ಭಾರತದಲ್ಲಿ ಸ್ಯಾಮ್‌ಸಂಗ್‌ನಿಂದ ಹೊಸ ಸ್ಮಾರ್ಟ್‌ಟಿವಿ ಬಿಡುಗಡೆ! ಫೀಚರ್ಸ್‌ ಹೇಗಿದೆ ಗೊತ್ತಾ?

|

ದಕ್ಷಿಣ ಕೊರಿಯಾದ ಟೆಕ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ಭಿನ್ನ ಶ್ರೇಣಿಯ ಡಿವೈಸ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಸ್ಮಾರ್ಟ್‌ಫೋನ್‌ಗಳು ಮಾತ್ರವಲ್ಲದೆ ಸ್ಮಾರ್ಟ್‌ಟಿವಿಗಳನ್ನು ಕೂಡ ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ಹೊಸ 32 ಇಂಚಿನ HD ಟಿವಿಯನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಟಿವಿಯು ಮೂರು ಬದಿಯ ಬೆಜೆಲ್‌ ಲೆಸ್‌ ಡಿಸ್‌ಪ್ಲೇಯನ್ನು ಪಡೆದಿದೆ. ಇದರಿಂದ ವಿಡೀಯ ವಿಕ್ಷಣೆಯ ಅನುಭವ ಅತ್ಯುತ್ತಮವಾಗಿರಲಿದೆ ಎಂದು ಸ್ಯಾಮ್‌ಸಂಗ್‌ ಕಂಪೆನಿ ಹೇಳಿದೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ 32 ಇಂಚಿನ ಹೊಸ HD ಟಿವಿಯನ್ನು ಬಿಡುಗಡೆ ಮಾಡಿದೆ. ಇದು ಸುಧಾರಿತ ಸ್ಯಾಮ್‌ಸಂಗ್ ಟಿವಿ ಪ್ಲಸ್ ಸೇವೆಯೊಂದಿಗೆ ಬರಲಿದೆ. ಇನ್ನು ಸ್ಯಾಮ್‌ಸಂಗ್‌ ಟಿವಿ ಪ್ಲಸ್‌ ಸೇವೆಯ ಮೂಲಕ ನಿಮ್ಮ ಸ್ಮಾರ್ಟ್‌ಟಿವಿಯಲ್ಲಿ 55 ಲೈವ್ ಅಂತರಾಷ್ಟ್ರೀಯ ಮತ್ತು ಲೋಕಲ್‌ ಚಾನಲ್‌ಗಳಿಗೆ ಉಚಿತ ಪ್ರವೇಶವನ್ನು ನೀಡಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಟಿವಿಯ ವಿಶೇಷತೆ ಏನು? ಇದು ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌

ಸ್ಯಾಮ್‌ಸಂಗ್‌ 32 ಇಂಚಿನ ಹೆಚ್‌ಡಿ ಟಿವಿ ಹೊಸ ಮಾದರಿಯ ವಿನ್ಯಾಸವನ್ನು ಹೊಂದಿದೆ. ಇದು ಮೂರು ಕಡೆಗಳಲ್ಲಿ ಬೆಜೆಲ್‌ ಲೆಸ್‌ ಡಿಸ್‌ಪ್ಲೇ ಹೊಂದಿರುವುದು ಇದರ ಪ್ರಮುಖ ಹೈಲೈಟ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಟಿವಿ 32-ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1366x768 ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ 50Hz ರಿಫ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಟಿವಿಯು ಹೈ ಡೈನಾಮಿಕ್ ರೇಂಜ್‌ ಮತ್ತು ಹೈ ಕ್ವಾಲಿಟಿ ಇಮೇಜ್‌ ಅನ್ನು ನೀಡುತ್ತದೆ ಎಂದು ಸ್ಯಾಮ್‌ಸಂಗ್‌ ಕಂಪನಿ ಹೇಳಿಕೊಂಡಿದೆ.

ಸ್ಯಾಮ್‌ಸಂಗ್

ಇನ್ನು ಸ್ಯಾಮ್‌ಸಂಗ್ ಕಂಪೆನಿಯ ಈ ಹೊಸ ಸ್ಮಾರ್ಟ್‌ಟಿವಿಯು ಪರ್‌ಕಲರ್ ಟೆಕ್ನಾಲಜಿಯನ್ನು ಒಳಗೊಂಡಿದೆ. ಇದರಿಂದ ಡಾರ್ಕ್ ಮತ್ತು ಬ್ರೈಟ್‌ನೆಸ್‌ ಆಗಿರುವ ವಿಶ್ಯುಯಲ್‌ಗಳಲ್ಲಿಯು ಅತ್ಯುತ್ತಮವಾದ ಚಿತ್ರ ಗುಣಮಟ್ಟವನ್ನು ಕಾಣಬಹುದಾಗಿದೆ. ಇದಲ್ಲದೆ ಈ ಸ್ಮಾರ್ಟ್‌ಟಿವಿ ಅಲ್ಟ್ರಾ ಕ್ಲೀನ್ ವ್ಯೂ ಟೆಕ್ನಾಲಜಿಯನ್ನು ಒಳಗೊಂಡಿದೆ. ಇದು ಒರಿಜಿನಲ್‌ ಕಂಟೆಂಟ್‌ ಅನ್ನು ವಿಶ್ಲೇಷಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಈ ಸ್ಮಾರ್ಟ್‌ಟಿವಿ ಕಡಿಮೆ ಪ್ರಮಾಣದ ಶಬ್ದದೊಂದಿಗೆ ಉತ್ತಮ-ಗುಣಮಟ್ಟದ ಚಿತ್ರಗಳನ್ನು ನೀಡುತ್ತದೆ.

ಸ್ಮಾರ್ಟ್‌ಟಿವಿಯು

ಈ ಸ್ಮಾರ್ಟ್‌ಟಿವಿಯು ಡಾಲ್ಬಿ ಡಿಜಿಟಲ್ ಪ್ಲಸ್‌ನೊಂದಿಗೆ ಬರುತ್ತದೆ, ಟೈಜೆನ್ ಆಪರೇಟಿಂಗ್ ಸಿಸ್ಟಮ್ ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 3D ಸರೌಂಡ್ ಸೌಂಡ್ ಎಫೆಕ್ಟ್‌ಗಳನ್ನು ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ TV 2 HDMI ಪೋರ್ಟ್‌ಗಳು ಮತ್ತು 1 USB ಪೋರ್ಟ್‌ ಹೊಂದಿದೆ. ಇದಲ್ಲದೆ ಡಾಲ್ಬಿ ಡಿಜಿಟಲ್ ಪ್ಲಸ್ ಬೆಂಬಲಿಸುವ 20W ಸ್ಪೀಕರ್ ಯೂನಿಟ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಟಿವಿ PC ಮೋಡ್, ಗೇಮ್ ಮೋಡ್ ಮತ್ತು ಸ್ಕ್ರೀನ್ ಮಿರರಿಂಗ್ ಬೆಂಬಲವನ್ನು ಕೂಡ ಒಳಗೊಂಡಿದೆ.

ಸ್ಯಾಮ್‌ಸಂಗ್

ಸ್ಯಾಮ್‌ಸಂಗ್ ಕಂಪೆನಿಯ ಈ ಹೊಸ ಸ್ಮಾರ್ಟ್‌ಟಿವಿ ಭಾರತದಲ್ಲಿ 12,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದು ಸ್ಯಾಮ್‌ಸಂಗ್ ಕಂಪೆನಿಯ ಅಧಿಕೃತ ಇ-ಸ್ಟೋರ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಖರೀದಿಗೆ ಲಭ್ಯವಿದೆ.

ಸ್ಯಾಮ್‌ಸಂಗ್‌

ಇದಲ್ಲದೆ ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಇತ್ತಿಚಿಗೆ ಹೊಸ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಅನ್ನು ಒನ್‌ಯುಐ 3.1 ನೊಂದಿಗೆ ರನ್ ಮಾಡುತ್ತದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್-ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.

ಸ್ಯಾಮ್‌ಸಂಗ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ನ ನಾಕ್ಸ್ ಸೆಕ್ಯುರಿಟಿ ಅಂತರ್ನಿರ್ಮಿತವಾಗಿದೆ. ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, ವೈ-ಫೈ, ಬ್ಲೂಟೂತ್, ಮತ್ತು ಜಿಪಿಎಸ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಸಹ ಒಳಗೊಂಡಿದೆ.

Best Mobiles in India

English summary
Samsung has launched a new Smart TV in India:specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X