ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್‌ಗೆ ಮುಹೂರ್ತ ಫಿಕ್ಸ್‌! ಏನೆಲ್ಲಾ ನಿರೀಕ್ಷೆ?

|

ಸ್ಯಾಮ್‌ಸಂಗ್‌ ಕಂಪೆನಿ ತನ್ನ ಗ್ರಾಹಕರಿಗೆ ಗುಡ್‌ನ್ಯೂಸ್‌ ನೀಡಿದೆ. ಈ ವರ್ಷದ ಮೊದಲ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್‌ ದಿನಾಂಕವನ್ನು ಬಹಿರಂಗಪಡಿಸಿದೆ. ಅದರಂತೆ ಈ ಈವೆಂಟ್‌ ಇದೇ ಫೆಬ್ರವರಿ 1 ರಂದು ನಡೆಯಲಿದೆ ಎಂದು ದೃಢಪಡಿಸಿದೆ. ಇನ್ನು ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್‌ನಲ್ಲಿ ಯಾವೆಲ್ಲಾ ಡಿವೈಸ್‌ಗಳನ್ನು ಲಾಂಚ್‌ ಆಗಲಿವೆ ಅನ್ನೊದು ಬಹಿರಂಗವಾಗಿಲ್ಲ. ಆದರೆ ಈ ಇತ್ತೀಚಿಗೆ ಆನ್‌ಲೈನ್‌ನಲ್ಲಿ ಸೋರಿಕೆಯಾಗಿರುವಂತೆ ಗ್ಯಾಲಕ್ಸಿ S23 ಸರಣಿಯ ಫೋನ್‌ಗಳು ಈ ಈವೆಂಟ್‌ನಲ್ಲಿ ಲಾಂಚ್‌ ಆಗಬಹುದು ಎನ್ನಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್‌ಗೆ ಮುಹೂರ್ತ ಫಿಕ್ಸ್‌!

ಹೌದು, ಸ್ಯಾಮ್‌ಸಂಗ್‌ ಕಂಪೆನಿಯ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್ ಇದೇ ಫೆಬ್ರವರಿ 1 ರಂದು ನಡೆಯಲಿದೆ. ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್‌ನಲ್ಲಿ ಹಲವು ಡಿವೈಸ್‌ಗಳು ಅನಾವರಣಗೊಳ್ಳುವ ನಿರೀಕ್ಷೆಯಿದೆ. ಅದರಲ್ಲೂ ಗ್ಯಾಲಕ್ಸಿ S23 ಲೈನ್‌ಅಪ್‌ನಲ್ಲಿ ಗ್ಯಾಲಕ್ಸಿ S23, ಗ್ಯಾಲಕ್ಸಿ S23 ಪ್ಲಸ್‌, ಮತ್ತು ಗ್ಯಾಲಕ್ಸಿ S23 ಅಲ್ಟ್ರಾ ಫೋನ್‌ಗಳು ಬಿಡುಗಡೆಯಾಗುವ ನಿರೀಕ್ಷೆಯಿದೆ. ಹಾಗಾದ್ರೆ ಗ್ಯಾಲಕ್ಸಿ S23 ಸರಣಿಯ ಫೋನ್‌ಗಳ ಫೀಚರ್ಸ್‌ ಏನಿರಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ ಅನ್‌ಪ್ಯಾಕ್ಡ್‌ ಈವೆಂಟ್‌ನಲ್ಲಿ ಗ್ಯಾಲಕ್ಸಿ S23 ಸರಣಿಯು ಬಿಡುಗಡೆಯಾಗೋದು ಪಕ್ಕಾ ಎನ್ನಲಾಗಿದೆ. ಈ ಸರಣಿಯಲ್ಲಿ ಮೂರು ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗಲಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು ಕೂಡ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿವೆ ಎನ್ನಲಾಗಿದೆ. ಇನ್ನು ಇತ್ತೀಚೆಗೆ, ಆನ್‌ಲೈನ್‌ನಲ್ಲಿ ಸೋರಿಕೆಯಾದ ಮಾಹಿತಿಯಂತೆ ಗ್ಯಾಲಕ್ಸಿ S23, ಗ್ಯಾಲಕ್ಸಿ S23 ಪ್ಲಸ್‌, ಮತ್ತು ಗ್ಯಾಲಕ್ಸಿ S23 ಅಲ್ಟ್ರಾ ಸ್ಮಾರ್ಟ್‌ಫೋನ್‌ಗಳು ಯುನಿಬಾಡಿ ವಿನ್ಯಾಸವನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್‌ಗೆ ಮುಹೂರ್ತ ಫಿಕ್ಸ್‌!

