ಸ್ಯಾಮ್ಸಂಗ್ ಗ್ಯಾಲಕ್ಸಿ M21 ಮತ್ತು M31 ಫೋನ್‌ಗಳ ಬೆಲೆ ಏರಿಕೆ!
ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯ ಇತ್ತೀಚಿಗೆ ಬಜೆಟ್ ಬೆಲೆಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿದೆ. ಅವುಗಳಲ್ಲಿ M ಸರಣಿಯ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಆಕರ್ಷಿಸಿದೆ. ಆದರೆ ಇದೀಗ ಗ್ಯಾಲಕ್ಸಿ ಎಂ ಸರಣಿಯ ಗ್ಯಾಲಕ್ಸಿ M21 ಗ್ಯಾಲಕ್ಸಿ M31 ಈ ಎರಡು ಜನಪ್ರಿಯ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಏರಿಕೆ ಆಗಿದೆ.

ಆಫ್‌ಲೈನ್‌ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ M21 ಮತ್ತು ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್‌ಗಳ ಬೆಲೆಯಲ್ಲಿ 500ರೂ. ಹೆಚ್ಚಳ ಆಗಿದೆ. ಆದರೆ ಕಂಪನಿಯು ದರ ಹೆಚ್ಚಳಕ್ಕೆ ಕಾರಣ ಸ್ಪಷ್ಟಪಡಿಸಿಲ್ಲ. ದರ ಹೆಚ್ಚಳದ ವರದಿಯಂತೆ ಗ್ಯಾಲಕ್ಸಿ M21 ಆರಂಭೀಕ ವೇರಿಯಂಟ್ ಬೆಲೆಯು 14,499ರೂ. ಆಗಿದೆ ಹಾಗೂ ಗ್ಯಾಲಕ್ಸಿ M31 ಆರಂಭಿಕ ವೇರಿಯಂಟ್ ಬೆಲೆಯು 17,499ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ಹೇಗಿವೆ ಎಂಬುದನ್ನು ಮುಂದೆ ತಿಳಿಯೋಣ.

ಗ್ಯಾಲಕ್ಸಿ M21 ಡಿಸ್‌ಪ್ಲೇ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 1080x2340 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಇನ್‌ಫಿನಿಟಿ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದೆ. ಹಾಗೂ ಸ್ಕ್ರೀನ್ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ಸೌಲಭ್ಯವನ್ನು ಪಡೆದಿದೆ.

ಗ್ಯಾಲಕ್ಸಿ M21 ಪ್ರೊಸೆಸರ್
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ಸಂಸ್ಥೆಯ ಆಕ್ಟಾ ಕೋರ್ exynos 9611 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ Mali-G72 MP3 GPU ಪಡೆದಿದೆ. ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 4GB RAM + 64GB ಸ್ಟೋರೇಜ್ ಮತ್ತು 6GB RAM + 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ.

ಗ್ಯಾಲಕ್ಸಿ M21 ಕ್ಯಾಮೆರಾ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ ತ್ರಿವಳಿ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 48ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 5ಎಂಪಿ ಸೆನ್ಸಾರ್ ಬಲವನ್ನು ಪಡೆದಿದೆ. ಇದರೊಂದಿಗೆ ಸೆಲ್ಫಿಗಾಗಿ 20ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಇವೆ.

ಗ್ಯಾಲಕ್ಸಿ M21 ಬ್ಯಾಟರಿ
ಗ್ಯಾಲಕ್ಸಿ M21 ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 15W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ.

ಗ್ಯಾಲಕ್ಸಿ M31 ಡಿಸ್‌ಪ್ಲೇ
ಗ್ಯಾಲಕ್ಸಿ ಎಂ31 ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಇನ್‌ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ಸೂಪರ್ ಅಮೋಲ್ಡ್‌ಸ್ಕ್ರೀನ್ ಹೊಂದಿದ್ದು, 1080 ಸಾಮರ್ಥ್ಯದ ವಿಡಿಯೊ ವೀಕ್ಷಣೆಗೆ ಬೆಸ್ಟ್ ವೇದಿಕೆ ಆಗಿದೆ.

ಗ್ಯಾಲಕ್ಸಿ M31 ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ exynos 9611 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದಲ್ಲದೆ 6GB RAM ಮತ್ತು 64GB ಶೇಖರಣಾ ಸಾಮರ್ಥ್ಯ ಹಾಗೂ 6GB RAM ಮತ್ತು 128GB ಸಾಮರ್ಥ್ಯ ಹೊಂದಿರುವ ವೆರಿಯೆಂಟ್ ಆಯ್ಕೆಯಲ್ಲಿ ಈ ಸ್ಮಾರ್ಟ್‌ಫೋನ್ ಲಭ್ಯವಾಗಲಿದೆ.

ಗ್ಯಾಲಕ್ಸಿ M31 ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಅನ್ನು ಹೊಂದಿದೆ, ಮೂರು ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿವೆ.

ಗ್ಯಾಲಕ್ಸಿ M31 ಬ್ಯಾಟರಿ
ಸ್ಯಾಮ್‌ಸಂಗ್ ಗ್ಯಾಲಕ್ಸಿ m31 ಸ್ಮಾರ್ಟ್‌ಫೋನಿನ ಜೀವ ಮತ್ತು ಆಕರ್ಷಕ ಅಂಶ ಅಂದರೇ ಅದುವೇ ಇದರ ಬ್ಯಾಟರಿ. ಒಟ್ಟು 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಒಂದೇ ಚಾರ್ಜ್‌ನಲ್ಲಿ 26 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಹಾಗೂ 119 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಅನ್ನು ನೀಡಲಿದೆ.


Click it and Unblock the Notifications








