ಸದ್ಯದಲ್ಲೇ ಎಂಟ್ರಿ ಕೊಡಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A52 ಫೋನಿನ ಹೊಸ ಆವೃತ್ತಿ!

|

ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪನಿಯು 2021ರಲ್ಲಿ ಬಿಡುಗಡೆ ಮಾಡಿರುವ ಅತ್ಯುತ್ತಮ ಫೋನ್‌ಗಳ ಪೈಕಿ ಗ್ಯಾಲಕ್ಸಿ A51 ಸಹ ಒಂದಾಗಿದೆ. ಈ ಫೋನ್ 4G ಮತ್ತು 5G ವೇರಿಯಂಟ್‌ ಮಾಡೆಲ್‌ಗಳನ್ನು ಒಳಗೊಂಡಿದೆ. ಇದೀಗ ಕಂಪನಿಯು ಗ್ಯಾಲಕ್ಸಿ A52 ಸರಣಿಯಲ್ಲಿ ಮತ್ತೊಂದು ಆವೃತ್ತಿಯನ್ನು ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ತನ್ನ ಜನಪ್ರಿಯ ಗ್ಯಾಲಕ್ಸಿ A52 ಫೋನಿನ ಮುಂದುವರಿದ ಭಾಗವಾಗಿ ಮತ್ತೊಂದು ಆವೃತ್ತಿಯನ್ನು ಭಾರತದಲ್ಲಿ ಪರಿಚಯಿಸಲಿದೆ. ಹೊಸದಾಗಿ ಅನಾವರಣ ಆಗುವ ಫೋನ್ ಗ್ಯಾಲಕ್ಸಿ A52s 5G ಎಂದಿರಬಹುದು ಎಂದು ಹೇಳಲಾಗಿದೆ. ಹಾಗೆಯೇ ನೂತನ ಫೋನ್ ಸೂಪರ್ AMOLED ಡಿಸ್‌ಪ್ಲೇ ಹೊಂದಿರಲಿದ್ದು, ಸ್ನ್ಯಾಪ್‌ಡ್ರಾಗನ್ 750G ಪ್ರೊಸೆಸರ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರೊಂದಿಗೆ ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಇರಲಿದೆ. ಹಾಗಾದರೇ ಈ ವರ್ಷ ಬಿಡುಗಡೆ ಆಗಿರುವ ಗ್ಯಾಲಕ್ಸಿ A52 ಫೋನ್‌ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದ್ದು, 6.46 ಇಂಚಿನ ಸೂಪರ್ AMOLED ಇನ್‌ಫೀನಿಟಿ O ಡಿಸ್‌ಪ್ಲೇಯನ್ನು ಪಡೆದಿದೆ. ಇನ್ನು ಈ ಫೋನ್‌ 90Hz ಸಾಮರ್ಥ್ಯದ ಸ್ಕ್ರೀನ್‌ ರೀಫೇಶ್‌ ರೇಟ್‌ ಅನ್ನು ಪಡೆದಿದೆ.

ಪ್ರೊಸೆಸರ್ ಕಾರ್ಯ

ಪ್ರೊಸೆಸರ್ ಕಾರ್ಯ

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720G ಪ್ರೊಸೆಸರ್‌ ಬಲದಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಹಾಗೂ ಓನ್‌ UI 3.1.ಸಪೋರ್ಟ್‌ ಸಹ ಪಡೆದಿದೆ. ಜೊತೆಗೆ 6GB RAM + 128GB ಮತ್ತು 8GB RAM + 128GB ಆಯ್ಕೆಗಳಿರಲಿವೆ.

ಕ್ವಾಡ್ ಕ್ಯಾಮೆರಾ ರಚನೆ

ಕ್ವಾಡ್ ಕ್ಯಾಮೆರಾ ರಚನೆ

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ ಹಿಂಭಾಗದಲ್ಲಿ ಕ್ವಾಡ್-ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಸೆಕೆಂಡರಿ ಕ್ಯಾಮೆರಾವು 12 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಪಡೆದಿದೆ. ತೃತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಪಡೆದಿದೆ. ಇನ್ನು ಸೆಲ್ಫಿ ಕ್ಯಾಮೆರಾ 32 ಮೆಗಾಪಿಕ್ಸೆಲ್ ಸೆನ್ಸಾರ್ ನಲ್ಲಿ ಇದೆ.

ಬ್ಯಾಟರಿ ಪವರ್

ಬ್ಯಾಟರಿ ಪವರ್

ಗ್ಯಾಲಕ್ಸಿ A52 ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದ್ದು, ಜೊತೆಗೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಇತ್ತೀಚಿಗಿನ ಕನೆಕ್ಟಿವಿಟಿ ಆಯ್ಕೆಗಳಾದ 4 ಜಿ, ವೈ-ಫೈ, ಬ್ಲೂಟೂತ್, ಜಿಪಿಎಸ್ / ಎ-ಜಿಪಿಎಸ್ ಮತ್ತು ಯುಎಸ್ಬಿ ಟೈಪ್-ಸಿ ಪೋರ್ಟ್ ಸೇರಿವೆ. ಫೋನ್ ಇನ್-ಡಿಸ್ಪ್ಲೇ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

Best Mobiles in India

English summary
Galaxy A52 is one of the best Samsung smartphones released in 2021. The handset comes in two variants – 4G and 5G.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X