Home
ಸುದ್ದಿಜಾಲ

ಸದ್ಯದಲ್ಲೆ ಬರಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 5G: ಬಿಗ್ ಬ್ಯಾಟರಿ ಬ್ಯಾಕಪ್‌ ವಿಶೇಷ!

ಸ್ಯಾಮ್‌ಸಂಗ್‌ ಕಂಪೆನಿ ಹೊಸ ಸ್ಮಾರ್ಟ್‌ಫೋನ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಸುದ್ದಿಯಾಗಿದೆ. ಇದನ್ನು ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ಸ್ಮಾರ್ಟ್‌ಫೋನ್‌ ಎಂದು ಹೆಸರಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ M14 ಸ್ಮಾರ್ಟ್‌ಫೋನ್‌ಗೆ ಉತ್ತರಾಧಿಕಾರಿಯಾಗಲಿದೆ. ಇನ್ನು ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬಿಗ್‌ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿರಲಿದೆ.

ಹೌದು, ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 5G ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಜೊತೆಗೆ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಇನ್ನುಳಿದಂತೆ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ಯದಲ್ಲೆ ಬರಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 5G: ಬಿಗ್ ಬ್ಯಾಟರಿ ಬ್ಯಾಕಪ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ನಿರೀಕ್ಷಿತ ಫೀಚರ್ಸ್‌
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ ಸೂಪರ್ AMOLED ಡಿಸ್‌ಪ್ಲೇ ಆಗಿದ್ದು, ಇನ್ಫಿನಿಟಿ U ನಾಚ್ ವಿನ್ಯಾಸದಲ್ಲಿ ಬರಲಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಬೆಂಬಲದೊಂದಿಗೆ ಬರಲಿದ್ದು, 800 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಹೊಂದಿರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ಪ್ರೊಸೆಸರ್‌ ನಿರೀಕ್ಷೆ ಏನು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G99 SoC ಪ್ರೊಸೆಸರ್‌ನಲ್ಲಿ ಬರುವ ಸಾಧ್ಯತೆಯಿದೆ. ಇದು ಮಾಲಿ G57 MP2 GPU ಸಪೋರ್ಟ್‌ ಪಡೆದುಕೊಳ್ಳಲಿದ್ದು, ಆಂಡ್ರಾಯ್ಡ್‌ 13 ಔಟ್ ಆಫ್ ಬಾಕ್ಸ್ ಆಧಾರಿತ One UI 5ನಲ್ಲಿ ರನ್ ಆಗಲಿದೆ. ಹಾಗೆಯೇ 8GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಆಯ್ಕೆಯಲ್ಲಿ ಬರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ಕ್ಯಾಮೆರಾ ಸೆಟಪ್‌ ಏನಿರಬಹುದು?
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ.

ಸದ್ಯದಲ್ಲೆ ಬರಲಿದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 5G: ಬಿಗ್ ಬ್ಯಾಟರಿ ಬ್ಯಾಕಪ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬಿಗ್‌ ಬ್ಯಾಟರಿಯೊಂದಿಗೆ ಬರಲಿದೆ ಎಂದು ವರದಿಯಾಗಿದೆ. ಇದು 25W ವೈರ್ಡ್ ಚಾರ್ಜಿಂಗ್ ಬೆಂಬಲದೊಂದಿಗೆ ಬರುವ ಸಾಧ್ಯತೆಯಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್‌ ಗ್ಯಾಲಕ್ಸಿ M15 ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಬಿಡುಗಡೆ ಆಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಗಮನಿಸಿದರೆ 20,000ರೂ ಒಳಗಿನ ಬೆಲೆಯಲ್ಲಿ ದೊರೆಯಲಿದೆ ಎಂದು ಅಂದಾಜಿಸಲಾಗಿದೆ.

ಇನ್ನು ಇತ್ತೀಚಿಗೆ ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ A25 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಾಪ್‌ ಅನ್ನು ಒಳಗೊಂಡಿದೆ. ಇದು Exynos 1280 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.

Best Mobiles in India

English summary
Samsung is working on the Galaxy M15 smartphone: Report
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+