ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಫೋನ್ ಲಾಂಚ್!..6,000mAh ಬ್ಯಾಟರಿ ಲೈಫ್‌!

|

ಜನಪ್ರಿಯ ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಬಹುನಿರೀಕ್ಷಿತ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್ ಅನ್ನು ದೇಶಿಯ ಮಾರುಕಟ್ಟೆಗೆ ಇಂದು (ಜುಲೈ.30) ಬಿಡುಗಡೆ ಮಾಡಿದೆ. ಗ್ಯಾಲಕ್ಸಿ M ಸರಣಿಯಲ್ಲಿ ಲಾಂಚ್ ಆಗಿರುವ ಈ ಸ್ಮಾರ್ಟ್‌ಫೋನ್ ಇತ್ತೀಚಿಗೆ ಬಿಡುಗಡೆ ಆಗಿರುವ ಬಹುತೇಕವಾಗಿ ಗ್ಯಾಲಕ್ಸಿ M31 ಫೋನ್‌ನಂತೆ ಕಂಡರು ಹಲವು ನೂತನ ಫೀಚರ್ಸ್‌ಗಳನ್ನು ಹೊಂದಿದೆ. ಮುಖ್ಯವಾಗಿ ಕ್ವಾಡ್‌ ಕ್ಯಾಮೆರಾ, ಬಿಗ್ ಬ್ಯಾಟರಿ ಬಾಳಿಕೆಯನ್ನು ಪಡೆದಿರುವುದು ಈ ಫೋನಿನ ಪ್ರಮುಖ ಹೈಲೈಟ್ಸ್‌ಗಳಾಗಿವೆ.

6,000mAh ಬ್ಯಾಟರಿ

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ಹೊಸದಾಗಿ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಅನ್ನು ಇಂದು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ ಇದೊಂದು ಬಜೆಟ್ ಸ್ಮಾರ್ಟ್‌ಫೋನ್ ಆಗಿದ್ದು, 6,000mAh ಬ್ಯಾಟರಿ, 64ಎಂಪಿ ರಿಯರ್ ಕ್ಯಾಮೆರಾ, sAMOLED ಮಾದರಿಯ ಡಿಸ್‌ಪ್ಲೇ ಗಳಂತಹ ಆಕರ್ಷಕ ಫೀಚರ್ಸ್‌ಗಳಿಂದ ಹೈಕ್ಲಾಸ್ ಲುಕ್‌ ಹೊಂದಿದೆ. ಇನ್ನು ಈ ಫೋನಿನ ಬೇಸ್ ವೇರಿಯಂಟ್ ಬೆಲೆಯು 19,499 ರೂ.ಆಗಿದ್ದು, ಇದೇ ಅಗಸ್ಟ 6 ರಂದು ಫಸ್ಟ್ ಸೇಲ್ ಆರಂಭವಾಗಲಿದೆ. ಹಾಗಾದರೆ ಸ್ಯಾಮ್‌ಸಂಗ್ ಗ್ಯಾಲಕ್ಸಿ M31s ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ಡಿಸೈನ್

ಡಿಸ್‌ಪ್ಲೇ ಡಿಸೈನ್

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ 1080x2340 ಪಿಕ್ಸಲ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಜೊತೆಗೆ sAMOLED ಡಿಸ್‌ಪ್ಲೇ ಹೊಂದಿದೆ. ಈ ಫೋನಿನ ಡಿಸ್‌ಪ್ಲೇ ಅನುಪಾತವು 19.5:9 ಆಗಿದ್ದು, 420ನಿಟ್ಸ್ ಸಾಮರ್ಥ್ಯದ ಬ್ರೈಟ್ನೆಸ್ ವ್ಯವಸ್ಥೆ ಪಡೆದಿದೆ. ಹಾಗೂ ಪಂಚ್ ಹೋಲ್ ಡಿಸ್‌ಪ್ಲೇ ಸೌಲಭ್ಯವನ್ನು ಪಡೆದಿದೆ.

ಪ್ರೊಸೆಸರ್‌ ದಕ್ಷತೆ

ಪ್ರೊಸೆಸರ್‌ ದಕ್ಷತೆ

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಸಂಸ್ಥೆಯ ಆಕ್ಟಾ ಕೋರ್ exynos 9611 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಎರಡು ವೇರಿಯಂಟ್ ಆಯ್ಕೆಗಳಿದ್ದು, ಅವುಗಳು ಕ್ರಮವಾಗಿ 6GB RAM ಮತ್ತು 128GB ಸ್ಟೋರೇಜ್ ಮತ್ತು 8GB RAM ಮತ್ತು 128GB ಸಾಮರ್ಥ್ಯ ಸ್ಟೋರೇಜ್ ಆಯ್ಕೆಗಳನ್ನು ಪಡೆದಿದೆ. ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಇದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಹಾಗೂ ನಾಲ್ಕನೇ ಕ್ಯಾಮೆರಾವು ಕ್ರಮವಾಗಿ 5ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 32ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಜೊತೆಗೆ ಎಡಿಟಿಂಗ್ ಆಯ್ಕೆಗಳು ಹಾಗೂ 480fps ಸ್ಲೋ ಮೋಷನ್ ರೆಕಾರ್ಡಿಂಗ್ ಆಯ್ಕೆಗಳಿವೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್‌ ಮೌಂಟ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಆಂಡ್ರಾಯ್ಡ್‌ 10 ಓಎಸ್‌, 4G VoLTE, ವೈಫೈ, ಬ್ಲೂಟತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಎಷ್ಟು ಮತ್ತು ಲಭ್ಯತೆ

ಬೆಲೆ ಎಷ್ಟು ಮತ್ತು ಲಭ್ಯತೆ

ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಗ್ಯಾಲಕ್ಸಿ M31s ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್ ಆಯ್ಕೆಗಳನ್ನು ಪಡೆದಿದೆ. 6GB RAM ಮತ್ತು 128GB ಸ್ಟೋರೇಜ್‌ನ ಬೇಸ್ ವೇರಿಯಂಟ್ ಬೆಲೆಯು 19,499 ರೂ. ಆಗಿದೆ. ಹಾಗೆಯೇ 8GB RAM ಮತ್ತು 128GB ವೇರಿಯಂಟ್ ಬೆಲೆಯು 21,499ರೂ.ಗಳು ಆಗಿದೆ. ಇನ್ನು ಇದೇ ಅಗಸ್ಟ್ 6 ರಂದು ಫಸ್ಟ್‌ ಸೇಲ್ ಶುರುವಾಗಲಿದೆ.

Best Mobiles in India

English summary
The Samsung Galaxy M31s is set to go on sale during Amazon’s Prime Day sale, which begins on August 6.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X