ಸ್ಯಾಮ್‌ಸಂಗ್‌ ಫ್ಲ್ಯಾಗ್‌ಶಿಪ್‌ ಫೋನ್‌ಗಳಿಗೆ ಇಂಥಾ ಡಿಸ್ಕೌಂಟ್‌ ಮತ್ತೆ ಸಿಗಲ್ಲ!

|

ಪ್ರಸ್ತುತ ಹಬ್ಬದ ಸೀಸನ್‌ ಪ್ರಾರಂಭವಾಗಿದ್ದಯ, ಇ ಕಾಮರ್ಸ್‌ ತಾಣಗಳ ಆಫರ್‌ಗಳ ಸುರಿಮಳೆಯನ್ನೇ ಸುರಿಸುತ್ತಿವೆ. ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಮೇಳವನ್ನು ಘೋಷಿಸಿದ್ದರೆ, ಅಮೆಜಾನ್‌ ಪ್ಲಾಟ್‌ಫಾರ್ಮ್ ಅಮೆಜಾನ್‌ ಗ್ರೇಟ್ ಇಂಡಿಯನ್‌ ಫೆಸ್ಟಿವಲ್ ಸೇಲ್‌ ಅನ್ನು ಆಯೋಜಿಸಿದೆ. ಜೊತೆಗೆ ಸ್ಯಾಮ್‌ಸಂಗ್‌ ಕಂಪನಿಯು ಈ ಎರಡು ಇ ಕಾಮರ್ಸ್‌ಗಳಲ್ಲಿ ಕೆಲವು ಆಯ್ದ ಸ್ಮಾರ್ಟ್‌ಫೋನ್‌ಗಳಿಗೆ ಬೊಂಬಾಟ್‌ ರಿಯಾಯಿತಿ ತಿಳಿಸಿದೆ.

ಜನಪ್ರಿಯ

ಹೌದು, ಸ್ಯಾಮ್‌ಸಂಗ್‌ ತನ್ನ ಕೆಲವು ಆಯ್ದ ಜನಪ್ರಿಯ ಫೋನ್‌ಗಳಿಗೆ ಫ್ಲಿಪ್‌ಕಾರ್ಟ್‌ ಹಾಗೂ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಆಕರ್ಷಕ ರಿಯಾಯಿತಿ ತಿಳಿಸಿದೆ. ಹಾಗೆಯೇ ಸ್ಯಾಮ್‌ಸಂಗ್‌ ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ NO MO' FOMO festival ಸೇಲ್‌ ಅನ್ನು ಪ್ರಾರಂಭಿಸಿದೆ. ಈ ಸೇಲ್‌ನಲ್ಲಿ ಸ್ಯಾಮ್‌ಸಂಗ್ ತನ್ನ ಕೆಲವು ಲ್ಯಾಪ್‌ಟಾಪ್‌, ಗ್ಯಾಲಕ್ಸಿ ಸ್ಮಾರ್ಟ್‌ಫೋನ್‌, ಟ್ಯಾಬ್ಲೆಟ್, ಆಕ್ಸಸರಿಸ್‌, ಧರಿಸಬಹುದಾದ ಡಿವೈಸ್‌ ಹಾಗೂ ಕೆಲವು ಡಿಜಿಟಲ್‌ ಅಪ್ಲಿಕೇಶನ್ ಗಳಿಗೆ ಅಧಿಕ ರಿಯಾಯಿತಿ ತಿಳಿಸಿದೆ.

