ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಲಾಂಚ್ ಡೇಟ್ ಬಹಿರಂಗ! ಫೀಚರ್ಸ್ ನಿರೀಕ್ಷೆ ಏನು?
ಸ್ಯಾಮ್‌ಸಂಗ್ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಲೇ ಬಂದಿವೆ. ಸದ್ಯ ಇದೀಗ ಬಿಡುಗಡೆಗೆ ಸಿದ್ದವಾಗಿರುವ ಗ್ಯಾಲಕ್ಸಿ A54 ಸ್ಮಾರ್ಟ್‌ಫೋನ್ ಕೂಡ ಭಾರಿ ಟ್ರೆಂಡ್ ಸೆಟ್ ಮಾಡಿದೆ.
ಹೌದು, ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಸ್ಮಾರ್ಟ್‌ಫೋನ್ ಇದೇ ಮಾರ್ಚ್ 16 ರಂದು ಬಿಡುಗಡೆಯಾಲಿದೆ. ಈ ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕ ಬಹಿರಂಗವಾಗ್ತಿದ್ದ ಹಾಗೇ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಎಬ್ಬಿಸಿದೆ. ಸದ್ಯ ಹೊಸ ಕ್ರೇಜ್ ಹುಟ್ಟುಹಾಕಿರುವ ಈ ಸ್ಮಾರ್ಟ್‌ಫೋನ್ ಏನಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಡಿಸ್‌ಪ್ಲೇ ಮತ್ತು ವಿನ್ಯಾಸ
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2340 x 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಲಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಇದು ಸುಗಮ ಸ್ಕ್ರೋಲಿಂಗ್ ಅನುಭವ ಮತ್ತು ಹೆಚ್ಚಿನ ಫ್ರೇಮ್-ರೇಟ್ ಗೇಮಿಂಗ್ ಅನ್ನು ಆಕ್ಟಿವ್ ಮಾಡಲಿದೆ ಎಂದು ವರದಿಯಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಪ್ರೊಸೆಸರ್ ಯಾವುದು?
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಎಕ್ಸಿನೋಸ್ 1380 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ನಾಲ್ಕು ARM ಕಾರ್ಟೆಕ್ಸ್ A55 ಕೋರ್‌ಗಳನ್ನು 2GHz ನಲ್ಲಿ ಕ್ಲಾಕ್ ಮಾಡುವುದರ ಮೂಲಕ ಸಮರ್ಥ ಕಾರ್ಯಕ್ಷಮತೆಯನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಕ್ಯಾಮೆರಾ ಸೆಟ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಲೆನ್ಸ್, ಮೂರನೇ ಕ್ಯಾಮೆರಾ 5ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ.
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಬ್ಯಾಟರಿ ಬ್ಯಾಕ್‌ಅಪ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ NFC, OTG ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಹಾಗೂ ಬ್ಲೂಟೂತ್ ಅನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ A54 ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ರೂಪಾಂತರದ ಆಯ್ಕೆಗೆ €519 (ಅಂದಾಜು 45,290ರೂ.)ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ.
ಇನ್ನು ಸ್ಯಾಮ್‌ಸಂಗ್ ಕಂಪೆನಿ ಇತ್ತೀಚಿಗೆ ಸ್ಯಾಮ್‌ಸಂಗ್ ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್ ಪರಿಚಯಿಸಿತ್ತು. ಈ ಸ್ಮಾರ್ಟ್‌ಫೋನ್ 6.8 ಇಂಚಿನ ಎಡ್ಜ್ QHD+ ಡೈನಾಮಿಕ್ ಅಮೋಲೆಡ್ 2X ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಡೈನಾಮಿಕ್ ರಿಫ್ರೆಶ್ ರೇಟ್ 1-120Hz ಬೆಂಬಲಿಸಲಿದೆ. ಅಲ್ಲದೆ ಗೇಮ್ ಮೋಡ್‌ನಲ್ಲಿ 240Hz ಟಚ್ ಸ್ಯಾಂಪ್ಲಿಂಗ್ ರೇಟಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ 2 ಪ್ರೊಟೆಕ್ಷನ್ ಹಾಗೂ ವಿಷನ್ ಬೂಸ್ಟರ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ನ ಕಸ್ಟಮ್ ಆವೃತ್ತಿಯನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 One UI 5.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.


Click it and Unblock the Notifications








