ಭಾರತದಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 ಸರಣಿ ಬಿಡುಗಡೆ!
ದಕ್ಷಿಣ ಕೊರಿಯಾ ಟೆಕ್ ದಿಗ್ಗಜ್ ಸ್ಯಾಮ್‌ಸಂಗ್ ಇತ್ತೀಚಿಗಷ್ಟೆ ಹೊಸದಾಗಿ ಗ್ಯಾಲಕ್ಸಿ ಟ್ಯಾಬ್ S7 ಸರಣಿಯನ್ನು ಅನಾವರಣ ಮಾಡಿದೆ. ಇದೀಗ ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 ಸರಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಗ್ಯಾಲಕ್ಸಿ ಟ್ಯಾಬ್ S7 ಸರಣಿಯು ಎರಡು ಮಾಡೆಲ್‌ಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ ಗ್ಯಾಲಕ್ಸಿ ಟ್ಯಾಬ್ S7 ಹಾಗೂ ಗ್ಯಾಲಕ್ಸಿ ಟ್ಯಾಬ್ S7 ಪ್ಲಸ್ ಆಗಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಗ್ಯಾಲಕ್ಸಿ ಟ್ಯಾಬ್ S7 ಮತ್ತು ಗ್ಯಾಲಕ್ಸಿ ಟ್ಯಾಬ್ S7 + ಡಿವೈಸ್‌ಗಳನ್ನು ಈಗ ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಟ್ಯಾಬ್‌ಗಳು ಡಾಲ್ಬಿ ಅಟ್ಮೋಸ್ ಸರೌಂಡ್ ಸೌಂಡ್ ಟೆಕ್ನಾಲಜಿಯನ್ನು ಒಳಗೊಂಡಿವೆ. ಇನ್ನು ಈ ಟ್ಯಾಬ್ಲೆಟ್‌ಗಳು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದಲ್ಲದೆ, ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 ಸರಣಿಯು ವೈ-ಫೈ ಒನ್ಲಿ ಮತ್ತು ವೈ-ಫೈ + 4G ಮತ್ತು ವೈ-ಫೈ + 5G ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬರುತ್ತದೆ. ಇನ್ನುಳಿದಂತೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿವೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಗ್ಯಾಲಕ್ಸಿ ಟ್ಯಾಬ್ S7 ಮತ್ತು S7 + ಡಿಸ್‌ಪ್ಲೇ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 2,560x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 11 ಇಂಚಿನ WQXGA LTPS TFT ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 274PP ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಹಾಗೆಯೇ ಗ್ಯಾಲಕ್ಸಿ ಟ್ಯಾಬ್ S7 + ಡಿವೈಸ್ 12.4-inch WQXGA+ ಸೂಪರ್ AMOLED ಡಿಸ್‌ಪ್ಲೇ ಹೊಂದಿದೆ.

ಪ್ರೊಸೆಸರ್ ಹೇಗಿದೆ
ಗ್ಯಾಲಕ್ಸಿ ಟ್ಯಾಬ್ S7 ಸರಣಿಯ ಟ್ಯಾಬ್‌ಗಳು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865+ SoC ಪ್ರೊಸೆಸರ್ ವೇಗವನ್ನು ಹೊಂದಿವೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿವೆ. ಇದರೊಂದಿಗೆ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಆತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಡ್ಯುಯಲ್ ಕ್ಯಾಮೆರಾ
ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ S7 ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ f/ 2.2 ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ . ಇನ್ನು ಈ ಕ್ಯಾಮೆರಾ ಸೆಟ್‌ಅಪ್ ಅನ್ನು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಜೋಡಿಸಲಾಗಿದೆ ಮತ್ತು ಆಟೋಫೋಕಸ್ ಬೆಂಬಲವನ್ನು ಹೊಂದಿದೆ. ಇದಲ್ಲದೆ, 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದನ್ನು ವೆಬ್‌ಕ್ಯಾಮ್‌ನಂತೆ ಬಳಸಬಹುದಾಗಿದೆ.

ಬ್ಯಾಟರಿ ಮತ್ತು ಇತರೆ
ಗ್ಯಾಲಕ್ಸಿ ಟ್ಯಾಬ್ S7 ಡಿವೈಸ್ 8,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಇದು ಒಂದೇ ಚಾರ್ಜ್‌ನಲ್ಲಿ ಮೂರು ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಅನ್ನು ನೀಡಲಿದೆ. ಹಾಗೆಯೇ ಗ್ಯಾಲಕ್ಸಿ ಟ್ಯಾಬ್ S7 ಪ್ಲಸ್ ಡಿವೈಸ್ 10,090mAh ಬ್ಯಾಟರಿ ಬ್ಯಾಳಿಕೆ ಹೊಂದಿದೆ. ಇದಲ್ಲದೆ ಈ ಟ್ಯಾಬ್ಲೆಟ್ ತ್ವರಿತ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಅಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ 6, ಬ್ಲೂಟೂತ್, GPS ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒದಗಿಸಿದೆ. ಜೊತೆಗೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಎಷ್ಟು?
ಗ್ಯಾಲಕ್ಸಿ ಟ್ಯಾಬ್ S7 ಡಿವೈಸ್ ಆರಂಭಿಕ ವೇರಿಯಂಟ್ ಬೆಲೆಯು 55,999ರೂ.ಗಳು ಆಗಿದೆ. ಹಾಗೆಯೇ ಗ್ಯಾಲಕ್ಸಿ ಟ್ಯಾಬ್ S7 ಪ್ಲಸ್ ಡಿವೈಸ್ 79,999ರೂ. ಪ್ರೈಸ್‌ಟ್ಯಾಗ್ ಅನ್ನು ಪಡೆದಿದೆ. ಇನ್ನು ಈ ಸರಣಿಯು ಮಿಸ್ಟಿಕ್ ಬ್ಲ್ಯಾಕ್, ಮಿಸ್ಟಿಕ್ ಕಂಚು ಮತ್ತು ಮಿಸ್ಟಿಕ್ ಸಿಲ್ವರ್ ಸೇರಿದಂತೆ ಮೂರು ಬಣ್ಣಗಳಲ್ಲಿ ಬರುತ್ತದೆ. ಗ್ರಾಹಕರು ರಿಲಯನ್ಸ್ ರಿಟೇಲ್, ಸ್ಯಾಮ್‌ಸಂಗ್ ಶಾಪ್, ಸ್ಯಾಮ್‌ಸಂಗ್ ಶಾಪ್, ಅಮೆಜಾನ್, ಫ್ಲಿಪ್‌ಕಾರ್ಟ್, ಮತ್ತು ಆಯ್ದ ಚಿಲ್ಲರೆ ಮಾರಾಟ ಮಳಿಗೆಗಳ ಮೂಲಕ ಸಾಧನವನ್ನು ಪಡೆಯಬಹುದು.


Click it and Unblock the Notifications








