ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್‌ 4 V/S ಗ್ಯಾಲಕ್ಸಿ Z ಫೋಲ್ಡ್‌ 3: ಏನಿದೆ ಹೊಸತು?

|

ಸ್ಯಾಮ್‌ಸಂಗ್ ಸಂಸ್ಥೆಯು ನೂತನವಾಗಿ ಗ್ಯಾಲಕ್ಸಿ Z ಫೋಲ್ಡ್‌ 4 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಫೋನ್‌ ಜೊತೆಗೆ ಗ್ಯಾಲಕ್ಸಿ Z ಫ್ಲಿಪ್‌ 4, ಗ್ಯಾಲಕ್ಸಿ ವಾಚ್ 5, ಗ್ಯಾಲಕ್ಸಿ ಬಡ್ಸ್‌ 2 ಪ್ರೊ ಡಿವೈಸ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಗ್ಯಾಲಕ್ಸಿ Z ಫೋಲ್ಡ್‌ 4 ಪ್ರಮುಖವಾಗಿ ಗಮನ ಸೆಳೆದಿದ್ದು, ಈ ಫೋನ್ ಸ್ನ್ಯಾಪ್‌ಡ್ರಾಗನ್ 8 ಜೆನ್‌ 1 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಈ ಹಿಂದಿನ ಗ್ಯಾಲಕ್ಸಿ Z ಫೋಲ್ಡ್‌ 3 ಫೋನ್‌ಗಿಂತ ಈ ಫೋನ್‌ ಏನೆಲ್ಲಾ ಹೊಸ ಬದಲಾವಣೆಗಳೊಂದಿಗೆ ಲಗ್ಗೆ ಇಟ್ಟಿದೆ ಗೊತ್ತಾ.?

ಗ್ಯಾಲಕ್ಸಿ

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಗ್ಯಾಲಕ್ಸಿ Z ಫೋಲ್ಡ್‌ 4 ಸ್ಮಾರ್ಟ್‌ಫೋನ್‌ ಆಕರ್ಷಕ ಡಿಸೈನ್‌ ಹಾಗೂ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಮಾರುಕಟ್ಟೆಯಲ್ಲಿ ಸದ್ದು ಮಾಡುವ ಲಕ್ಷಣ ಹೊರಹಾಕಿದೆ. ಈ ಫೋನ್ 12GB RAM ಮತ್ತು 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದೆ. ಇನ್ನು ಗ್ಯಾಲಕ್ಸಿ Z ಫೋಲ್ಡ್‌ 3 ಫೋನ್‌ ಸ್ನಾಪ್‌ಡ್ರಾಗನ್ 888 ಚಿಪ್ ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ತ್ರಿಪಲ್‌

ಗ್ಯಾಲಕ್ಸಿ Z ಫೋಲ್ಡ್‌ 4 ಸ್ಮಾರ್ಟ್‌ಫೋನ್‌ ತ್ರಿಪಲ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಗ್ಯಾಲಕ್ಸಿ Z ಫೋಲ್ಡ್‌ 4 ಫೋನ್ 3X ಟೆಲಿಫೋಟೋ ಲೆನ್ಸ್ ಸೌಲಭ್ಯಗೆ ಅಪ್‌ಗ್ರೇಡ್‌ ಆಗಿದ್ದು, ಈ ಮೊದಲಿನ ಗ್ಯಾಲಕ್ಸಿ Z ಫೋಲ್ಡ್‌ 3 ಫೋನ್‌ 3X ಜೂಮ್‌ ಸೌಲಭ್ಯವನ್ನು ಹೊಂದಿತ್ತು. ಹಾಗಾದರೆ, ಗ್ಯಾಲಕ್ಸಿ Z ಫೋಲ್ಡ್‌ 4 ಮತ್ತು ಗ್ಯಾಲಕ್ಸಿ Z ಫೋಲ್ಡ್‌ 3 ಫೋನ್‌ಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸೈನ್‌ ಮತ್ತು ಡಿಸ್‌ಪ್ಲೇ ಕ್ವಾಲಿಟಿ

