Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 6 ಲಾಂಚ್‌; ವೇಗದ ಪ್ರೊಸೆಸರ್‌, ಹೈ ಎಂಡ್‌ ಕ್ಯಾಮೆರಾ!

ದಕ್ಷಿಣ ಕೊರಿಯಾ ಟೆಕ್ ದೈತ್ಯ ಸ್ಯಾಮ್‌ಸಂಗ್‌ ಪ್ಯಾರಿಸ್‌ನಲ್ಲಿ ನಡೆದ ತನ್ನ ಬಹುನಿರೀಕ್ಷಿತ ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ (Samsung Galaxy Unpacked 2024) ಕಾರ್ಯಕ್ರಮದಲ್ಲಿ ಸಂಸ್ಥೆಯು ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 6 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಸ್ಯಾಮ್‌ಸಂಗ್‌ ಕಂಪೆನಿಯ ಈ ನವೀನ ಫೋಲ್ಡಬಲ್‌ ಫೋನ್‌ ಸಾಕಷ್ಟು ಅಪ್‌ಡೇಟ್‌ ಫೀಚರ್ಸ್‌ಗಳೊಂದಿಗೆ ಎಂಟ್ರಿ ಕೊಟ್ಟಿದ್ದು, ಇದು ಕ್ವಾಲ್ಕಮ್ ಸ್ನಾಪ್‌ಡ್ರಾಗನ್ 8 ಜನ್ 3 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ ಈ ಫೋನ್‌ ತ್ರಿವಳಿ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ.

ಹೌದು, ಸ್ಯಾಮ್‌ಸಂಗ್‌ನ ಬಹುನಿರೀಕ್ಷಿತ ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 6 ಫೋನ್‌ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್‌ 12 GB RAM + 256 GB, 12 GB RAM + 512 GB, ಮತ್ತು 12 GB RAM + 1 TB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗೆಯೇ ಇದು ಸಿಲ್ವರ್ ಶ್ಯಾಡೋ, ಪಿಂಕ್ ಮತ್ತು ನೇವಿ ಜೊತೆಗೆ ವಿಶೇಷವಾಗಿ ಕ್ರಾಫ್ಟೆಡ್ ಬ್ಲಾಕ್ ಮತ್ತು ವೈಟ್ ಕಲರ್‌ ಆಯ್ಕೆಯಲ್ಲಿ ಲಭ್ಯ ಇರಲಿದೆ. ಹಾಗಾದರೇ ಈ ಫೋನ್‌ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 6 ಲಾಂಚ್‌; ವೇಗದ ಪ್ರೊಸೆಸರ್‌, ಕ್ಯಾಮೆರಾ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 6 ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 6 ಸ್ಮಾರ್ಟ್‌ಫೋನ್‌ 7.6 ಇಂಚಿನ ಡೈನಾಮಿಕ್ AMOLED 2X ಮುಖ್ಯ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,856 x 2,160 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 120Hz ರಿಫ್ರೆಶ್ ರೇಟ್‌ ಸಹ ಒಳಗೊಂಡಿದೆ. ಇನ್ನು ಕವರ್‌ ಸ್ಕ್ರೀನ್‌ 6.2 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಸಾಮರ್ಥ್ಯದಲ್ಲಿ ಇದೆ. ಕವರ್‌ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ 2 ರಕ್ಷಣೆ ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 6 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 3 SoC ಚಿಪ್‌ಸೆಟ್‌ ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 14 ಓಎಸ್‌ ಆಧಾರಿತ ಒನ್‌ UI 6.1.1 ನಲ್ಲಿ ಕೆಲಸ ನಿರ್ವಹಿಸುತ್ತದೆ. ಹಾಗೆಯೇ 12 GB RAM + 256 GB, 12 GB RAM + 512 GB, ಮತ್ತು 12 GB RAM + 1 TB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಲಭ್ಯವಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 6 ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಪಡೆದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ಲೆನ್ಸ್‌ ಮತ್ತು ತೃತೀಯ ಕ್ಯಾಮೆರಾ 10 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 10 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕವರ್ ಡಿಸ್‌ಪ್ಲೇಯಲ್ಲಿ ಹಾಗೂ 4 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಅಂಡರ್ ಡಿಸ್ಪ್ಲೇಯಲ್ಲಿ ನೀಡಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 6 ಸ್ಮಾರ್ಟ್‌ಫೋನ್‌ 4,400mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಪಡೆದಿದ್ದು, ಜೊತೆಗೆ 25W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಅಲ್ಲದೆ ವೇಗದ ವಾಯರ್‌ಲೆಸ್ ಚಾರ್ಜಿಂಗ್ 2.0 ಅನ್ನು ಕೂಡ ಸಪೋರ್ಟ್‌ ಮಾಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6E ಮತ್ತು ಬ್ಲೂಟೂತ್ 5.3 ಅನ್ನು ಬೆಂಬಲಿಸಲಿದೆ. ಇದು ಅಕ್ಸಿಲೆರೊಮೀಟರ್, ಬಾರೋಮೀಟರ್, ಗೈರೊಸ್ಕೋಪ್, ದಿಕ್ಸೂಚಿ, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಪಡೆದಿದೆ.

ಬೆಲೆ ಹಾಗೂ ಲಭ್ಯತೆ

12GB+256GB ವೇರಿಯಂಟ್‌ ಬೆಲೆ 1,64,999ರೂ. ಆಗಿದೆ
12GB+512GB ವೇರಿಯಂಟ್‌ ಬೆಲೆ 1,76,999ರೂ. ಆಗಿದೆ
12GB+1TB ವೇರಿಯಂಟ್‌ ಬೆಲೆ 2,00,999ರೂ. ಆಗಿದೆ

ಇದೇ ಜುಲೈ 24 ರಂದು ಫ್ಲಿಪ್‌ಕಾರ್ಟ್‌ ಹಾಗೂ ಅಮೆಜಾನ್‌ ಇ ಕಾಮರ್ಸ್‌ ತಾಣ ಸೇರಿದಂತೆ ಪ್ರಮುಖ ರಿಟೇಲ್‌ ಸ್ಟೋರ್‌ಗಳ ಮೂಲಕ ಮಾರಾಟ ಪ್ರಾರಂಭ ಮಾಡಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ರಿಂಗ್

ಇದೇ ಕಾರ್ಯಕ್ರಮದಲ್ಲಿ ಸಂಸ್ಥೆಯು ಸ್ಯಾಮ್‌ಸಂಗ್‌ ಗ್ಯಾಲಕ್ಸಿ ರಿಂಗ್ (Samsung Galaxy Ring) ಡಿವೈಸ್‌ ಅನ್ನು ಅನಾವರಣ ಮಾಡಿದೆ. ಈ ಸಾಧನವು ನಿದ್ರೆ ಟ್ರ್ಯಾಕಿಂಗ್, ಹೃದಯ ಬಡಿತ ಟ್ರ್ಯಾಕಿಂಗ್, ಆರೋಗ್ಯ ಟ್ರ್ಯಾಕಿಂಗ್ ಮಾಡುತ್ತದೆ. ಇದು ಟೈಟಾನಿಯಂ ಬ್ಲಾಕ್, ಸಿಲ್ವರ್ ಮತ್ತು ಟೈಟಾನಿಯಂ ಗೋಲ್ಡ್ ಕಲರ್ ಆಯ್ಕೆ ಪಡೆದಿದೆ.

Best Mobiles in India

English summary
Samsung Galaxy Z Fold 6 With Galaxy AI Launched. Specifications and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+