Home
ಸುದ್ದಿಜಾಲ

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿವೆ ಸ್ಯಾಮ್‌ಸಂಗ್‌ನ ಮೂರು ಹೊಸ ಸ್ಮಾರ್ಟ್‌ಫೋನ್‌ಗಳು!

ಸ್ಯಾಮ್‌ಸಂಗ್‌ ಕಂಪೆನಿ ಭಾರತದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M23 5G, ಗ್ಯಾಲಕ್ಸಿ A04 ಮತ್ತು ಗ್ಯಾಲಕ್ಸಿ A04e ಫೋನ್‌ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಸದ್ಯದಲ್ಲೇ ಲಾಂಚ್‌ ಆಗಲಿದೆ ಎಂದು ವರದಿಯಾಗಿದೆ. ಈ ಫೋನ್‌ಗಳಿಗೆ ಸಂಬಂಧಿಸಿದ ಸಪೋರ್ಟ್‌ ಪೇಜ್‌ ಸ್ಯಾಮ್‌ಸಂಗ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ನಲ್ಲಿ ಲೈವ್ ಆಗಿವೆ. ಈ ಸ್ಮಾರ್ಟ್‌ಫೋನ್‌ಗಳು ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿವೆ.

ಸ್ಯಾಮ್‌ಸಂಗ್

ಹೌದು, ಸ್ಯಾಮ್‌ಸಂಗ್ ಕಂಪೆನಿ ಭಾರತದಲ್ಲಿ ಗ್ಯಾಲಕ್ಸಿ M23 5G, ಗ್ಯಾಲಕ್ಸಿ A04 ಮತ್ತು ಗ್ಯಾಲಕ್ಸಿ A04e ಫೋನ್‌ ಪರಿಚಯಿಸಲಿದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ಗಳು ಹೇಗಿರಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ. ಆದರೂ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆಗಳು ಜಾಗತಿಕ ಮಾರುಕಟ್ಟೆಯಲ್ಲಿನ ಫೋನ್‌ಗಳಿಗೆ ಸಮಾನಾಗಿರುವ ಸಾಧ್ಯತೆಯಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಹೊಸ ಮಾದರಿಯ ವಿನ್ಯಾಸದಲ್ಲಿ ಬರುವ ಸಾಧ್ಯತೆ ಕೂಡ ಇದೆ. ಹಾಗಾದ್ರೆ ಈ ಫೋನ್‌ಗಳ ವಿಶೇಷತೆ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M23 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M23 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M23 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಎಲ್‌ಸಿಡಿ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ನ ಸ್ಕ್ರೀನ್ ರಿಫ್ರೆಶ್ ರೇಟ್‌ ಬೆಂಬಲವನ್ನು ಪಡೆದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ವೇಗವನ್ನು ಹೊಂದಿರಲಿದ್ದು, ಆಂಡ್ರಾಯ್ಡ್‌ 12 ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ಮೂರನೆ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 25W ವೇಗದ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04e ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಪ್ಲಸ್‌ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹೆಲಿಯೋ G35 SoC ಪ್ರೊಸೆಸರ್‌ ವೇಗವನ್ನು ಪಡೆದಿದ್ದು, ಆಂಡ್ರಾಯ್ಡ್ 12-ಆಧಾರಿತ OneUI 4.1 ಔಟ್-ಆಫ್-ದಿ-ಬಾಕ್ಸ್‌ನಿಂದ ರನ್‌ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್‌ಗೆ ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04

ಸ್ಯಾಮ್‌ಸಂಗ್‌ ಗ್ಯಾಲಕ್ಸಿ A04 ಸ್ಮಾರ್ಟ್‌ಫೋನ್‌ 6.5 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಇದು ಸ್ಯಾಮ್‌ಸಂಗ್‌ ಎಕ್ಸಿನೋಸ್‌ 850 SoC ಪ್ರೊಸೆಸರ್‌ ವೇಗವನ್ನು ಪಡೆದಿದ್ದು, ಆಂಡ್ರಾಯ್ಡ್ 12-ಆಧಾರಿತ One UI 4.1 ಔಟ್-ಆಫ್-ದಿ-ಬಾಕ್ಸ್ ನಲ್ಲಿ ರನ್‌ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕೂಡ ಡ್ಯುಯಲ್‌ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

Best Mobiles in India

English summary
Samsung planning to launch three new smartphones in India soon: Report
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+