ಈ ಹೊಸ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ಗಳು ಸ್ಕ್ರೀನ್‌ ಮತ್ತು ಬ್ಯಾಟರಿ ಬ್ಯಾಕ್‌ಅಪ್‌ ವಿಚಾರದಲ್ಲಿ ಭಿನ್ನವಾಗಿರಲಿದೆ. ಅದರಂತೆ ಸ್ಯಾಮ್‌ಸಂಗ್ ತನ್ನ ಈ ಸ್ಮಾರ್ಟ್‌ಫೋನ್‌ಗಳಲ್ಲಿ ಅಮೋಲೆಡ್‌ E6 ಡಿಸ್‌ಪ್ಲೇಯನ್ನು ಬಳಸುವ ಸಾಧ್ಯತೆ ಕೂಡ ಇದೆ. ಇನ್ನು ಗ್ಯಾಲಕ್ಸಿ S23 ಅಲ್ಟ್ರಾ ಫೋನ್‌ ಮಾತ್ರ 200 ಮೆಗಾಪಿಕ್ಸೆಲ್ ಸೆನ್ಸಾರ್‌ ಮುಖ್ಯ ಕ್ಯಾಮೆರಾ ಹೊಂದಿರಲಿದೆ ಎನ್ನಲಾಗಿದೆ. ಆದರೆ ಎಲ್ಲಾ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ಗಳು 25W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ ಎಂದು ವರದಿಯಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಅನ್‌ಪ್ಯಾಕ್ಡ್‌ ಈವೆಂಟ್‌ಗೆ ಮುಹೂರ್ತ ಫಿಕ್ಸ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S23 ಸ್ಮಾರ್ಟ್‌ಫೋನ್‌ ಹೈ ಎಂಡ್‌ ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಇದರ ಬೆಲೆ 70,000ರೂ. ಕ್ಕಿಂತ ಹೆಚ್ಚಿರಬಹುದು ಎನ್ನಲಾಗಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಅಲ್ಟ್ರಾ ಮಾದರಿಯು 1 ಲಕ್ಷಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆಯಿದೆ. ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಫೆಬ್ರವರಿ ಮಧ್ಯದಲ್ಲಿ ಅಥವಾ ಮಾರ್ಚ್ ಆರಂಭದಲ್ಲಿ ಭಾರತದಲ್ಲಿ ಸೇಲ್‌ ಆಗುವ ನಿರೀಕ್ಷೆಯಿದೆ.

ಇನ್ನು ಇತ್ತೀಚಿಗೆ ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ತನ್ನ ಹೊಸ ಗ್ಯಾಲಕ್ಸಿ F04 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಇನ್ಫಿನಿಟಿ-ವಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1560 × 720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ ಹೈ ಡೆಫಿನಿಷನ್‌ ವ್ಯೂವಿಂಗ್‌ ಎಕ್ಸ್‌ಪಿರಿಯನ್ಸ್‌ ಅನ್ನು ನೀಡಲಿದೆ. ಇದು ವಾಟರ್‌ಡ್ರಾಪ್ ನಾಚ್ ವಿನ್ಯಾಸ ಮತ್ತು ಸ್ಲಿಮ್ ಬೆಜೆಲ್‌ಗಳೊಂದಿಗೆ ಪ್ಯಾಕ್ ಮಾಡಲ್ಪಟ್ಟಿದೆ. ಇದು ಮೀಡಿಯಾ ಟೆಕ್ P35 ಪ್ರೊಸೆಸರ್ ವೇಗವನ್ನು ಹೊಂದಿದೆ. ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ವರ್ಚುವಲ್ RAM ಸಹಾಯದಿಂದ 8GB RAM ವರೆಗೆ ವಿಸ್ತರಿಸಬಹುದು. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

Best Mobiles in India

English summary
Samsung has confirmed Galaxy Unpacked 2023 event will take place on February 1

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X