ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಫೋನ್ ಬಿಡುಗಡೆ!
ಬಹು ನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್‌ಬಲ್ ಸ್ಮಾರ್ಟ್‌ಫೋನ್ ಸರಣಿ ಭಾರತಕ್ಕೆ ಎಂಟ್ರಿ ನೀಡಿದೆ. ಇಂದು ನಡೆದ ಗ್ಯಾಲಕ್ಸಿ ಅನ್‌ಪ್ಯಾಕ್ಡ್ ಈವೆಂಟ್‌ನಲ್ಲಿ ಗ್ಯಾಲಕ್ಸಿ Z ಫೋಲ್ಡ್ 4 ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಅನಾವರಣಗೊಳಿಸಿದೆ. ಇನ್ನು ಈ ಹೊಸ ಫೋಲ್ಡ್‌ಬಲ್ ಸ್ಮಾರ್ಟ್‌ಫೋನ್‌ಗಳು ಕಳೆದ ವರ್ಷದ ಸ್ಮಾರ್ಟ್‌ಫೋನ್‌ಗಳಿಗಿಂತ ಸುಧಾರಿತ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇದರಲ್ಲಿ ಗ್ಯಾಲಕ್ಸಿ Z ಫೋಲ್ಡ್ 4 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಗ್ಯಾಲಕ್ಸಿ Z ಫೋಲ್ಡ್ 4 ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಫೋನ್ ಲಾಂಚ್ ಮಾಡಿದೆ. ಇದರಲ್ಲಿ ಗ್ಯಾಲಕ್ಸಿ Z ಫೋಲ್ಡ್ 4 ಟ್ರಿಪಲ್ ರಿಯರ್ ಕ್ಯಾಮೆರಾ ಹಾಗೂ ಡ್ಯುಯಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಆದರೆ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು? ಬೆಲೆ ಎಷ್ಟಿದೆ? ಇದೆಲ್ಲದರ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಡಿಸ್‌ಪ್ಲೇ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಸ್ಮಾರ್ಟ್‌ಫೋನ್ 7.6 ಇಂಚಿನ ಡೈನಾಮಿಕ್ ಅಮೋಲೆಡ್ 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೇನ್ ಡಿಸ್‌ಪ್ಲೇ ಆಗಿದ್ದು, QXGA+ ರೆಸಲ್ಯೂಶನ್ ಮತ್ತು 21.6:18 ರಚನೆಯ ಅನುಪಾತವನ್ನು ಹೊಂದಿದೆ. ಈ ಡಿಸ್‌ಪ್ಲೇ 1Hz ನಿಂದ 120Hz ವರೆಗೆ ರಿಫ್ರೆಶ್ ರೇಟ್ ನೀಡಲಿದೆ. ಇದಲ್ಲದೆ 6.2 ಇಂಚಿನ HD+ ಡೈನಾಮಿಕ್ ಅಮೋಲೆಡ್ 2X ಕವರ್ ಡಿಸ್‌ಪ್ಲೇ ಹೊಂದಿದೆ. ಇದು 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಮತ್ತು 23.1:9 ರಚನೆಯ ಅನುಪಾತವನ್ನು ಹೊಂದಿದೆ.

