ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5; ಫೀಚರ್ಸ್ ಬೆಂಕಿ
ಬಹು ನಿರೀಕ್ಷಿತ ಸ್ಯಾಮ್‌ಸಂಗ್ ಗ್ಯಾಲಕ್ಸಿ ಅನ್‌ಪ್ಯಾಕ್ಡ್ ಈವೆಂಟ್‌ನಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಸ್ಮಾರ್ಟ್‌ಫೋನ್ ಅನಾವರಣಗೊಂಡಿದೆ. ಇದು ಸ್ಯಾಮ್‌ಸಂಗ್ ಕಂಪೆನಿಯ ನವೀನ ಮಾದರಿಯ ನ್ಯೂ ಫೋಲ್ಡಬಲ್ ಸ್ಮಾರ್ಟ್‌ಫೋನ್ ಆಗಿದೆ. ಈ ಫೋನ್ ಕ್ವಾಲ್ಕಾಮ್‌ನ ಟಾಪ್-ಆಫ್-ದಿ-ಲೈನ್ ಸ್ನಾಪ್‌ಡ್ರಾಗನ್ 8 ಜನ್ 2 ಮೊಬೈಲ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಎಂಟ್ರಿಯಲ್ಲಿಯೇ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಿರುವ ಸ್ಮಾರ್ಟ್‌ಫೋನ್ 6.2 ಇಂಚಿನ ಕವರ್ ಡಿಸ್‌ಪ್ಲೇ ಹಾಗೂ 7.6 ಇಂಚಿನ ಇನರ್ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಹೊಸ ಫ್ಲೆಕ್ಸ್ ಹಿಂಜ್ ಅನ್ನು ಡ್ಯುಯಲ್ ರೈಲ್ ರಚನೆ ಹೊಂದಿವೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಇನರ್ ಡಿಸ್‌ಪ್ಲೇ ರಚನೆ ಹೇಗಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಸ್ಮಾರ್ಟ್‌ಫೋನ್ 7.6 ಇಂಚಿನ ಇನರ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,176 x 1,812 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು AMOLED 2X ಇನ್ಫಿನಿಟಿ ಫ್ಲೆಕ್ಸ್ ಡಿಸ್‌ಪ್ಲೇ ಜೊತೆಗೆ 1Hz ಮತ್ತು 120Hz ನಡುವಿನ ಅಡಾಪ್ಟಿವ್ ರಿಫ್ರೆಶ್ ರೇಟ್ ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಕವರ್ ಡಿಸ್‌ಪ್ಲೇ ರಚನೆ ಹೇಗಿದೆ?
ಇನ್ನು ಈ ಸ್ಮಾರ್ಟ್‌ಫೋನ್‌ನ ಕವರ್ ಡಿಸ್‌ಪ್ಲೇ 6.2 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಆಗಿದೆ. ಇದು 2,316 x 904 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನಬ್ ಸಾಮರ್ಥ್ಯವನ್ನು ನೀಡಲಿದೆ. ಈ ಡಿಸ್‌ಪ್ಲೇ 48Hz ಮತ್ತು 120Hz ನಡುವಿನ ಅಡಾಪ್ಟಿವ್ ರಿಫ್ರೆಶ್ ರೇಟ್ ಮತ್ತು 412ppi ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 13-ಆಧಾರಿತ One UI 5.1.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB, 512GB ಮತ್ತು 1TB ಸ್ಟೋರೇಜ್ ರೂಪಾಂತರಗಳಲ್ಲಿ ಲಭ್ಯವಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಕ್ಯಾಮೆರಾ ಸೆಟ್‌ಅಪ್ ಏನಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆ ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಆಂಗ್ಲೀವ್ 2 ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕವರ್ ಡಿಸ್‌ಪ್ಲೇಯಲ್ಲಿ ಹಾಗೂ 4 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಅಂಡರ್ ಡಿಸ್ಪ್ಲೇಯಲ್ಲಿ ನೀಡಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಬ್ಯಾಟರಿ ಬ್ಯಾಕ್‌ಅಪ್ ಎಷ್ಟಿದೆ?
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಸ್ಮಾರ್ಟ್‌ಫೋನ್ 4,400mAh ಬ್ಯಾಟರಿಯನ್ನು ಹೊಂದಿದೆ. ಇದು 25W ಅಡಾಪ್ಟರ್‌ನೊಂದಿಗೆ 30 ನಿಮಿಷಗಳಲ್ಲಿ 50% ಚಾರ್ಜ್ ಮಾಡಲಿದೆ. ಅಲ್ಲದೆ ವೇಗದ ವಾಯರ್‌ಲೆಸ್ ಚಾರ್ಜಿಂಗ್ 2.0 ಅನ್ನು ಕೂಡ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E ಮತ್ತು ಬ್ಲೂಟೂತ್ 5.3 ಅನ್ನು ಬೆಂಬಲಿಸಲಿದೆ. ಇದು ಅಕ್ಸಿಲೆರೊಮೀಟರ್, ಬಾರೋಮೀಟರ್, ಗೈರೊಸ್ಕೋಪ್, ದಿಕ್ಸೂಚಿ, ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 5 ಸ್ಮಾರ್ಟ್‌ಫೋನ್ 256GB ಸ್ಟೋರೇಜ್ ಆಯ್ಕೆಗೆ USD 1799.99 (ಅಂದಾಜು 1,47,650ರೂ)ಬೆಲೆ ಹೊಂದಿದೆ. ಇದರ 512GB ಸ್ಟೋರೇಜ್ ಆಯ್ಕೆಯು $1919.99 (ಅಂದಾಜು 1,57,495ರೂ) ಬೆಲೆ ಪಡೆದಿದೆ. ಇನ್ನು ಈ ಫೋನ್‌ನ 1TB ಆಯ್ಕೆಯು $2159.99 ( ಅಂದಾಜು 1,77,180ರೂ) ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ನ ಭಾರತದ ಬೆಲೆ ವಿವರಗಳು ನಾಳೆ ಬೆಳಿಗ್ಗೆ ತಿಳಿದು ಬರಲಿದೆ. ಇನ್ನು ಸ್ಮಾರ್ಟ್‌ಫೋನ್ ಇಂದಿನಿಂದ ಆರ್ಡರ್ ಮಾಡಲು ಲಭ್ಯವಿದೆ ಮತ್ತು ಆಗಸ್ಟ್ 11 ರಿಂದ ಆಯ್ದ ದೇಶಗಳಲ್ಲಿ ಮಾರಾಟವಾಗಲಿದೆ.


Click it and Unblock the Notifications








