ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ 'ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4' ಫೋನ್!
ಸ್ಯಾಮ್‌ಸಂಗ್ ಮೊಬೈಲ್ ಸಂಸ್ಥೆಯು ಕಡಿಮೆ ಬೆಲೆಯಿಂದ ಹೈ ಎಂಡ್ ಪ್ರೈಸ್ ಟ್ಯಾಗ್ ವರೆಗೂ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಹಾಗೆಯೇ ಸಂಸ್ಥೆಯ ಗ್ಯಾಲಕ್ಸಿ ಫೋಲ್ಡೆಬಲ್ (ಮಡಚುವ ಮಾದರಿಯ ಫೋನ್‌ಗಳು) ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸದ್ದು ಮಾಡಿವೆ. ಅದರ ಮುಂದುವರಿದ ಭಾಗವಾಗಿ ಸ್ಯಾಮ್‌ಸಂಗ್ ಇದೀಗ ನೂತನವಾಗಿ ಗ್ಯಾಲಕ್ಸಿ Z ಫೋಲ್ಡ್ 4 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಲು ಸಜ್ಜಾಗಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಭಾರತದಲ್ಲಿ ಹೊಸದಾಗಿ 'ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4' ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲಿದೆ. ಸಂಸ್ಥೆಯು ಇದೇ ಆಗಷ್ಟ್ 10 ರಂದು ಅನ್‌ಪ್ಯಾಕ್ಡ್ ಇವೆಂಟ್ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಫೋನ್ ಲಾಂಚ್ ಮಾಡಲಿದೆ. ಈ ನೂತನ ಫೋನ್ S ಪೆನ್ ಅನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಹಾಗಾದರೇ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಸ್ಮಾರ್ಟ್‌ಫೋನಿನ ನಿರೀಕ್ಷಿತ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ನಿರೀಕ್ಷಿತ ಫೀಚರ್ಸ್‌ಗಳು:
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಫೋನ್ 6.2 ಇಂಚಿನ ಹೆಚ್‌ಡಿ+ ಕವರ್ ಡಿಸ್‌ಪ್ಲೇ ಹೊಂದಿದ್ದು, ತೆರೆದಾಗ 7.6 ಇಂಚಿನ ದೊಡ್ಡ ಆಂತರಿಕ 2K ಡೈನಾಮಿಕ್ AMOLED ಡಿಸ್‌ಪ್ಲೇ ಪಡೆದಿದೆ. ಜೊತೆಗೆ ಇದು 120Hz ರಿಫ್ರೆಶ್ ರೇಟ್, HDR10+, ಡಾಲ್ಬಿ ವಿಷನ್ ಸೌಲಭ್ಯಗಳನ್ನು ಒಳಗೊಂಡಿದೆ. ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ ಇನ್ ಸ್ಕ್ರೀನ್ ಕ್ಯಾಮೆರಾವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಫೋನ್ ಭದ್ರತೆಗಾಗಿ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸಂವೇದಕವನ್ನು ಹೊಂದಿದೆ ಮತ್ತು ಎಸ್ ಪೆನ್‌ಗೆ ಬೆಂಬಲವನ್ನು ಹೊಂದಿರುತ್ತದೆ.

ಇನ್ನು ಈ ಫೋಲ್ಡಬಲ್ ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ ಜೆನ್ 1 ಚಿಪ್‌ಸೆಟ್ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗುತ್ತದೆ. ಜೊತೆಗೆ ಈ ಫೋನ್ 12GB RAM ಮತ್ತು 512GB ವರೆಗೆ ಸಂಗ್ರಹಣೆಯೊಂದಿಗೆ ಬರುತ್ತದೆ ಎಂದು ನಿರೀಕ್ಷಿಸಲಾಗಿದೆ. ಆಂಡ್ರಾಯ್ಡ್ 12 ಆಧಾರಿತ ಒನ್UI ಕಸ್ಟಮ್ ಸ್ಕಿನ್‌ನಲ್ಲಿ ರನ್ ಆಗುವ ಸಾಧ್ಯತೆಯಿದೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಫೋನ್ 25W ವೇಗದ ಚಾರ್ಜಿಂಗ್ ಬೆಂಬಲ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ನೊಂದಿಗೆ 4,400mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿರಲಿದೆ ಎಂದು ಹೇಳಲಾಗುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಹಿಂಭಾಗದಲ್ಲಿ ಟ್ರಿಪಲ್ ಕ್ಯಾಮೆರಾಗಳನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಇದರಲ್ಲಿ 50 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ, 12 ಮೆಗಾ ಪಿಕ್ಸಲ್‌ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು 3X ಜೂಮ್‌ನೊಂದಿಗೆ 12 ಮೆಗಾ ಪಿಕ್ಸಲ್ ಟೆಲಿಫೋಟೋ ಕ್ಯಾಮೆರಾ ಒಳಗೊಂಡಿದೆ. ಇದು ಸೆಲ್ಫಿಗಳು ಮತ್ತು ವೀಡಿಯೊ ಚಾಟ್‌ಗಳಿಗಾಗಿ 16 ಮೆಗಾ ಪಿಕ್ಸಲ್ ಇನ್-ಸ್ಕ್ರೀನ್ ಕ್ಯಾಮೆರಾ ಮತ್ತು ಹೊರಗಿನ ಪರದೆಯಲ್ಲಿ 10 ಮೆಗಾ ಪಿಕ್ಸಲ್ ಸಂವೇದಕವನ್ನು ಹೊಂದಿದೆ ಎಂದು ಹೇಳಲಾಗುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಫೋನ್ ವಿನ್ಯಾಸ
ನೋಡಲು ಕಳೆದ ವರ್ಷದ ಬಿಡುಗಡೆ ಆದ ಗ್ಯಾಲಕ್ಸಿ ಫೋಲ್ಡ್ 3 ಅನ್ನು ಹೋಲುವಂತಿದೆ. ಆದರೆ ಕೆಲವು ಸುಧಾರಣೆಗಳನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಈ ಫೋನಿನ ಮಡಚಿಕೊಳ್ಳುವ ಮಧ್ಯದಲ್ಲಿ ಡಿಸ್‌ಪ್ಲೇ ಕ್ರೀಸ್ ಅನ್ನು ಸಹ ಗಮನಾರ್ಹವಾಗಿ ಕಡಿಮೆಗೊಳಿಸಲಾಗುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಈ ಫೋನ್ ಗ್ರೇ-ಗ್ರೀನ್, ಬೀಜ್ ಮತ್ತು ಫ್ಯಾಂಟಮ್ ಬ್ಲಾಕ್ ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ.

