ್‌ಫೋನ್ ಬಿಡುಗಡೆ!
ದಕ್ಷಿಣ ಕೊರಿಯಾ ಟೆಕ್ ಸಂಸ್ಥೆ ಸ್ಯಾಮ್‌ಸಂಗ್‌ನ ಬಹುನಿರೀಕ್ಷಿತ 'ಗ್ಯಾಲಕ್ಸಿ ನೋಟ್ 20 ಸ್ಮಾರ್ಟ್‌ಫೋನ್ ಸರಣಿ' ಇಂದು (ಆ.5) ಬಿಡುಗಡೆ ಆಗಿದೆ. ಈ ಗ್ಯಾಲಕ್ಸಿ ನೋಟ್ 20 ಸರಣಿಯಲ್ಲಿ ಗ್ಯಾಲಕ್ಸಿ 20 ಮತ್ತು ಗ್ಯಾಲಕ್ಸಿ 20 ಅಲ್ಟ್ರಾ ಹೈಎಂಡ್ ಫ್ಲ್ಯಾಗ್‌ಶಿಫ್ ಸ್ಮಾರ್ಟ್‌ಫೋನ್‌ಗಳು ಅನಾವರಣ ಆಗಿವೆ. ಅವುಗಳೊಂದಿಗೆ ಗ್ಯಾಲಕ್ಸಿ Z ಫೋಲ್ಡ್ 2 5G ಫೋಲ್ಡೆಬಲ್ ಸ್ಮಾರ್ಟ್‌ಫೋನ್ ಸಹ ಲಾಂಚ್ ಆಗಿದ್ದು, ಗ್ರಾಹಕರಿಗೆ ಖುಷಿ ತಂದಿದೆ.
ಸ್ಯಾಮ್‌ಸಂಗ್ ಸಂಸ್ಥೆ
ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಇಂದು ಗ್ಯಾಲಕ್ಸಿ Z ಫೋಲ್ಡ್ 2 5G ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಫೋಲ್ಡ್‌ಬಲ್ ಮಾದರಿಯ ರಚನೆಯನ್ನು ಹೊಂದಿದ್ದು, ಡ್ಯುಯಲ್ ಸ್ಕ್ರೀನ್ ವ್ಯವಸ್ಥೆ ಹೊಂದಿದೆ. ಹಾಗೆಯೇ 5G ಬೆಂಬಲ ಹೊಂದಿರುವ ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 2 5G ಸ್ಮಾರ್ಟ್‌ಫೋನ್ ಬೆಲೆ ಎಷ್ಟು ಹಾಗೂ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.
ಡಿಸ್‌ಪ್ಲೇ ರಚನೆ ಮತ್ತು ಡಿಸೈನ್
ಗ್ಯಾಲಕ್ಸಿ Z ಫೋಲ್ಡ್ 2 5G ಸ್ಮಾರ್ಟ್‌ಫೋನ್ ಡ್ಯುಯಲ್ ಡಿಸ್‌ಪ್ಲೇ ರಚನೆಯನ್ನು ಹೊಂದಿದೆ. 7.6 ಇಂಚಿನ ಸೂಪರ್ AMOLED ಫ್ಲೆಕ್ಸಿಬಲ್ ಡಿಸ್‌ಪ್ಲೇ ಇದ್ದು, 120Hz ರೀಫ್ರೇಶ್ ರೇಟ್ ಪಡೆದಿದೆ. ಹಾಗೆಯೇ ಸೆಕೆಂಡರಿ ಕ್ಯಾಮೆರಾವು 6.23 ಇಂಚಿನ ಸೂಪರ್ AMOLED ಪ್ಯಾನಲ್ ರಚನೆ ಹೊಂದಿದೆ.
ಪ್ರೊಸೆಸರ್ ಬಲವೇನು
ಗ್ಯಾಲಕ್ಸಿ Z ಫೋಲ್ಡ್ 2 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865+ ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI 2.0 ಬೆಂಬಲಿತ ಆಂಡ್ರಾಯ್ಡ್ 10 ಓಎಸ್ ಸಪೋರ್ಟ್ ಇದೆ. ಇನ್ನು ಈ ಫೋನ್ 6GB RAM ಮತ್ತು 8GB RAM ಆಯ್ಕೆಯನ್ನು ಹೊಂದಿದ್ದು, 128GB ಆಂತರಿಕ ಸ್ಟೋರೇಜ್ ಸಾಮರ್ಥ್ಯ ಪಡೆದಿದೆ.
ಸ್ಪೆಷಲ್ ಕ್ಯಾಮೆರಾ
ಗ್ಯಾಲಕ್ಸಿ Z ಫೋಲ್ಡ್ 2 5G ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಹೊಂದಿದೆ. ಇನ್ನು ಸೆಕೆಂಡರಿ ಮತ್ತು ತೃತೀಯ ಕ್ಯಾಮೆರಾಗಳೆರಡು ಸಹ ಕ್ರಮವಾಗಿ 12ಎಂಪಿಯ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿವೆ. ಸೆಲ್ಫಿ ಕ್ಯಾಮೆರಾ 10ಎಂಪಿ ಸೆನ್ಸಾರ್‌ನಲ್ಲಿದೆ.
ಬ್ಯಾಟರಿ ಲೈಫ್
ಗ್ಯಾಲಕ್ಸಿ Z ಫೋಲ್ಡ್ 2 5G ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ 15W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಹಾಗೆಯೇ ಈ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯವನ್ನು ಪಡೆದಿದೆ.
-
1,29,999
-
22,999
-
64,999
-
99,999
-
29,999
-
39,999
-
-
63,999
-
1,56,900
-
96,949
-
1,39,900
-
1,29,900
-
79,900
-
65,900
-
12,999
-
96,949
-
16,499
-
38,999
-
30,700
-
49,999
-
19,999
-
17,970
-
21,999
-
13,474
-
18,999
-
22,999
-
19,999
-
17,999
-
26,999
-
5,999