ಡಿಸೈನ್‌ ಮತ್ತು ಡಿಸ್‌ಪ್ಲೇ ಕ್ವಾಲಿಟಿ

ಈ ಎರಡು ಫೋನ್‌ಗಳು ನೋಡಲು ಒಂದೇ ರೀತಿ ಕಂಡರೂ, ಡಿಸ್ಪ್ಲೇ ಆನ್ ಮಾಡಿದಾಗ ಭಿನ್ನತೆಗಳನ್ನು ಕಾಣಬಹುದು. ಗ್ಯಾಲಕ್ಸಿ Z ಫೋಲ್ಡ್‌ 4 ಸ್ಮಾರ್ಟ್‌ಫೋನ್‌ 7.6 ಇಂಚಿನ ಡೈನಾಮಿಕ್ ಅಮೋಲೆಡ್‌ 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಕವರ್‌ ಸ್ಕ್ರೀನ್ 6.2 ಇಂಚಿನ HD+ ಡೈನಾಮಿಕ್ ಅಮೋಲೆಡ್‌ 2X ಕವರ್‌ ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ ಡ್ಯುಯಲ್ ಡಿಸ್‌ಪ್ಲೇ ರಚನೆಯನ್ನು ಹೊಂದಿದೆ. 7.6 ಇಂಚಿನ ಡೈನಾಮಿಕ್ AMOLED 2X ಇನ್ಫಿನಿಟಿ ಫ್ಲೆಕ್ಸ್ ಡಿಸ್ಪ್ಲೇ ಪಡೆದಿದ್ದು, ಹಾಗೆಯೇ ಫೋನಿನ ಕವರ್‌ ಸ್ಕ್ರೀನ್ 6.2-ಇಂಚಿನ HD+ (832x2,268 ಪಿಕ್ಸೆಲ್‌ಗಳು) ಡೈನಾಮಿಕ್ AMOLED 2X ಡಿಸ್‌ಪ್ಲೇ 120Hz ರಿಫ್ರೆಶ್ ದರದಲ್ಲಿದೆ.

ಕಾರ್ಯವೈಖರಿ ಮತ್ತು ಸಾಫ್ಟ್‌ವೇರ್

ಕಾರ್ಯವೈಖರಿ ಮತ್ತು ಸಾಫ್ಟ್‌ವೇರ್

ಗ್ಯಾಲಕ್ಸಿ Z ಫೋಲ್ಡ್‌ 4 ಮತ್ತು ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್‌ಗಳು ಪ್ರೊಸೆಸರ್‌ನಲ್ಲಿ ಭಿನ್ನತೆಗಳಿನ್ನು ಹೊಂದಿವೆ. ನೂತನ ಗ್ಯಾಲಕ್ಸಿ Z ಫೋಲ್ಡ್‌ 4 ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 12 ಆಧಾರಿತ ಒನ್‌ UI 4.1.1 ನಲ್ಲಿ ಕಾರ್ಯನಿರ್ವಹಿಸಲಿದ್ದು, 12GB RAM ಮತ್ತು 1TB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 888 ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI ಬೆಂಬಲಿತ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್ ಇದೆ. ಇನ್ನು ಈ ಫೋನ್ 12GB + 256GB ಮತ್ತು 12GB + 512GB ಸ್ಟೋರೇಜ್ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 4 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 10 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಮೇನ್‌ ಡಿಸ್‌ಪ್ಲೇಯಲ್ಲಿ 4 ಮೆಗಾ ಪಿಕ್ಸೆಲ್ ಸೆನ್ಸಾರ್‌ ಕ್ಯಾಮೆರಾ ಹಾಗೂ ಕವರ್ ಡಿಸ್‌ಪ್ಲೇಯಲ್ಲಿ 10 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಒಟ್ಟು ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಮೂರು ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸಲ್ ಸೆನ್ಸಾರ್‌ ಪಡೆದಿವೆ. ಇನ್ನು ಸೆಲ್ಫಿ ಕ್ಯಾಮೆರಾ (ಕವರ್‌ ಕ್ಯಾಮೆರಾ) 10 ಎಂಪಿ ಸೆನ್ಸಾರ್‌ನಲ್ಲಿದೆ.

ಬ್ಯಾಟರಿ ಬ್ಯಾಕ್‌ಅಪ್‌

ಬ್ಯಾಟರಿ ಬ್ಯಾಕ್‌ಅಪ್‌

ಬ್ಯಾಟರಿ ವಿಭಾಗದಲ್ಲಿ ಬಹುತೇಕ ಎರಡು ಒಂದೇ ಮಾದರಿಯಲ್ಲಿವೆ. ಗ್ಯಾಲಕ್ಸಿ Z ಫೋಲ್ಡ್‌ 4 ಸ್ಮಾರ್ಟ್‌ಫೋನ್‌ 4,400mAh ಸಾಮರ್ಥ್ಯದ ಡ್ಯುಯಲ್ ಬ್ಯಾಟರಿಯನ್ನು ಹೊಂದಿದ್ದು, ಇದು 25W ಚಾರ್ಜರ್‌ ಬೆಂಬಲಿಸಲಿದೆ. ಅದೇ ರೀತಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಫೋಲ್ಡ್‌ 3 ಸ್ಮಾರ್ಟ್‌ಫೋನ್ ಸಹ 4,400mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ 25W ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ.

Best Mobiles in India

English summary
Samsung Galaxy Z Fold 4 vs Galaxy Z Fold 3: what is the Difference.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X