ನಿರೀಕ್ಷಿತ ಬೆಲೆ ಎಷ್ಟು?
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಫೋನ್ ನಿರೀಕ್ಷಿತ ಬೆಲೆಯು 12GB + 256GB ಮಾದರಿಗೆ ಯುರೋ 1,879 ಮತ್ತು 12GB + 512GB ಆವೃತ್ತಿಗೆ ಯುರೋ 1,999 ಎಂದು ಅಂದಾಜಿಸಲಾಗುತ್ತಿದೆ. ಆಸಕ್ತ ಗ್ರಾಹಕರು ಸ್ಯಾಮ್‌ಸಂಗ್‌ನ ಅಧಿಕೃತ ವೆಬ್‌ಸೈಟ್ ಮತ್ತು ಎಕ್ಸ್‌ಕ್ಲೂಸಿವ್ ಸ್ಟೋರ್‌ಗಳ ಮೂಲಕ 1,999 ರೂ. ಪಾವತಿಸುವ ಮೂಲಕ ಫೋಲ್ಡಬಲ್ ಅನ್ನು ಮೊದಲೇ ಕಾಯ್ದಿರಿಸಬಹುದು. ಎಲ್ಲಾ ಮುಂಗಡ ಕೋರಿಕೆ ಗ್ರಾಹಕರು ವಿತರಣೆಯ ನಂತರ ರೂ 5,000 ಮೌಲ್ಯದ ಹೆಚ್ಚುವರಿ ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಫೋಲ್ಡ್ 3 ಸ್ಮಾರ್ಟ್‌ಫೋನ್ ಫೀಚರ್ಸ್
ಸ್ಯಾಮ್‌ಸಂಗ್ ಗ್ಯಾಲಕ್ಸಿ ಫೋಲ್ಡ್ 3 ಸ್ಮಾರ್ಟ್‌ಫೋನ್ ಡ್ಯುಯಲ್ ಡಿಸ್‌ಪ್ಲೇ ರಚನೆಯನ್ನು ಹೊಂದಿದೆ. 7.6 ಇಂಚಿನ ಡೈನಾಮಿಕ್ AMOLED 2X ಇನ್ಫಿನಿಟಿ ಫ್ಲೆಕ್ಸ್ ಡಿಸ್ಪ್ಲೇ ಪಡೆದಿದ್ದು, 120Hz ರೀಫ್ರೇಶ್ ರೇಟ್ ಪಡೆದಿದೆ. ಡಿಸ್‌ಪ್ಲೇ ಅನುಪಾತವು 22.5:18 ಆಗಿದೆ. ಹಾಗೆಯೇ ಫೋನಿನ ಕವರ್ ಸ್ಕ್ರೀನ್ 6.2-ಇಂಚಿನ HD+ (832x2,268 ಪಿಕ್ಸೆಲ್‌ಗಳು) ಡೈನಾಮಿಕ್ AMOLED 2X ಡಿಸ್‌ಪ್ಲೇ 120Hz ರಿಫ್ರೆಶ್ ದರದಲ್ಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI ಬೆಂಬಲಿತ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಇದೆ. ಇನ್ನು ಈ ಫೋನ್ 12GB + 256GB ಮತ್ತು 12GB + 512GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ.

ಗ್ಯಾಲಕ್ಸಿ ಫೋಲ್ಡ್ 3 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ಮೂರು ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಮೂರು ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್ ಪಡೆದಿವೆ. ಇನ್ನು ಸೆಲ್ಫಿ ಕ್ಯಾಮೆರಾ (ಕವರ್ ಕ್ಯಾಮೆರಾ) 10 ಎಂಪಿ ಸೆನ್ಸಾರ್‌ನಲ್ಲಿದೆ. ಜೊತೆಗೆ ಸ್ಮಾರ್ಟ್‌ಫೋನ್ 4,400mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ 25W ಫಾಸ್ಟ್ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಹಾಗೆಯೇ ಈ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಇದು ಎಸ್ ಪೆನ್ ಪ್ರೊ ಸೌಲಭ್ಯ ಹೊಂದಿದೆ. ಇನ್ನು ಈ ಫೋನ್ ಫ್ಯಾಂಟಮ್ ಬ್ಲಾಕ್, ಫ್ಯಾಂಟಮ್ ಗ್ರೀನ್ ಮತ್ತು ಫ್ಯಾಂಟಮ್ ಸಿಲ್ವರ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.


Click it and Unblock the Notifications








