Just In
- 2 hrs ago
ರೈಲ್ವೆ 'ಗ್ರೂಪ್ ಡಿ' ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ 'ವಿ ಟೆಲಿಕಾಂ'ನಿಂದ ಸಿಹಿಸುದ್ದಿ!
- 12 hrs ago
ಸ್ಯಾಮ್‌ಸಂಗ್ ಗ್ಯಾಲಕ್ಸಿ Z ಫೋಲ್ಡ್ 4 ಮತ್ತು ಗ್ಯಾಲಕ್ಸಿ Z ಫ್ಲಿಪ್ 4 ಫೋನ್ ಬಿಡುಗಡೆ!
- 16 hrs ago
ಭಾರತದಲ್ಲಿ ರಿಯಲ್ಮಿ ಟೆಕ್ಲೈಫ್ ಬಡ್ಸ್ T100 ಲಾಂಚ್ ಡೇಟ್ ಫಿಕ್ಸ್!
- 17 hrs ago
ಲಾಂಚ್ಗೆ ಸಜ್ಜಾಗಿದೆ 'ಮೊಟೊರೊಲಾ ರೇಜರ್'!..ಗ್ಯಾಲಕ್ಸಿ Z ಫೋಲ್ಡ್ 4ಗೆ ಟಾಂಗ್!
Don't Miss
- News
Breaking: ಬ್ಲಾಕ್ ಮ್ಯಾಜಿಕ್ ಟೀಕೆ; ಮೋದಿ ವಿರುದ್ಧ ರಾಹುಲ್ ಕಿಡಿ
- Finance
ವಿಐ App ಬಳಸಿ ರೈಲ್ವೆಯ ಗ್ರೂಪ್ ಡಿ ಪರೀಕ್ಷೆಗೆ ಸಿದ್ಧತೆ ಹೇಗೆ?
- Movies
ಮತ್ತೊಂದು ಹೊಸ ಸಿನಿಮಾ ನಿರ್ಮಾಣಕ್ಕೆ ಮುಂದಾದ ರಕ್ಷಿತ್ ಶೆಟ್ಟಿ
- Lifestyle
ಉಪ್ಪಿನಕಾಯಿ ರುಚಿಗ ಮಾತ್ರವಲ್ಲ ಆರೋಗ್ಯಕ್ಕೂ ತುಂಬಾ ಒಳ್ಳೆಯದು ಗೊತ್ತಾ!
- Automobiles
ಬೊಲೆರೊ ಮ್ಯಾಕ್ಸ್ ಪಿಕ್-ಅಪ್ ಸಿಟಿ 3000 ಬಿಡುಗಡೆ ಮಾಡಿದ ಮಹೀಂದ್ರಾ
- Sports
ಆ ಇಬ್ಬರು ಸ್ಟಾರ್ಗಳಿಗೆ ಭಾರತ ತಂಡದಲ್ಲಿ ಸ್ಥಾನ ನೀಡಿರುವುದಕ್ಕೆ ಜಯವರ್ಧನೆ ಕಳವಳ
- Travel
ಭಾರತದಲ್ಲಿಯ 10 ಪ್ರಸಿದ್ದ ಹನುಮಂತ ದೇವರ ದೇವಾಲಯಗಳು
- Education
CAT 2022 Preparation Tips : ಕ್ಯಾಟ್ ಪರೀಕ್ಷೆಗೆ ಸಿದ್ಧತೆ ನಡೆಸಲು ಸಲಹೆಗಳು ಇಲ್ಲಿವೆ
ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಹಾಕಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ A13 5G ಸ್ಮಾರ್ಟ್‌ಫೋನ್!
ದಕ್ಷಿಣ ಕೊರಿಯಾದ ಟೆಕ್ ದೈತ್ಯ ಸ್ಯಾಮ್‌ಸಂಗ್ ಕಂಪೆನಿ ತನ್ನ ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಗ್ಯಾಲಕ್ಸಿ M ಮತ್ತು ಗ್ಯಾಲಕ್ಸಿ A ಸರಣಿಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಅಷ್ಟೇ ಅಲ್ಲ ಗ್ಯಾಲಕ್ಸಿ ಫೊಲ್ಡ್ ಸ್ಮಾರ್ಟ್‌ಫೋನ್‌ಗಳ ಮೂಲಕವೂ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ಸ್ಮಾರ್ಟ್‌ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ A13 5G ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಹೌದು, ಸ್ಯಾಮ್‌ಸಂಗ್ ಕಂಪೆನಿ ಹೊಸ ಸ್ಯಾಮ್‌ಸಂಗ್ ಗ್ಯಾಲಕ್ಸಿ A13 ಫೋನ್ ಬಿಡುಗಡೆಗೆ ವೇದಿಕೆ ಸಿದ್ದಪಡಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕಳೆದ ವರ್ಷ ಜಾಗತಿಕವಾಗಿ ಬಿಡುಗಡೆಯಾದ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಉತ್ತರಾಧಿಕಾರಿಯಾಗಿದೆ. ಸದ್ಯ ಗ್ಯಾಲಕ್ಸಿ A13 ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ ಎನ್ನಲಾಗಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ವಿಶೇಷತೆ ಹೇಗಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ಮತ್ತು ಪ್ರೊಸೆಸರ್
ಸ್ಯಾಮ್‌ಸಂಗ್ ಗ್ಯಾಲಕ್ಸಿ A13 ಸ್ಮಾರ್ಟ್‌ಫೋನ್ 1080x2340 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.48 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಎಲ್‌ಸಿಡಿ ಡಿಸ್‌ಪ್ಲೇ ಆಗಿದ್ದು, ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿರಲಿದೆ ಎನ್ನಲಾಗಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM + 64GB, 6GB RAM + 128GB ಮತ್ತು 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಯನ್ನು ಹೊಂದಿರಲಿದೆ ಎನ್ನಲಾಗಿದೆ.

ಕ್ಯಾಮೆರಾ ಮತ್ತು ಬ್ಯಾಟರಿ
ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ಮೂರು ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಮತ್ತು ಡೆಪ್ತ್ ಸೆನ್ಸರ್‌ಗಳನ್ನು ಒಳಗೊಂಡಿರುತ್ತದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ ಎನ್ನಲಾಗಿದೆ.

ಇನ್ನು ಕಳೆದ ಬಾರಿ ಪರಿಚಯಿಸಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಆಗಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P35 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಒಂದು ಯುಐ ಕೋರ್ 2.5 ರೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM+64GB 4GBRAM+128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A12 ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM + 64GB ಇಂಟರ್ ಸ್ಟೋರೇಜ್ ರೂಪಾಂತರಕ್ಕೆ 12,999 ರೂ. ಹಾಗೂ 4GB RAM + 128GB ಸ್ಟೋರೇಜ್ ಆಯ್ಕೆಯನ್ನು ರೂ. 13,999. ಬೆಲೆಯನ್ನು ಹೊಂದಿದೆ. ಈ ಫೋನ್ ಕಪ್ಪು, ನೀಲಿ ಮತ್ತು ಬಿಳಿ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086