ಪ್ರೊಸೆಸರ್ ಯಾವುದು? ಕ್ಯಾಮೆರಾ ಎಷ್ಟಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಬಲವನ್ನು ಪಡೆದುಕೊಮಡಿದೆ. ಇದು ಆಂಡ್ರಾಯ್ಡ್ 12L ಆಧಾರಿತ ಒನ್ UI 4.1.1 ನಲ್ಲಿ ಕಾರ್ಯನಿರ್ವಹಿಸುವ ಮೊದಲ ಸ್ಮಾರ್ಟ್‌ಫೋನ್ ಆಗಿದೆ. ಇದು 12GB RAM ಮತ್ತು 1TB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 10 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮೇನ್ ಡಿಸ್‌ಪ್ಲೇಯಲ್ಲಿ 4 ಮೆಗಾಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಹಾಗೂ ಕವರ್ ಡಿಸ್‌ಪ್ಲೇಯಲ್ಲಿ 10 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಸ್ಮಾರ್ಟ್‌ಫೋನ್ 4,400mAh ಸಾಮರ್ಥ್ಯದ ಡ್ಯುಯಲ್ ಬ್ಯಾಟರಿಯನ್ನು ಹೊಂದಿದೆ. ಇದು 25W ಚಾರ್ಜರ್ ಬೆಂಬಲಿಸಲಿದ್ದು, ಸುಮಾರು 30 ನಿಮಿಷಗಳಲ್ಲಿ 50% ಚಾರ್ಜಿಂಗ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E, ಬ್ಲೂಟೂತ್ v5.2, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್, ಅಕ್ಸೆಲೆರೊಮೀಟರ್, ಬ್ಯಾರೋಮೀಟರ್, ಗೈರೊ ಸೆನ್ಸಾರ್, ಜಿಯೋಮ್ಯಾಗ್ನೆಟಿಕ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಲೈಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಮೇನ್ ಡಿಸ್‌ಪ್ಲೇ 6.7 ಇಂಚಿನ ಫಿಲ್ HD+ ಡೈನಾಮಿಕ್ ಅಮೋಲೆಡ್ ಡಿಸ್‌ಪ್ಲೇ ಆಗಿದೆ. ಇದು 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇ ಆಗಿದ್ದು, 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಜೊತೆಗೆ 22:9 ರಚನೆಯ ಅನುಪಾತವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ 4nm ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ನಲ್ಲಿ OneUI 4.1.1 ಮೂಲಕ ರನ್ ಆಗಲಿದೆ. ಹಾಗೆಯೇ ಇದು 8GB RAM ಮತ್ತು 512GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ.

ಕ್ಯಾಮೆರಾ ಎಷ್ಟಿದೆ? ಬ್ಯಾಟರಿ ಸಾಮರ್ಥ್ಯ ಏನು?
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಕ್ಯಾಮೆರಾ ಜೊತೆಗೆ f/1.8 ಲೆನ್ಸ್, 83-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 80-ಡಿಗ್ರಿ ಫೀಲ್ಡ್ ಆಫ್ ವ್ಯೂ ಹೊಂದಿದೆ. ಜೊತೆಗೆ 3,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಈ ಎರಡು ಸ್ಮಾರ್ಟ್‌ಫೋನ್ ಬೆಲೆ ಎಷ್ಟಿದೆ ಅನ್ನೊದು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಇತರ ಮಾರುಕಟ್ಟೆಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್‌ನ ಆರಂಭಿಕ ಬೆಲೆ $1,799.99 (ಅಂದಾಜು 1,42,700ರೂ)ಹೊಂದಿದೆ. ಈ ಸ್ಮಾರ್ಟ್‌ಫೋನ್ ಬೀಜ್, ಗ್ರೇಗ್ರೀನ್ ಮತ್ತು ಫ್ಯಾಂಟಮ್ ಕಪ್ಪು ಬಣ್ಣಗಳಲ್ಲಿ ಲಭ್ಯವಿರುತ್ತದೆ.
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 4 ಸ್ಮಾರ್ಟ್‌ಫೋನ್ ಇತರೆ ಮಾರುಕಟ್ಟೆಯಲ್ಲಿ ಬೆಲೆ $999 (ಸುಮಾರು 79,000ರೂ) ರಿಂದ ಪ್ರಾರಂಭವಾಗುತ್ತದೆ. ಈ ಸ್ಮಾರ್ಟ್‌ಫೋನ್ ಬ್ಲೂ, ಬೋರಾ ಪರ್ಪಲ್, ಗ್ರ್ಯಾಫೈಟ್ ಮತ್ತು ಪಿಂಕ್ ಗೋಲ್ಡ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.


Click it and Unblock the Notifications








