ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸಿರೀಸ್ ಲಾಂಚ್ ಡೇಟ್ ಫಿಕ್ಸ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ತನ್ನ ಗ್ಯಾಲಕ್ಸಿ ಎಂ, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಅಲ್ಲದೆ ಫೋಲ್ಡೆಬಲ್ ಸ್ಮಾರ್ಟ್‌ಫೋನ್‌ಗಳನ್ನು ಕೂಡ ಪರಿಚಯಿಸಿ ಸೈ ಎನಿಸಿಕೊಂಡಿದೆ. ತನ್ನ ವೈವಿಧ್ಯಮಯ ಕ್ಯಾಮೆರಾ ಹಾಗೂ ಡಿಸ್‌ಪ್ಲೇ ವಿನ್ಯಾಸಕ್ಕೆ ಸ್ಯಾಮ್‌ಸಂಗ್ ಫೋನ್‌ಗಳು ಹೆಸರುವಾಸಿಯಾಗಿವೆ. ಇನ್ನು ಸ್ಯಾಮ್‌ಸಂಗ್ ಕಂಪೆನಿ ಇದೀಗ ಭಾರತದಲ್ಲಿ ಹೊಸ ಗ್ಯಾಲಕ್ಸಿ M13 ಮತ್ತು M13 5G ಫೋನ್ ಲಾಂಚ್ ಮಾಡಲು ದಿನಾಂಕ ನಿಗಧಿಪಡಿಸಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಹೊಸ ಗ್ಯಾಲಕ್ಸಿ M13 ಮತ್ತು ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ಗಳ ಲಾಂಚ್ ಡೇಟ್ ಇದೀಗ ಫಿಕ್ಸ್ ಆಗಿದ್ದು, ಇದೇ ಜುಲೈ 14ರಂದು ಬಿಡುಗಡೆಯಾಗಲಿದೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಅಮೆಜಾನ್ ಇಂಡಿಯಾ ಮೂಲಕ ಭಾರತದಲ್ಲಿ ಖರೀದಿಗೆ ಲಭ್ಯವಿರುತ್ತವೆ ಎಂದು ದೃಢಪಡಿಸಲಾಗಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳು ಈಗಾಗಲೇ ಆನ್‌ಲೈನ್‌ನಲ್ಲಿ ಲೀಕ್ ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಮತ್ತು ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್‌ಗಳ ವಿಶೇಷತೆಯನ್ನು ಅಮೆಜಾನ್ ಇಂಡಿಯಾದ ಮೈಕ್ರೋಸೈಟ್ ಬಹಿರಂಗಪಡಿಸಿದೆ. ಅದರಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಬಜೆಟ್ ಬೆಲೆಯಲ್ಲಿ ಬರಲಿವೆ ಎನ್ನಲಾಗಿದೆ. ಇದರಲ್ಲಿ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಎಕ್ಸಿನೋಸ್ 850 SoC ಪ್ರೊಸೆಸರ್ ಹೊಂದಿದೆ. ಆದರೆ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿರಲಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ನಿರೀಕ್ಷಿತ ಬೆಲೆ ಹಾಗೂ ವಿಶೇಷತೆ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಮುಂದೆ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದು 20:9 ರಚನೆಯ ಅನುಪಾತ ಹೊಂದಿದ್ದು, 80.2% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದಿರಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಹಾಗೂ 6GB RAM + 128GB ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ.

ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ ಸೆಲ್ಫಿ ಮತ್ತು ವೀಡಿಯೊಗಳಿಗಾಗಿ 5 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಇದು ಎಲ್ಇಡಿ ಫ್ಲ್ಯಾಷ್, ಪನೋರಮಾ, ಹೆಚ್‌ಡಿ ಆರ್ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್, ಬ್ಲೂಟೂತ್ 5.0, USB ಟೈಪ್-C 2.0 ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸೆಲೆರೊಮೀಟರ್, ಕಂಪಾಸ್, ವರ್ಚುವಲ್ ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ M13 5G ಸ್ಮಾರ್ಟ್‌ಫೋನ್ ಬೆಲೆ 15,000ರೂ ಮತ್ತು 20,000ರೂ. ನಡುವೆ ಇರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಜುಲೈ 14ರಂದು ಬಿಡುಗಡೆಯಾಗಲಿದ್ದು, ಬ್ಲೂ, ಬ್ರೌನ್, ಗ್ರೀನ್ ಕಲರ್ ಆಯ್ಕೆಗಳಲ್ಲಿ ಬರಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13
ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 1080 x 2408 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 82.5% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿದೆ. ಇನ್ನು ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಎಕ್ಸಿನೋಸ್ 850 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ 4GB RAM ಮತ್ತು 64GB ಹಾಗೂ 6GB RAM ಮತ್ತು 128GB ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾವೈಡ್ ಲೆನ್ಸ್ ಅನ್ನು ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಲ್ಇಡಿ ಫ್ಲ್ಯಾಷ್, ಪನೋರಮಾ, ಹೆಚ್‌ಡಿಆರ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, ಹಾಟ್‌ಸ್ಪಾಟ್, ಬ್ಲೂಟೂತ್ 5.0, USB ಟೈಪ್-C 2.0 ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸೆಲೆರೊಮೀಟರ್, ಕಂಪಾಸ್, ವರ್ಚುವಲ್ ಪ್ರಾಕ್ಸಿಮಿಟಿ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ M13 ಸ್ಮಾರ್ಟ್‌ಫೋನ್ ಭಾರತದಲ್ಲಿ 15,000ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications








