ಸ್ಯಾಮ್‌ಸಂಗ್‌ನ ಈ ಎರಡು ದೈತ್ಯ ಫೋನ್‌ಗಳು ಈಗ ಖರೀದಿಗೆ ಲಭ್ಯ!..ಆಫರ್ ಇದೆ!
ಸ್ಯಾಮ್‌ಸಂಗ್ ಸಂಸ್ಥೆಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 5 ಫೋನ್‌ಗಳು ಈಗಾಗಲೇ ಮಾರುಕಟ್ಟೆಯಲ್ಲಿ ಟ್ರೆಂಡ್ ಸೃಷ್ಠಿಸಿವೆ. ಈ ಎರಡು ದೈತ್ಯ ಫೋನ್‌ಗಳ ಮಾರಾಟ ಇಂದು ಪ್ರಾರಂಭವಾಗಿದ್ದು, ಫ್ಲಿಪ್‌ಕಾರ್ಟ್, ಅಮೆಜಾನ್ ಹಾಗೂ ಅಧಿಕೃತ ಸ್ಯಾಮ್‌ಸಂಗ್ ವೆಬ್‌ಸೈಟ್ ಮೂಲಕ ಖರೀದಿಗೆ ಲಭ್ಯ ಇವೆ.
ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಮೂರು ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಇದರ ಆರಂಭಿಕ ವೇರಿಯಂಟ್ ಬೆಲೆಯು 1,54,999ರೂ. ಆಗಿದೆ. ಹಾಗೆಯೇ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 5 ನಾಲ್ಕು ಕಲರ್ ಆಯ್ಕೆ ಪಡೆದಿದ್ದು, ಈ ಫೋನಿನ ಆರಂಭಿಕ ವೇರಿಯಂಟ್ ದರವು 99,999ರೂ. ಆಗಿದೆ. ಹಾಗಾದರೆ ಈ ಎರಡು ದೈತ್ಯ ಫೋನ್‌ಗಳ ಫೀಚರ್ಸ್ ಏನು ಎಂಬುದರ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಡಿಸ್‌ಪ್ಲೇ ವಿನ್ಯಾಸ : ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಮೊಬೈಲ್ 7.6 ಇಂಚಿನ ಇನರ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 2,176 x 1,812 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಒಳಗೊಂಡಿದೆ. ಇದು AMOLED 2X ಇನ್ಫಿನಿಟಿ ಫ್ಲೆಕ್ಸ್ ಜೊತೆಗೆ 120Hz ರಿಫ್ರೆಶ್ ರೇಟ್ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಕವರ್ ಡಿಸ್‌ಪ್ಲೇ ಮಾಹಿತಿ : ಈ ಫೋನಿನ ಕವರ್ ಡಿಸ್‌ಪ್ಲೇ 6.2 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಸಾಮರ್ಥ್ಯದಲ್ಲಿ ಇದ್ದು, ಇದು 2,316 x 904 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒದಗಿಸಲಿದೆ. ಈ ಡಿಸ್‌ಪ್ಲೇ 48Hz ಮತ್ತು 120Hz ನಡುವಿನ ಅಡಾಪ್ಟಿವ್ ರಿಫ್ರೆಶ್ ರೇಟ್ ಮತ್ತು 412ppi ಪಿಕ್ಸೆಲ್ ಸಾಂದ್ರತೆ ಪಡೆದಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಪ್ರೊಸೆಸರ್ ಪವರ್ : ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಬಲ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಆಧಾರಿತ ಒನ್ UI 5.1.1 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಇದು 12GB RAM ಮತ್ತು 256GB, 512GB ಮತ್ತು 1TB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯ.
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಕ್ಯಾಮೆರಾ ರಚನೆ ಮಾಹಿತಿ : ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಮೊಬೈಲ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್, ಸೆಕೆಂಡರಿ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಲೆನ್ಸ್ ಮತ್ತು ತೃತೀಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್ ಆಗಿದೆ. ಇನ್ನು ಮುಂಭಾಗದಲ್ಲಿ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕವರ್ ಡಿಸ್‌ಪ್ಲೇಯಲ್ಲಿ ಹಾಗೂ 4 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಅಂಡರ್ ಡಿಸ್ಪ್ಲೇಯಲ್ಲಿ ಒದಗಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 5 ಫೀಚರ್ಸ್:
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫ್ಲಿಪ್ 5 ಸ್ಮಾರ್ಟ್‌ಫೋನ್ 2640 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್‌ನೊಂದಿಗೆ 6.7 ಇಂಚಿನ ಡೈನಾಮಿಕ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದೆ. ಇದರೊಂದಿಗೆ 720 x 748 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 3.4 ಇಂಚಿನ ಸೂಪರ್ ಅಮೋಲೆಡ್ ಕವರ್ ಡಿಸ್‌ಪ್ಲೇ ಪಡೆದಿದೆ. ಅಲ್ಲದೇ ಇದು ಸ್ನಾಪ್‌ಡ್ರಾಗನ್ 8 ಜನ್ 2 ಪ್ರೊಸೆಸರ್ ಪವರ್ ಅನ್ನು ಸಹ ಪಡೆದಿದೆ.
ಹಾಗೆಯೇ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 12 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಸೆಲ್ಫಿಗಾಗಿ ಮುಂಭಾಗದಲ್ಲಿ 10 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ. ಇದರ ಜೊತೆಗೆ ಈ ಫೋನ್ 3,700mAh ಬ್ಯಾಟರಿ ಸಾಮರ್ಥ್ಯ ಹೊಂದಿದೆ.


Click it and Unblock the Notifications








