TRENDING ON ONEINDIA
-
ಪುಲ್ವಾಮಾ ದಾಳಿ: ಪ್ರಧಾನಿ ಅಧ್ಯಕ್ಷತೆಯಲ್ಲಿ ಇಂದು ಭದ್ರತಾ ಸಭೆ
-
ಆಕರ್ಷಕ ಬೆಲೆಗಳಲ್ಲಿ ಬಿಡುಗಡೆಯಾದ ಮಹೀಂದ್ರಾ ಎಕ್ಸ್ಯುವಿ300
-
ಕಡಿಮೆ ಮೆಮೊರಿ ಮತ್ತು ರ್ಯಾಮ್ ಇರುವ ಫೋನನ್ನು ಖರೀದಿಸಲೇಬಾರದು ಏಕೆ?
-
ಡಾಲಿ ಫಸ್ಟ್ ಲುಕ್: ಮತ್ತೆ ನಟರಾಕ್ಷಸನ ಆಗಮನ
-
ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ: ತಿಂಗಳಿಗೆ 3000 ಪಿಂಚಣಿ
-
ಪುರುಷರಲ್ಲಿ ಫಲವತ್ತತೆ ಹೆಚ್ಚಿಸಲು ಕೆಲವು ಸಲಹೆಗಳು
-
ಐಸಿಸಿ ವಿಶ್ವಕಪ್ ಕ್ರಿಕೆಟ್ 2019 ವೇಳಾಪಟ್ಟಿ ಪ್ರಕಟ
-
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಹಾಕಿ
ಸ್ಯಾಮ್ ಸಂಗ್ ಮಾರುಕಟ್ಟೆಯಲ್ಲಿ ಸಾಕಷ್ಟು ಹೊನತನಗಳನ್ನು ಸೃಷ್ಠಿಸುವುದಲ್ಲದೇ, ಆಪಲ್ ಅನ್ನು ಮೀರಿಸುವ ಮಾದರಿಯಲ್ಲಿ ಆಂಡ್ರಾಯ್ಡ್ ಬಳಕೆದಾರರಿಗೆ ಹೊಸ ಹೊಸ ಫೀಚರ್ ಗಳನ್ನು ನೀಡುತ್ತಿದೆ. ಇದೇ ಹಿನ್ನಲೆಯಲ್ಲಿ ಸದ್ಯ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಟಾಪ್ ಎಂಡ್ ಆಂಡ್ರಾಯ್ಡ್ ಸ್ಮಾರ್ಟ್ ಪೋನ್ ಗಳಾದ ಗ್ಯಾಲೆಕ್ಸಿ S9 ಮತ್ತು S9 ಪ್ಲಸ್ ನಲ್ಲಿ AR ಎಮೋಜಿಗಳನ್ನು ಬಳಕೆ ನೀಡಿದೆ.
ಸೌಥ್ ಕೋರಿಯಾ ಮೂಲದ ಟೆಕ್ ದೈತ್ಯ ಸ್ಯಾಮ್ ಸಂಗ್, ತನ್ನ ಗ್ಯಾಲೆಕ್ಸಿ S9 ಮತ್ತು S9 ಪ್ಲಸ್ ಸ್ಮಾರ್ಟ್ ಫೋನಿನಲ್ಲಿ ಬಳಕೆದಾರರ ಮುಖವನ್ನೇ ಹೊಲುವಂತಹ ಎಮೋಜಿಗಳನ್ನು ಬಳಕೆದಾರರು ರಚಿಸಿಕೊಳ್ಳಬಹುದ ಅವಕಾಶವನ್ನು ಮಾಡಿಕೊಟ್ಟಿದೆ. ಮೊದಲಿಗೆ ಸ್ಮಾರ್ಟ್ ಫೋನ್ ಬಿಡುಗಡೆಯಾದ ಸಂದರ್ಭದಲ್ಲಿ ಕೋರಿಯಾದಲ್ಲಿ ಮಾತ್ರವೇ ಲಭ್ಯವಿದ್ದ ಈ ಆಯ್ಕೆಯೂ ಈಗ ಭಾರತೀಯ ಬಳಕೆದಾರರಿಗೂ ದೊರೆಯುತ್ತಿದೆ.
ಭಾರತದಲ್ಲಿ ಗ್ಯಾಲೆಕ್ಸಿ S9 ಮತ್ತು S9 ಪ್ಲಸ್ AR ಎಮೋಜಿಗಳನ್ನು ಕ್ರಿಯೇಟ್ ಮಾಡಲು ಮುಂಭಾಗದ ಕ್ಯಾಮೆರಾವನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಅಲ್ಲದೇ ಇದಕ್ಕಾಗಿ ಮಿಕ್ಕಿ ಮೋಸ್, ಮಿನಿ ಮೋಸ್, ಡೋನಾಲ್ಡ್ ಡಕ್ ಗಳನ್ನು ನೀಡಿದೆ. ಇದಕ್ಕೆ ಬಳಕೆದಾರರು ತಮ್ಮ ಮುಖಗಳನ್ನು ಹಾಕಿಕೊಳ್ಳಬಹುದಾಗಿದೆ.

ಶಿಯೋಮಿ "ಎಂಐ 6ಎಕ್ಸ್" ಬಿಡುಗಡೆಗೆ ಇಂದು ಬೆಚ್ಚಿಬಿತ್ತು ವಿಶ್ವ ಮೊಬೈಲ್ ಮಾರುಕಟ್ಟೆ!!
ಇದಕ್ಕಾಗಿಯೇ ಮೈ ಎಮೋಜಿ ಎನ್ನುವ ಆಯ್ಕೆಯನ್ನು ನೀಡಿದ್ದು, ಇದು ಸೋಶಿಯಲ್ ಮೀಡಿಯಾಗಳಲ್ಲಿ ಚಾಟ್ ಮಾಡುವ ಸಂದರ್ಭದಲ್ಲಿ ಬಳಕೆ ಮಾಡಿಕೊಳ್ಳಲು ಅವಕಾಶವನ್ನು ಮಾಡಿಕೊಡಲಿದೆ. ಒಟ್ಟು 18 ರಿಯಾಕ್ಷನ್ ಗಳನ್ನು ಪಡೆದುಕೊಳ್ಳಬಹುದಾಗಿದೆ. ಒಟ್ಟು 18 ಕ್ಯಾರೆಕ್ಟರ್ ಗಳನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ.