Home
ಸುದ್ದಿಜಾಲ

ಸದ್ಯದಲ್ಲೇ ಬರಲಿದೆ 155 ಗಂಟೆಗಳ ಆಡಿಯೊ ಪ್ಲೇಬ್ಯಾಕ್ ಟೈಂ ನೀಡುವ ಸ್ಮಾರ್ಟ್‌ಫೋನ್‌!

ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಕಂಪೆನಿ ತನ್ನ ಭಿನ್ನ ಮಾದರಿಯ ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ಗ್ಯಾಲಕ್ಸಿ ಎಂ, ಎ, ಎಸ್‌,ಎಫ್‌ ಸರಣಿಯಲ್ಲಿ ಹಲವು ಸ್ಮಾರ್ಟ್‌ಫೋನ್‌ಗಳ ಮೂಲಕ ಟ್ರೆಂಡ್‌ ಸೆಟ್‌ ಮಾಡಿದೆ. ಇದೀಗ ತನ್ನ ಗ್ಯಾಲಕ್ಸಿ ಎಂ ಸಿರೀಸ್‌ನಲ್ಲಿ ಹೊಸ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್‌ 17 ರಂದು ಬಿಡುಗಡೆ ಆಗೋದು ಪಕ್ಕಾ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಲಾಂಚ್‌ ಪೇಜ್‌ ಅಮೆಜಾನ್‌ನಲ್ಲಿ ಬಹಿರಂಗವಾಗಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ ಹಾಗೂ ಫೀಚರ್ಸ್‌ ವಿವರಗಳನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ಯದಲ್ಲೇ ಬರಲಿದೆ 155 ಗಂಟೆಗಳ ಆಡಿಯೊ ಪ್ಲೇಬ್ಯಾಕ್ ಟೈಂ ನೀಡುವ ಸ್ಮಾರ್ಟ್‌ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಡಿಸ್‌ಪ್ಲೇ ನಿರೀಕ್ಷೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 6.60 ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎನ್ನಲಾಗಿದೆ. ಈ ಡಿಸ್‌ಪ್ಲೇ 2408x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ 81.5% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಪ್ರೊಸೆಸರ್‌ ಯಾವುದು?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 5nm ಎಕ್ಸಿನೋಸ್‌ 1330 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಸದ್ಯದಲ್ಲೇ ಬರಲಿದೆ 155 ಗಂಟೆಗಳ ಆಡಿಯೊ ಪ್ಲೇಬ್ಯಾಕ್ ಟೈಂ ನೀಡುವ ಸ್ಮಾರ್ಟ್‌ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿರಲಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ಅಂದಾಜಿಸಲಾಗಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಲ್ಇಡಿ ಫ್ಲ್ಯಾಷ್, ಪನೋರಮಾ, ಹೆಚ್‌ಡಿಆರ್‌ ಅನ್ನು ನಿರೀಕ್ಷಿಸಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬ್ಯಾಟರಿ ಸಾಮರ್ಥ್ಯ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 155 ಗಂಟೆಗಳ ಆಡಿಯೊ ಪ್ಲೇಬ್ಯಾಕ್ ಟೈಂ ನೀಡಲಿದೆ. ಅಲ್ಲದೆ 58 ಗಂಟೆಗಳ ಟಾಕ್ ಟೈಮ್, 27 ಗಂಟೆಗಳ ಇಂಟರ್ನೆಟ್ ಬಳಕೆ ಅಥವಾ 25 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಟೈಂ ನೀಡಲಿದೆ ಎಂದು ಹೇಳಲಾಗಿದೆ.

ಸದ್ಯದಲ್ಲೇ ಬರಲಿದೆ 155 ಗಂಟೆಗಳ ಆಡಿಯೊ ಪ್ಲೇಬ್ಯಾಕ್ ಟೈಂ ನೀಡುವ ಸ್ಮಾರ್ಟ್‌ಫೋನ್‌!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಸ್ಮಾರ್ಟ್‌ಫೋನ್‌ ಬೆಲೆ ಅಧಿಕೃತವಾಗಿ ಘೋಷಿಸಿಲ್ಲ. ಆದರೆ ಅಮೆಜಾನ್‌ ಇಂಡಿಯಾದ ಮೈಕ್ರೋಸೈಟ್‌ ಪ್ರಕಾರ ಇದರ ಬೆಲೆ 13,499ರೂ ಅಥವಾ 13,999ರೂ ಆಗಿರಬಹುದು ಎಂದು ಸೂಚಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಇದೇ ಏಪ್ರಿಲ್‌ 17 ರಂದು ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ಸ್ಯಾಮ್‌ಸಂಗ್‌ ಕಂಪೆನಿ ಘೋಷಿಸಿದೆ.

ಇದಲ್ಲದೆ ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಏಪ್ರಿಲ್‌ ತಿಂಗಳ ಅಂತ್ಯಕ್ಕೆ ಮತ್ತೊಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಇದನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ F54 5G ಎಂದು ಹೆಸರಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ Exynos 1380 ಪ್ರೊಸೆಸರ್‌ ಒಳಗೊಂಡಿರಲಿದ್ದು, ಇತ್ತೀಚಿಗಿನ ಆಂಡ್ರಾಯ್ಡ್‌ 13 ಓಎಸ್ ಸಪೋರ್ಟ್‌ ಪಡೆದಿರಲಿದೆ. ಹಾಗೆಯೇ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿರಲಿದೆ ಎಂದು ಹೇಳಲಾಗ್ತಿದೆ.

Best Mobiles in India

English summary
Samsung has officially announced the launch date for Samsung Galaxy M14 5G in india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+