ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್ ಲಾಂಚ್!
ದಕ್ಷಿಣ ಕೋರಿಯಾದ ಸ್ಮಾರ್ಟ್‌ಫೋನ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಜನಪ್ರಿಯತೆ ಪಡೆದುಕೊಂಡಿದೆ. ಈಗಾಗಲೇ ತನ್ನ ಫೋಲ್ಡ್, ಗ್ಯಾಲಕ್ಸಿ ಎಸ್, ಗ್ಯಾಲಕ್ಸಿ ಎ ಮತ್ತು ಗ್ಯಾಲಕ್ಸಿ ಎಂ ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿದೆ. ಆದರೆ ಇದೀಗ ಸ್ಯಾಮ್‌ಸಂಗ್ ತನ್ನ ಗ್ಯಾಲಕ್ಸಿ 20 FE ಸ್ಮಾರ್ಟ್‌ಫೋನ್ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆ ತನ್ನ ಹೊಸ ಗ್ಯಾಲಕ್ಸಿ S20 FE 5G ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಗ್ಯಾಲಕ್ಸಿ S20FE 5G ಸ್ಮಾರ್ಟ್‌ಫೋನ್ 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಫುಲ್ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಪರೇಟಿಂಗ್ ಸಿಸ್ಟಮ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಸ್ಯಾಮ್‌ಸಂಗ್ ಗ್ಯಾಲಕ್ಸಿ S20 FE 5G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ V5.0, GPS, NFC, ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಸಹ ಹೊಂದಿದೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಹಾಲ್ ಸೆನ್ಸರ್ ಅನ್ನು ಹೊಂದಿದೆ. ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಏಕೈಕ 8GB RAM ಮತ್ತು 128GB ಇಂಟರ್ ಸ್ಟೊರೇಜ್ ಸಾಮರ್ಥ್ಯದ ಆಯ್ಕೆಗೆ 55,999 ರೂ. ಬಲೆಯನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ 8,000 ರೂಗಳ ತ್ವರಿತ ಕ್ಯಾಶ್‌ಬ್ಯಾಕ್ ಆಫರ್ ಸಹ ದೊರೆಯಲಿದೆ. ಇದರಿಂದ 47,999 ರೂ.ಗಳಿಗೆ ಈ ಸ್ಮಾರ್ಟ್‌ಫೋನ್ ಸಿಗಲಿದೆ. ಇದು ಪ್ರಸ್ತುತ ಕ್ಲೌಡ್ ರೆಡ್, ಕ್ಲೌಡ್ ಲ್ಯಾವೆಂಡರ್, ಕ್ಲೌಡ್ ಮಿಂಟ್, ಕ್ಲೌಡ್ ನೇವಿ ಮತ್ತು ಕ್ಲೌಡ್ ವೈಟ್ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕಂಪನಿಯ ಅಧಿಕೃತ ವೆಬ್‌ಸೈಟ್, ಸ್ಯಾಮ್‌ಸಂಗ್ ಎಕ್ಸ್‌ಕ್ಲೂಸಿವ್ ಸ್ಟೋರ್‌ಗಳು, ಅಮೆಜಾನ್ ಮತ್ತು ಪ್ರಮುಖ ರಿಟೇಲ್ ಸೇಲ್ ಸ್ಟೋರ್‌ಗಳ ಮೂಲಕ ಲಭ್ಯವಿದೆ.


Click it and Unblock the Notifications