ಕೊಡುಗೆಯನ್ನು

ಸ್ಯಾಮ್‌ಸಂಗ್ NO MO' FOMO festival ಸೇಲ್‌ ಸಮಯದಲ್ಲಿ, ಸ್ಯಾಮ್‌ಸಂಗ್ ಶಾಪ್ ಆಪ್‌ ಮೂಲಕ ಮೊದಲ ಬಾರಿ ಖರೀದಿ ಮಾಡುವ ಗ್ರಾಹಕರು 4,500 ರೂ. ಗಳ ವರೆಗೆ ಹೆಚ್ಚುವರಿ ಕೊಡುಗೆಯನ್ನು ಪಡೆಯುತ್ತಾರೆ. ಹಾಗೆಯೇ ಈ ಸೇಲ್‌ನಲ್ಲಿ ಖರೀದಿದಾರರು ಗ್ಯಾಲಕ್ಸಿ ಸ್ಮಾರ್ಟ್‌ಫೋನ್‌ಗಳಲ್ಲಿ 57% ವರೆಗೆ ರಿಯಾಯಿತಿಯನ್ನು ಪಡೆಯುತ್ತಾರೆ. ಮುಖ್ಯವಾಗಿ ಗ್ಯಾಲಕ್ಸಿ Z ಸರಣಿ, ಗ್ಯಾಲಕ್ಸಿ S ಸರಣಿ, ಗ್ಯಾಲಕ್ಸಿ A ಸರಣಿ, ಗ್ಯಾಲಕ್ಸಿ M ಮತ್ತು F ಸರಣಿಗಳು ಸೇರಿವೆ.

ಸರಣಿಯ

ಇದರೊಂದಿಗೆ ಯಾವುದೇ ಗ್ಯಾಲಕ್ಸಿ Z ಸರಣಿಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವವರು 5,199 ರೂ. ಬೆಲೆಯ ವಾಯರ್‌ಲೆಸ್‌ ಚಾರ್ಜರ್ ಡ್ಯುಯೊ ಸಾಧನವನ್ನು 499 ರೂ.ಗಳಿಗೆ ಪಡೆಯಬಹುದಾಗಿದೆ. ಇನ್ನು ಗ್ಯಾಲಕ್ಸಿ S ಸರಣಿ ಮತ್ತು ಗ್ಯಾಲಕ್ಸಿ A ಸರಣಿಯ ಖರೀದಿದಾರರು ಫೋನ್ ಕವರ್‌ಗಳಲ್ಲಿ ಶೇಕಡಾ 50% ರಿಯಾಯಿತಿ ಪಡೆಯಬಹುದು. ಹಾಗಾದರೇ ಸ್ಯಾಮ್‌ಸಂಗ್‌ ಗ್ಯಾಲಕ್ಸಿ S ಸರಣಿಯ ಫೋನ್‌ಗಳ ಫೀಚರ್ಸ್‌ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಅಲ್ಟ್ರಾ ಸ್ಮಾರ್ಟ್‌ಫೋನ್‌ 6.8 ಇಂಚಿನ ಎಡ್ಜ್‌ QHD ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದ್ದು, ಇದರೊಂದಿಗೆ ಐ ಕಂಫರ್ಟ್ ಶೀಲ್ಡ್‌ ಸೌಲಭ್ಯ ಇದೆ. ಇನ್ನು ಈ ಫೋನ್ ಆಕ್ಟಾ ಕೋರ್ 4 nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 12 GB RAM ಮತ್ತು ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕ ವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಸೆನ್ಸಾರ್

ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000 mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 45W ಫಾಸ್ಟ್‌ ಚಾರ್ಜಿಂಗ್ ಬೆಂಬಲ ಮತ್ತು 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಫೀಚರ್ಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S22 ಸ್ಮಾರ್ಟ್‌ಫೋನ್‌ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡೈನಾಮಿಕ್ AMOLED 2X ಡಿಸ್‌ಪ್ಲೇಯನ್ನು ಹೊಂದಿದ್ದು ಜೊತೆಗೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ ವಿಕ್ಟಸ್ + ನಿಂದ ರಕ್ಷಿಸಲಾಗಿದೆ. ಇನ್ನು ಈ ಫೋನ್ ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಬೆಂಬಲ ಹೊಂದಿದ್ದು, 8 GB RAM ಮತ್ತು 256 GB ವೇರಿಯಂಟ್ ಆಯ್ಕೆ ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಓಎಸ್‌ ಸಪೋರ್ಟ್‌ ಪಡೆದಿದೆ.

ಕ್ಯಾಮೆರಾ

ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಈ ಫೋನ್ 3,700mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 15W ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್‌ಗಾಗಿ ವೈರ್‌ಲೆಸ್ ಪವರ್‌ಶೇರ್ ಅನ್ನು ಸಹ ಬೆಂಬಲಿಸುತ್ತದೆ.

Best Mobiles in India

English summary
Samsung NO MO’ FOMO Festival Sale: Big Offers On Phones, Laptops.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X